LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ತ್ವರಿತವಾಗಿ ಕ್ರೀಡಾ ಕಾಮಗಾರಿ ಪ್ರಾರಂಭಿಸಿ: ಶ್ರೀರೂಪ

ಚಾಮರಾಜನಗರ: ಮಲೈಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಕ್ರೀಡಾ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲು ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ವಹಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ವಿವಿಧ ಕ್ರೀಡಾ ಸೌಕರ್ಯಗಳನ್ನ ಒದಗಿಸಲಾಗುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವ ಈಜುಕೊಳ, ವಿವಿದ್ದೋದ್ದೇಶ ಒಳಾಂಗಣ ಕ್ರೀಡಾಂಗಣ, ವಿವಿಧ ಅಂಕಣ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಬಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.
ಯಳಂದೂರು ಕ್ರೀಡಾಂಗಣಕ್ಕೆ ನಿವೇಶನಕ್ಕಾಗಿ ಪ್ರತ್ಯೇಕ ತಂತ್ರಜ್ಞರ ಸಮಿತಿಯನ್ನ ರಚಿಸಿ ವರದಿಯನ್ನು ನೀಡಬೇಕು. ಚಾಮರಾಜನಗರದ ಕ್ರೀಡಾ ವಸತಿನಿಯಕ್ಕೆ ಕ್ರೀಡಾಪಟುಗಳ ಪ್ರವೇಶಾತಿ ಹೆಚ್ಚಿಸುವ ಸಂಬAಧ ಕ್ರಮವಹಿಸಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚಿಸಿದರು. ಕ್ರೀಡಾ ಮೂಲಭೂತ ಸೌಕರ್ಯಕ್ಕೆ ಮೀಸಲಿರುವ ಸ್ಥಳೀಯ ಸಂಸ್ಥೆಗಳ ಕ್ರೀಡಾ ನಿಧಿಯನ್ನು ಸಮಗ್ರವಾಗಿ ವಿನಿಯೋಗಿಸಲು ಸಭೆಯಲ್ಲಿ ತೀರ್ಮಾಸಲಾಯಿತು.ರಾಜ್ಯ ಸರ್ಕಾರದಿಂದ ಯುವ ಚೈತನ್ಯ ಯೋಜನೆಯಡಿಯಲ್ಲಿ ಇಲಾಖೆಯಲ್ಲಿ ನೋಂದಣಿಯಾಗಿರುವ ಜಿಲ್ಲೆಯ ಆರು ಯುವಕ ಕ್ರೀಡಾ ಸಂಘಗಳಾದ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಯುವಜನ ಸಂಘ ಕುದೇರು, ಉದಯ ಭೀಮ್ ಯುವಜನ ಸಂಘ, ಹುರುಳೇನಂಜನಪುರ, ಚಾಮರಾಜನಗರ ತಾಲ್ಲೂಕು, ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಸಂಘ, ಪಾಳ್ಯ, ಕೊಳ್ಳೇಗಾಲ ತಾಲ್ಲೂಕು, ವಿಜ್ಞಾನಿ ಡಾ.ಆರ್. ಅಂಬೇಡ್ಕರ್ ಯುವಜನ ಸಂಘ, ಗಣಿಗನೂರು, ಯಳಂದೂರು ತಾಲ್ಲೂಕು, ಜೈ ಭಗೀರಥ ಯುವಕರ ಸಂಘ, ಅಣ್ಣೂರುಕೇರಿ, ಗುಂಡ್ಲುಪೇಟೆ ತಾಲ್ಲೂಕು, ಭೋವಿಸತ್ವ ಯುವಜನ ಕಲಾ ಸಂಘ, ಮಂಗಲ ಗ್ರಾಮ, ಚಾಮರಾಜನಗರ ಆಯ್ಕೆಯಾಗಿದೆ.ಈ ಪೈಕಿ ಉದಯ ಭೀಮ್ ಯುವಜನ ಸಂಘ, ಹುರುಳೀನಂಜನಪುರ, ಚಾಮರಾಜನಗರ ತಾಲ್ಲೂಕು ಇವರಿಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಕ್ರೀಡಾ ಪರಿಕರಗಳನ್ನು ವಿತರಿಸಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ಡಿವೈಎಸ್‌ಪಿ ಸೋಮಣ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟೀಲ್, ಚಾಮರಾಜನಗರ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಅಧಿಕಾರಿ ಮಹೇಶ್, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು