LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಕೈಕಂರ್ಯಗಳಿಂದ ಸ್ವಸ್ಥ ಸಮಾಜ ನಿರ್ಮಾಣ: ಶಾಸಕ ಮುನಿರಾಜು

ಪೀಣ್ಯ ದಾಸರಹಳ್ಳಿ: ಭಕ್ತ ಗಣವನ್ನು ಒಳ್ಳೆಯ ಮಾರ್ಗದಲ್ಲಿ ಕರೆದೊಯ್ದು ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಧಾರ್ಮಿಕ ಕೈಕಂರ್ಯಗಳು ಸಹಕಾರಿಯಾಗಿವೆ. ಜನರ ಅಪೇಕ್ಷೆಯಂತೆ ಮತ್ತು ಭಗವಂತನ ಪ್ರೇರಣೆಯಂತೆ ಲೋಕಕಲ್ಯಾಣಕ್ಕಾಗಿ 2ನೇ ವರ್ಷದ ಶ್ರೀನಿವಾಸ ಕಲ್ಯಾಣ ಆಯೋಜಿಸಿದ್ದೇವೆ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.

ಬಾಗಲಗುಂಟೆ ಎಂ.ಇ.ಐ ಆಟದ ಮೈದಾನದಲ್ಲಿ ಶ್ರೀವಾರಿ ಫೌಂಡೇಶನ್ ಸಹಯೋಗದೊಂದಿಗೆ, ಸೂರಜ್ ಫೌಂಡೇಶನ್ ವತಿಯಿಂದ ಶಾಸಕ ಎಸ್. ಮುನಿರಾಜು ನೇತೃತ್ವದಲ್ಲಿ ಆಯೋಜಿಸಿದ್ದ ಅದ್ದೂರಿ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಮಾತನಾಡಿದರು.
'ಸದಾ ಲೌಕಿಕದಲ್ಲಿ ಕಳೆದುಹೋಗುವ ಜನತೆ ಸತ್ಸಂಗ, ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು, ದೇವರ ಆರಾಧನೆ, ಹೋಮ, ಹವನ ಧಾರ್ಮಿಕ ಆಚರಣೆ ಸಹಕಾರಿಯಾಗಿ ಸಮಾಜ ಸುಭಿಕ್ಷವಾಗುತ್ತದೆ' ಎಂದರು.

'ಶ್ರೀನಿವಾಸ ಕಲ್ಯಾಣ ನೆಪ ಮಾತ್ರ,ಲೋಕ ಕಲ್ಯಾಣವಾಗಲಿ, ಸಕಲ ಜೀವರಾಶಿಗೂ ಒಳಿತಗಾಲಿ ಎಂಬುದೇ ಶ್ರೀನಿವಾಸ ಕಲ್ಯಾಣೋತ್ಸವದ ಉದಾತ್ತ ಉದ್ದೇಶ. ಎಲ್ಲಾ ಶಾಸಕರು ಕೂಡ ಇದೇ ತರಹ ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಂಡರೆ ಕಾಲ-ಕಾಲಕ್ಕೆ ಮಳೆ ಬೆಳೆಯಾಗಿ ಜನರು ಸುಭಿಕ್ಷವಾಗಿರುತ್ತಾರೆ' ಎಂದು ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ಹಾರೈಸಿದರು.
'ಪ್ರತಿಫಲವನ್ನು ಅಪೇಕ್ಷಿಸದೆ ನಿಷ್ಠೆಯಿಂದ ಕಾಯಕ ಮಾಡುವವರಿಗೆ ದೇವರು ಸದಾ ಕಾಯುತ್ತಾನೆ.

ಆದುದರಿಂದ ಸಮಾಜಮುಖಿಯಾಗಿ ಇತರರಿಗೆ ಒಳ್ಳೆಯದನ್ನು ಬಯಸಬೇಕು' ಎಂದು ಸೂರಜ್ ಫೌಂಡೇಶನ್ ಅಧ್ಯಕ್ಷೆ ಸುಜಾತ ಎಸ್. ಮುನಿರಾಜು ತಿಳಿಸಿದರು.ಕಲ್ಯಾಣೋತ್ಸವದಲ್ಲಿ ತಿರುಪತಿ ಮಾದರಿಯಲ್ಲಿ ನಿರ್ಮಾಣವಾಗಿದ್ದ ಬೃಹತ್ ವೇದಿಕೆಯಲ್ಲಿ ಆಭರಣಗಳಿಂದ ಅಲಂಕೃತರಾಗಿ ವಿರಾಜಮಾನರಾಗಿದ್ದ ಭಗವಾನ್ ಶ್ರೀನಿವಾಸ ಹಾಗೂ ಶ್ರೀದೇವಿ ಮತ್ತು ಭೂದೇವಿಯರ ದೈವಿಕ ದೃಶ್ಯ ವೈಕುಂಠವನ್ನೇ ಧರೆಗಿಳಿಸಿದಂತಿತ್ತು.

ಅರ್ಚಕರು ಮಂತ್ರಗಳನ್ನು ಪಠಿಸುತ್ತಾ ಧಾರ್ಮಿಕ ವಿಧಿ ವಿಧಾನ, ಸೇವಾ ಕಾರ್ಯಗಳನ್ನು ನೆರವೇರಿಸಿದರು. ವೆಂಕಟೇಶ್ ಹಾಗೂ ತಂಡದವರು ಗೋವಿಂದನ ಕೀರ್ತನೆ, ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ ನೆರಿದಿದ್ದ ಭಕ್ತರನ್ನು .ಕಲ್ಯಾಣೋತ್ಸವದಲ್ಲಿ ಮಾಂಗಲ್ಯ ಧಾರಣೆ, ಮಂತ್ರಾಕ್ಷತೆ ನೆರವೇರಿತು.ಸುಮಾರು 20 ಸಾವಿರ ತಿರುಪತಿ ಲಡ್ಡು ಹಾಗೂ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ದಾಸರಹಳ್ಳಿ ಕ್ಷೇತ್ರದ ಭಾಜಪ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು