LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

State Award 2020: ಪ್ರಜ್ವಲ್ ದೇವರಾಜ್, ಅಕ್ಷತಾ ಅತ್ಯುತ್ತಮ ನಟ-ನಟಿ ಪ್ರಶಸ್ತಿ

2020ನೇ ವರ್ಷ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಇತ್ತೀಚೆಗೆ 2019ನೇ ಸಾಲಿನ ರಾಜ್ಯ ಪ್ರಶಸ್ತಿ ಘೋಷಣೆಯಾಗಿತ್ತು. ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಿಚ್ಚ ಸುದೀಪ್‍ಗೆ ನೀಡಲಾಗಿತ್ತು. ಆದರೆ, ಈ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ಒಲ್ಲೆ ಎಂದಿದ್ದರು. ಈ ಬಗ್ಗೆ ವಾದ-ವಿವಾದಗಳು ನಡೆಯುತ್ತಿರುವಾಗಲೇ 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆಯಾಗಿದೆ.

2020ನೇ ಸಾಲಿನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪ್ರಜ್ವಲ್ ದೇವರಾಜ್ ಪಾಲಾಗಿದೆ. ಹಾಗೇ ಅತ್ಯುತ್ತಮ ನಟಿ ಪ್ರಶಸ್ತಿಗೆ ಅಕ್ಷತಾ ಪಾಂಡವಪುರ ಆಯ್ಕೆಯಾಗಿದ್ದಾರೆ. 'ಜಂಟಲ್‍ಮ್ಯಾನ್' ಸಿನಿಮಾದ ಅದ್ಭುತ ನಟನೆಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್‍ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಹಾಗೇ 'ಪಿಂಕಿ ಎಲ್ಲಿ?' ಸಿನಿಮಾ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರನ್ನು ಆಯ್ಕೆ ಮಾಡಲಾಗಿದೆ.
ಅಂದ್ಹಾಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಮುಂದಾಳತ್ವವನ್ನು ಬಿ.ಎಸ್. ಲಿಂಗದೇವರು ವಹಿಸಿಕೊಂಡಿದ್ದರು.

ಈ ಆಯ್ಕೆ ಸಮಿತಿ ಸುಮಾರು 66 ಸಿನಿಮಾಗಳನ್ನು ವೀಕ್ಷಣೆ ಮಾಡಿ ಹಲವು ವಿಭಾಗಗಳಿಗೆ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ 'ಪಿಂಕಿ ಎಲ್ಲಿ?', 'ವರ್ಣಪಟಲ', 'ಹರಿವ ನದಿಗೆ ಮೈಯೆಲ್ಲಾ ಕಾಲು' ಸಿನಿಮಾಗಳಿಗೆ ಮೂರು ಅತ್ಯುತ್ತಮ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪ್ರಮುಖ ಪ್ರಶಸ್ತಿಗಳ ಹೊರತಾಗಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗಿದೆ. ಒಟ್ಟು 28 ವಿಭಾಗಗಳಲ್ಲಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಆ ಎಲ್ಲಾ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು