LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀನಿವಾಸ್ ಪ್ರಸಾದ್ ವಿಧಿವಶ ಹಿರಿಯ ರಾಜಕೀಯ ಮುತ್ಸದಿ ಇನ್ನಿಲ್ಲ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಹಿರಿಯ ಮುತ್ಸದಿ ಪ್ರಗತಿಪರ ಹೋರಾಟಗಾರ ಧೀಮಂತ ನಾಯಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ.

ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್.ಶ್ರೀನಿವಾಸ ಪ್ರಸಾದ್ ಅಳಿಯಂದಿರು: ದೇವರಾಜು ಐಆರ್‍ಎಸ್ ಅಧಿಕಾರಿ, ಹರ್ಷವರ್ಧನ್ ನಂಜನಗೂಡು ಮಾಜಿ ಶಾಸಕ, ಡಾ.ಎನ್.ಎಸ್. ಮೋಹನ್ (ಮೂಳೆ ಮತ್ತು ಕೀಲು ತಜ್ಷ) ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮೈಸೂರಿನ ಅಶೋಕಪುರಂ ಶಾಲಾ ಆವರಣದಲ್ಲಿ ಬೆಳಗ್ಗೆ 11.30ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದೆವು. ವೈದ್ಯರು ಅವರನ್ನು ಗುಣಪಡಿಸಲು ಶ್ರಮ ಪಟ್ಟಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನು ಅಗಲಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಿಧಿವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ಪ್ರಸಾದ್ ಹೇಳಿದರು.

ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಸ್ವಲ್ಪ ಚೇತರಿಕೆ ಕಂಡಿದ್ದರು. ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದರು. ರವಿವಾರದಿಂದ (ಏ.28) ಮಾತನಾಡಲು ಆಗುತ್ತಿರಲಿಲ್ಲ. ಈ ವೇಳೆ ಪೆನ್ನು ಪೇಪರ್ ಕೊಟ್ಟಿದ್ವಿ. ಆಗ ಪೇಪರ್‍ನಲ್ಲಿ ಅಂತ ಬರೆದಿದ್ದರು. ಎರಡು ಗುಟುಕು ಕಾಫಿ ಕುಡಿದರು. ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧನರಾದರು ಎಂದು ತಿಳಿಸಿದರು.

ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಅವರು ತಮ್ಮ ಜರ್ನಿಯಿಂದಲೇ ನಿವೃತ್ತಿ ತೆಗೆದುಕೊಳ್ಳುತ್ತಾರೆ ಅಂದುಕೊಂಡಿರಲಿಲ್ಲ.ಇದು ಬಹಳ ದುಃಖಕರವಾದ ವಿಷಯ. ಅವರಿಗೆ ಹೈಲಿ ಡಯಾಬಿಟಿಕ್ ಸಮಸ್ಯೆ ಇತ್ತು. 11 ವರ್ಷದ ಹಿಂದೆ ಅವರಿಗೆ ರಿನಲ್ ಟ್ರಾನ್ಸ್ ಪ್ಲಾಂಟ್ ಆಗಿತ್ತು ಎಂದರು.
ವಿ.ಶ್ರೀನಿವಾಸಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು.

ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಮೂಲತಃ ಮೈಸೂರಿನ ಅಶೋಕಪುರಂನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.1947 ಆ.6ರಂದು ಜನಿಸಿದ್ದ ಶ್ರೀನಿವಾಸ್ ಪ್ರಸಾದ್ 1974ರಲ್ಲಿ ರಾಜಕೀಯ ಪ್ರವೇಶ ಮಾಡಿ ಮೊದಲ ಉಪಚುನಾವಣೆಯಲ್ಲಿ ಸೋಲನುಭವಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು