LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯ ಬಿಜೆಪಿಯಲ್ಲಿ ಶುರು ಸಂಘಟನಾ ಪರ್ವ!

ಸಂಘಟನೆಗೆ ಒತ್ತು ನೀಡುತ್ತಿದ್ದಂತೆ ಬಣಗಳ ಉದಯ | ಮಾಜಿ ಸಿಎಂ ನಿವಾಸಕ್ಕೆ ದ್ವಿವೇದಿ ಭೇಟಿ, ಬೊಮ್ಮಾಯಿ ಶಕ್ತಿ ಪ್ರದರ್ಶನ- ಡಾ.ಜಿ.ವೈ. ಪದ್ಮ ನಾಗರಾಜು


ರಾಜ್ಯ ಬಿಜೆಪಿಯ ನೂತನ ಉಸ್ತುವಾರಿ ಹರೀಶ್ ದ್ವಿವೇದಿ ಅವರು ಮೊದಲ ಬಾರಿಗೆ ಇಲ್ಲಿಗೆ ಆಗಮಿಸಿದ್ದು, ಈಗಾಗಲೇ ಪದಾಧಿಕಾರಿಗಳ ಸಭೆ ಹಾಗೂ ಕೋರ್ ಕಮಿಟಿ ಸದಸ್ಯರ ಸಭಡಗಳನ್ನು ನಡೆಸಿದ್ದಾರೆ. ಒಂದು ದಿನದ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದಾರೆ. ಇದಾದ ಬಳಿಕ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ನಾಯಕರುಗಳ ನಿವಾಸಕ್ಕೂ ಭೇಟಿ ಕೊಡುತ್ತಿದ್ದಾರೆ. ಇದೆಲ್ಲಾ ಒಂದು ಕಡೆಗೆ ಪಕ್ಷಕ್ಕೆ ಬಲ ತುಂಬುತ್ತಿದ್ರೆ, ಇನ್ನೊಂದೆಡೆ ತೆರೆಮರೆಯಲ್ಲಿ ಬಣಗಳ ಉದಯ ಕೂಡ ಆಗುತ್ತಿದೆಯೇ? ಎಂಬ ಪ್ರಶ್ನೆ ಹುಟ್ಟುವಂತೆ ಮಾಡುವ ವಾತಾವರಣ ನಿರ್ಮಾಣವಾಗಿದೆ. ನಿನ್ನೆಯಷ್ಟೇ ಬಿಜೆಪಿ ಉಸ್ತುವಾರಿ ಹರೀಶ್ ದ್ವಿವೇದಿ, ಮಾಜಿ ಸಿಎಂ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದು, ಅಲ್ಲಿ ಪ್ರತ್ಯೇಕ ಬಣ ಉದಯವಾಯ್ತಾ? ಎಂಬ ಬೆಳವಣಿಗೆ ನಡೆದಿದೆ. ಬೆಂಗಳೂರಿನ ಆರ್‌ಟಿನಗರದಲ್ಲಿರುವ ಮಾಜಿ ಸಿಎಂ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಭೇಟಿ ನೀಡೊದ ಸಂದರ್ಭದಲ್ಲಿ ಬೊಮ್ಮಾಯಿ ಜೊತೆಗೆ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ್, ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನಪರಿಷತ್‌ನ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಉಪಸ್ಥಿತರಿದ್ದು ಇದು ಹೊಸ ಬಣವೇ? ಎಂಬ ಚರ್ಚೆಗಳು ಆರಂಭವಾಗಿದೆ.
ಒAದು ಕಡೆ ಈಗಾಗಲೇ ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಅಧ್ಯಕ್ಷ ಸ್ಥಾನದ ಅವಧಿ ಮುಗಿಯುವ ಹಂತಕ್ಕೆ ತಲುಪಿದ್ದು, ರಾಜ್ಯದಲ್ಲಿ ಪಕ್ಷಕ್ಕೆ ನೂತನ ಸಾರಥಿಯ ಆಗಮನವಾಗಬೇಕಿದೆ. ಈ ಹಿಂದೆಯೇ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಚಿವ ಮುರುಗೇಶ್ ನಿರಾಣಿ ಕಣ್ಣಿಟ್ಟಿದ್ರು. ಇತ್ತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ರಾಷ್ಟç ರಾಜಕಾರಣಕ್ಕಿಂತ ರಾಜ್ಯ ರಾಜಕಾರಣದ ಮೇಲೆ ಒಲವು ತೋರುತ್ತಿದ್ದಾರೆ ಎನ್ನಲಾಗಿದೆ.ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಎದುರಿಸಿದ ಬಿಜೆಪಿ, ನಿರೀಕ್ಷೆಗೆ ಮೀರಿದ ಸೋಲುಂಡಿದೆ. ಈಗ ಬೊಮ್ಮಾಯಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೇ ಅದು ಯಾವ ಸಂದೇಶ ರವಾನೆ ಮಾಡಿದಂತಾಗುತ್ತದೆ? ಎಂಬ ಮಾತುಗಳು ತೆರೆಮರೆಯಲ್ಲಿ ಚರ್ಚೆಯಾಗ ತೊಡಗಿದೆ. 
ಇದೇ ಕಾರಣಕ್ಕೆ, ನಿನ್ನೆ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಆಗಮನದ ಸಂದರ್ಭದಲ್ಲಿ ಮುರುಗೇಶ್ ನಿರಾಣಿ ಹಾಗೂ ಜಿ.ಎಂ.ಸಿದ್ದೇಶ್ವರ್  ಇಬ್ಬರು ಸಹ ಉಪಸ್ಥಿತರಿದ್ದು, ಒಂದು ವೇಳೆ ಹಾಲಿ ರಾಜ್ಯಾಧ್ಯಕ್ಷರ ಬದಲಾವಣೆ ಅಂದರೆ ನಮ್ಮನ್ನು ಪರಿಗಣಿಸಬಹುದು ಎಂದು ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗಿದೆ.ಈಗಾಗಲೇ ಪಕ್ಷದಲ್ಲಿ ಬಿ.ವೈ. ವಿಜಯೇಂದ್ರ ವಿರೋಧಿ ಬಣವೊಂದು ಕಾರ್ಯೋನ್ಮುಖ ಆಗಿದ್ದು, ಬೊಮ್ಮಾಯಿ ನೇತೃತ್ವದಲ್ಲಿ ಆ ಬಣ ಇದೆಯೇ? ಅಥವಾ ಬಸವರಾಜ ಬೊಮ್ಮಾಯಿ ಅವರದ್ದೇ ಪ್ರತ್ಯೇಕ ಬಣವಾ? ಎಂಬುದನ್ನು ಕಾದು ನೋಡಬೇಕು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST