LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ, 23 ನೇ ಪ್ರಶಸ್ತಿ ಪ್ರದಾನ

ಈ ಬಾರಿ ಶ್ರೀರಾಘವೇಂದ್ರ ಚಿತ್ರವಾಣಿಯಿಂದ ಮರಣೋತ್ತರವಾಗಿ ನಿರ್ಮಾಪಕ ರಾಮು ಅವರಿಗೆಪ್ರಶಸ್ತಿ ನೀಡಲಾ ಗಿದ್ದು ಪತ್ನಿ ಮಾಲಾಶ್ರೀ ಸ್ವೀಕರಿಸಿದರು. ಪತ್ರಕರ್ತರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಮುರಳೀಧರ ಖಜಾನೆ ಅವರಿಗೆ ನೀಡಲಾಯಿತು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಬಿ.ಎನ್. ಸುಬ್ರಹ್ಮಣ್ಯ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸಂಸ್ಥೆಯ ಮೂಲಕ ಅನೇಕ ಗಣ್ಯರು ವಿವಿಧ ಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುತ್ತಿದ್ದು ಭಾರತಿ ವಿಷ್ಣುವರ್ಧನ್ ಅವರು ನಿರ್ದೇಶಕರಿಗೆ ನೀಡುವ ದಿ.ಆರ್ ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿಯನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ, ಡಾ||ರಾಜಕುಮಾರ್ ಅವರ ಕುಟುಂಬದಿಂದ ಗಾಯಕರಿಗೆ ನೀಡುವ ಪ್ರಶಸ್ತಿಯನ್ನು ಹೇಮಂತ್ ಅವರಿಗೆ,

ಎಂ.ಎಸ್.ರಾಮಯ್ಯ ಚಿತ್ರಾಲಯದಿಂದ ಪಟ್ಟಾಭಿರಾಮ್ ಅವರು ಸಂಗೀತ ನಿರ್ದೇಶಕರಿಗೆ ನೀಡುವ ಪ್ರಶಸ್ತಿಯನ್ನು "ಹೊಂದಿಸಿ ಬರೆಯಿರಿ" ಚಿತ್ರಕ್ಕಾಗಿ ಜೋಕೋಸ್ಟ ಅವರಿಗೆ, ಹಿರಿತೆರೆ, ಕಿರುತೆರೆ ಹಾಗೂ ರಂಗಭೂಮಿ ಕಲಾವಿದ ಬಿ.ಸುರೇಶ್ ಅವರು ಪ್ರಥಮ ಚಿತ್ರದ ನಿರ್ದೇಶಕರಿಗೆ ನೀಡುವ ಪ್ರಶಸ್ತಿಯನ್ನು "ಆಚಾರ್ & ಕೋ" ಚಿತ್ರದ ನಿರ್ದೇಶನಕ್ಕಾಗಿ ಸಿಂಧೂ ಶ್ರೀನಿವಾಸಮೂರ್ತಿ ಅವರಿಗೆ, ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ದಿ.ಕೆ.ವಿ.ಜಯರಾಂ ಸ್ಮರಣಾರ್ಥ ಅವರ ಪತ್ನಿ ನಿರ್ಮಾಪಕಿ ಮೀನಾಕ್ಷಿ ಜಯರಾಂ ಅವರು ಉತ್ತಮ ಕಥಾಲೇಖಕರಿಗೆ ನೀಡುವ ಪ್ರಶಸ್ತಿಯನ್ನು "ಸಪ್ತಸಾಗರದಾಚೆ ಎಲ್ಲೋ" ಚಿತ್ರಕ್ಕಾಗಿ ಹೇಮಂತ್ ರಾವ್ ಅವರಿಗೆ,

ಹಿರಿಯ ಚಿತ್ರಸಾಹಿತಿ ಹಾಗೂ ನಿರ್ದೇಶಕ ದಿ.ಹುಣಸೂರು ಕೃಷ್ಣಮೂರ್ತಿ ಅವರ ಸ್ಮರಣಾರ್ಥ ಅವರ ಮಗ ಎಸ್.ಕೆ ನರಹರಿ ಅವರು ಉತ್ತಮ ಸಂಭಾಷಣೆಗಾಗಿ ನೀಡುವ ಪ್ರಶಸ್ತಿಯನ್ನು "ವಿರಾಟಪುರದ ವಿರಾಗಿ" ಚಿತ್ರಕ್ಕಾಗಿ ಲಿಂಗದೇವರು ಹಾಗೂ ಶರಣು ಹುಲ್ಲೂರು ಅವರಿಗೆ ಹಾಗೂ ಪತ್ರಕರ್ತ ದಿ.ಸಿ.ಸೀತಾರಾಮ್ ಸ್ಮರಣಾರ್ಥ ಪೋಷಕನಟರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ನಟ ಸುಂದರರಾಜ್ ಅವರಿಗೆ, ನಟಿ ಡಾ||ಜಯಮಾಲ ಹೆಚ್ ಎಂ ರಾಮಚಂದ್ರ ಅವರು ನೀಡುವ ಪ್ರಶಸ್ತಿಯನ್ನು ಹಿರಿಯ ನಟಿ ದುಬೈ ಜಯಲಕ್ಷ್ಮಿ ಅವರಿಗೆ ಹಾಗೂ ಪತ್ರಕರ್ತ ವಿನಾಯಕರಾಮ್ ಅವರು ಹಿರಿಯ ಪತ್ರಕರ್ತ. ದಿ.ಪಿ.ಜಿ.ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಗೀತರಚನೆಕಾರಿಗೆ ನೀಡುವ ಪ್ರಶಸ್ತಿಯನ್ನು ನಟ ಡಾಲಿ ಧನಂಜಯ ಅವರಿಗೆ "ಟಗರು ಪಲ್ಯ" ಚಿತ್ರದ "ಸಂಬಂಧ ಅನ್ನೊದು ದೊಡ್ದು ಕನಾ" ಗೀತರಚನೆಗಾಗಿ ನೀಡಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು