LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಿಳಿಚುಕ್ಕಿ ಹಳ್ಳಿಹಕ್ಕಿ: ಕಂಟೆಂಟಿನ ಕಸುವಿಗೆ ಮನಸೋತು ಸಾಥ್ ಕೊಟ್ಟರು ಶ್ರೀಮುರುಳಿ!

ಮಹೇಶ್ ಗೌಡ ಅವರು ನಿರ್ದೇಶಿಸಿ, ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡು, ನಾಯಕನಾಗಿ ಅಭಿನಯಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ'. ಈಗಾಗಲೇ ಚಿತ್ರತಂಡ ಹಂಚಿಕೊಂಡಿರುವ ಒಂದಷ್ಟು ವಿಚಾರಗಳು, ಪೋಸ್ಟರ್, ಹಾಡುಗಳ ಮೂಲಕ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಅಕ್ಟೋಬರ್ ೨೪ರಂದು
ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಇದೇ ಹೊತ್ತಿನಲ್ಲಿ ಮತ್ತೊಂದು ಖುಷಿಯ ಸಂಗತಿಯನ್ನು ಚಿತ್ರತಂಡ ಹಂಚಿಕೊಂಡಿದೆ.

ವಿಟಿಲಿಗೋ ಎಂಬ ಸಮಸ್ಯೆಯ ಸುತ್ತ ರೂಪುಗೊಂಡಿರುವ ಈ ಸಿನಿಮಾದ ಕೆಲ ತುಣುಕುಗಳನ್ನು ಕಂಡು ಥ್ರಿಲ್ ಆಗಿರುವ ರೋರಿಂಗ್ ಸ್ಟಾರ್ ಶ್ರೀಮುರುಳಿ,
ಈ ಸಿನಿಮಾವನ್ನು ತಾವೇ ಅರ್ಪಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರುಳಿಯವರ ಈ ಬೆಂಬಲದಿಂದಾಗಿ ಬಿಡುಗಡೆಯ
ಹೊಸ್ತಿಲಲ್ಲಿರುವ ಚಿತ್ರತಂಡಕ್ಕೆ ಆನೆಬಲ ಬಂದAತಾಗಿದೆ. ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರದ ಬಿಡುಗಡೆಯ ತಯಾರಿ ಈಗ ಜೋರಾಗಿ ನಡೆಯುತ್ತಿದೆ. ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಇದರ ನಡುವಲ್ಲಿಯೇ ಶ್ರೀಮುರುಳಿ ಅವರ ಕಡೆಯಿಂದ ಇಂಥಾದ್ದೊಂದು ಸಿಹಿ ಸುದ್ದಿ ಸಿಕ್ಕಿದೆ. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಶ್ರೀಮುರುಳಿ ಒಂದು ಸಿನಿಮಾವನ್ನು ಪ್ರೆಸೆಂಟ್ ಮಾಡಿ ಬೆಂಬಲಿಸಲು ಮುಂದಾಗಿದ್ದಾರೆ.

ಹಾಗೆ ರೋರಿಂಗ್ ಸ್ಟಾರ್ ನಿರ್ಧಾರ ಕೈಗೊಳ್ಳಲು ಕಾರಣವಾಗಿರೋದು ಬಿಳಿಚುಕ್ಕಿ ಹಳ್ಳಿಹಕ್ಕಿಯ ಕಂಟೆಂಟಿನ ಕಸುವೆಂಬುದು ಅಸಲೀ ವಿಚಾರ. ಚಿತ್ರತಂಡದ ಕಡೆಯಿಂದ ಸಿನಿಮಾದ ಒಂದಷ್ಟು ತುಣುಕುಗಳನ್ನು ನೋಡಿರುವ ಶ್ರೀಮುರುಳಿ ಖುಷಿಗೊಂಡಿದ್ದಾರೆ. ಮಹೇಶ್ ಗೌಡ ಸೇರಿದಂತೆ ಒಂದಿಡೀ ಚಿತ್ರತಂಡವನ್ನು ಅಭಿನಂದಿಸಿರುವ ಅವರು, ಭಾರತೀಯ ಚಿತ್ರರಂಗದಲ್ಲಿಯೇ ಪ್ರಥಮ ಎಂಬಂಥಾ ಇಂಥಾ ಕಥಾ ವಸ್ತುವನ್ನು ಕನ್ನಡ ಚಿತ್ರದ ಮೂಲಕ ಮುಟ್ಟಿರುವುದಕ್ಕೆ, ಸ್ವತಃ
ವಿಟಿಲಿಗೋ ಸಮಸ್ಯೆ ಹೊಂದಿರುವ ಮಹೇಶ್ ಗೌಡ ಅವರೇ ನಾಯಕನಾಗಿ ನಟಿಸಿರುವುದಕ್ಕೆ ಅಭಿನಂದಿಸಿದ್ದಾರೆ. ಇಂಥಾ ಹಲವು ವಿಶೇಷತೆಗಳನ್ನು ಹೊಂದಿರುವ ಬಿಳಿಚುಕ್ಕಿ ಹಳ್ಳಿಹಕ್ಕಿಯ ಬಗ್ಗೆ ಬೆರಗಿಟ್ಟುಕೊಂಡೇ ಶ್ರೀಮುರುಳಿ ಪ್ರೆಸೆಂಟ್ ಮಾಡಲು ಮುಂದಾಗಿದ್ದಾರೆ. ಓರ್ವ ನಾಯಕ ನಟನಾಗಿ ಬ್ಯುಸಿಯಾಗಿರುವ
ಶ್ರೀಮುರುಳಿ ವಿಶಿಷ್ಟ ಕಥಾಹಂದರದ ಸಿನಿಮಾವೊಂದಕ್ಕೆ ಸಾಥ್ ಕೊಟ್ಟಿರುವುದು ನಿಜಕ್ಕೂ ಹೆಮ್ಮೆಯ ವಿಚಾರ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು