LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ದೊಡ್ಡಬಳ್ಳಾಪುರದ ಕ್ರೀಡಾಪ್ರತಿಭೆಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಕ್ರೀಡಾಪಟುಗಳು ಅತ್ಯಂತ ಪ್ರತಿಭಾನ್ವಿತರಾಗಿದ್ದು ರಾಜ್ಯ ಮತ್ತು ರಾಷ್ಟ್ರ ಕ್ರೀಡಾಕೂಟಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೆಸರನ್ನು ಪ್ರತಿನಿಧಿಸುವ ಸಾಮರ್ಥ್ಯ ಇದೆ. ನಮ್ಮ ಕ್ರೀಡಾಪಟುಗಳು ಅಭ್ಯಾಸ ನಡೆಸಲು ನಮ್ಮಲ್ಲಿ ಸಿಂಥೆಟಿಕ್ ಟ್ರ್ಯಾಕ್‍ನ ಅವಶ್ಯಕತೆ ಇದೆ ಮಕ್ಕಳು ಅಭ್ಯಾಸ ನಡೆಸಲು ತುಮಕೂರುಜಿಲ್ಲೆ ಅಥವಾ ಬೆಂಗಳೂರಿನ ಟ್ರ್ಯಾಕ್‍ನ ಮೇಲೆ ಅವಲಂಬಿತರಾಗಿದ್ದಾರೆ.

ಈ ಕುರಿತು ಸರ್ಕಾರ ಅಥವಾ ಸ್ಥಳೀಯ ಕ್ರೀಡಾ ಇಲಾಖೆಯು ಗಮನಹರಿಸಬೇಕಿದೆ ಎಂದು ತರಬೇತುದಾರ ಆನಂದ್ ಅಭಿಪ್ರಾಯ ಪಟ್ಟರು.ಮುಂದಿನ ಕ್ರೀಡಾ ಕೂಟದ ಬಗ್ಗೆ ಮಾಹಿತಿ ನೀಡಿದ ಅವರು ದೊಡ್ಡಬಳ್ಳಾಪುರ ತಾಲೂಕಿನ ಯುವ ಕ್ರೀಡಾಪಟುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು,

ಈ ಸಂಬಂಧ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಕ್ರೀಡಾ ಕ್ಲಬ್ ನ ತರಬೇತಿದಾರ ಆನಂದ್ ಮಾತನಾಡಿ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮಕ್ಕಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ.

ನಮ್ಮಲ್ಲಿ ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿದ್ದು ತರಬೇತಿಗೆ ಬೇಕಾಗುವ ಅಗತ್ಯ ಸೌಲಭ್ಯಗಳ ಕೊರತೆ ಸೂಕ್ತ ರೀತಿಯಲ್ಲಿ ತರಬೇತಿಗೆ ಅಗತ್ಯವಾದ ಸೌಲಭ್ಯಗಳು ಲಭ್ಯವಾದರೆ ಈ ಮಕ್ಕಳು ರಾಷ್ಟ್ರಮಟ್ಟದಲ್ಲಿ ದೊಡ್ಡ ಮಟ್ಟದ ಕ್ರೀಡೆಗಳಲ್ಲಿ ಗೆದ್ದು ನಮ್ಮ ತಾಲ್ಲೂಕಿನ ಕೀರ್ತಿ ಹೆಚ್ಚಿಸುವುದರಲ್ಲಿ ಸಂಶಯವಿಲ್ಲ ಎಂದರು.

ಮತ್ತೋರ್ವ ತರಬೇತುದಾರ ಸುನಿಲ್ ಮಾತನಾಡಿ ಕಳೆದ ಬಾರಿಯೂ ರಾಷ್ಟ್ರಮಟ್ಟದಲ್ಲಿ ನಮ್ಮ ತಾಲೂಕಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ಸ್ಪರ್ಧೆಯ ಅಂತಿಮ ಘಟ್ಟದ ಹಂತ ಫೈನಲ್ ವರೆಗೆ ತಲುಪಿದ್ದರು. ಈ ಬಾರಿ ಗೆಲುವು ಸಾಧಿಸಿ ನಮ್ಮ ತಾಲ್ಲೂಕಿಗೆ ಕೀರ್ತಿ ತರುವ ವಿಶ್ವಾಸ ಇದೆ, ಮಕ್ಕಳೊಂದಿಗೆ ಪೋಷಕರ ಪಾತ್ರ ತುಂಬಾ ದೊಡ್ಡದು ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಅವರ ಸಹಕಾರ ಶ್ಲಾಘನೀಯ ನಿರಂತರ ಅಭ್ಯಾಸ ಮತ್ತು ಮಕ್ಕಳ ಪರಿಶ್ರಮ ಈ ಭಾರಿ ಫಲಿಸಲಿದೆ ಎಂದರು.

ಯುವ ಕ್ರೀಡಾಪಟುಗಳು ಮಾತನಾಡಿ ತರಬೇತಿಯನ್ನು ಅತ್ಯುತ್ತಮವಾಗಿ ಪಡೆದಿದ್ದೇವೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಮೆಡಲ್ ಗಳಿಸಿದ್ದು ರಾಷ್ಟ್ರ ಮಟ್ಟದಲ್ಲಿ ನಮ್ಮ ಕೀರ್ತಿಪತಾಕೆಯನ್ನು ಹಾರಿಸಲು ನಿರ್ಧರಿಸಿದ್ದೇವೆ ಈ ಬಾರಿ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 20ಕ್ಕೂ ಅಧಿಕ ಯುವ ಕ್ರೀಡಾಪಟುಗಳು ಭಾಗವಹಿಸಲಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಪೋರ್ಟ್ಸ್ ಕ್ಲಬ್ ನ ತರಬೇತಿದಾರರು ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು