LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ರಾಜ್ಯ-ರಾಷ್ಟ್ರ ಶಿಕ್ಷಣ ನೀತಿ ಪರ-ವಿರೋಧ ವಾಕ್ಸಮರ

ಬೆಳಗಾವಿ: ವಿಧಾನ ಪರಿಷತ್‍ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ಹಾಗೂ ರಾಜ್ಯ ಶಿಕ್ಷಣ ನೀತಿ (ಎಸ್‍ಇಪಿ) ವಿಷಯದ ಪ್ರಸ್ತಾಪ ಬಿಜೆಪಿ-ಕಾಂಗ್ರೆಸ್ ಸದಸ್ಯರ ಮಧ್ಯೆ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿತು.

ನಿಯಮ 330ರ ಅಡಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ದೇಶದಲ್ಲೇ ಏಕ ರೀತಿಯ ಶಿಕ್ಷಣದ ಧ್ಯೇಯೋದ್ದೇಶದಿಂದ ರೂಪಿಸಿರುವ ಎನ್‍ಇಪಿಯನ್ನು ರಾಜ್ಯ ಸರ್ಕಾರ ರಾಜಕೀಯ ಕಾರಣಗಳಿಗಾಗಿ ರದ್ದು ಮಾಡುತ್ತಿರುವುದು ಸಲ್ಲದು. ಸಿಬಿಎಸ್‍ಇ, ಐಸಿಎಸ್‍ಇ ಪಠ್ಯಕ್ರಮ ಅನುಸರಿಸುವ ಖಾಸಗಿ ಶಾಲೆಗಳು ಎನ್‍ಇಪಿ ಅಳವಡಿಸಿಕೊಳ್ಳುವಾಗ, ಒಂದು ಕೋಟಿಗೂ ಹೆಚ್ಚಿನ ಮಕ್ಕಳು ಪ್ರತ್ಯೇಕ ಪಠ್ಯಕ್ರಮ ಅನುಸರಿಸುವುದು ಸೂಕ್ತವಲ್ಲ.

ಇದರಿಂದ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಮಾಡಿದಂತಾಗುತ್ತದೆ ಎಂದಾಗ,ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, 2020ಕ್ಕಿಂತ ಮೊದಲು ಮಕ್ಕಳು ಉತ್ತಮವಾಗಿ ಓದಿಲ್ಲವೇ? ದೇಶ, ವಿದೇಶಗಳಲ್ಲಿ ಹೆಸರು ಮಾಡಿಲ್ಲವೇ? ರಾಜ್ಯ ಶಿಕ್ಷಣ ನೀತಿಯನ್ನು ಏಕೆ ಲಘುವಾಗಿ ಪರಿಗಣಿಸುವಿರಿ ಎಂದರು.

ತೇಜಸ್ವಿನಿ ಗೌಡ, ನವೀನ್‍ಕುಮಾರ್, ಎನ್.ರವಿಕುಮಾರ್, ಎಂ.ನಾಗರಾಜ್, ಯು.ಬಿ.ವೆಂಕಟೇಶ್, ಶಶೀಲ್ ನಮೋಶಿ, ಎಸ್.ವಿ.ಸಂಕನೂರ, ಡಿ.ಎಸ್.ಅರುಣ್, ಹಣಮಂತ ನಿರಾಣಿ, ಟಿ.ಎ.ಶರವಣ, ಛಲವಾದಿ ನಾರಾಯಣ ಸ್ವಾಮಿ, ಸುನೀಲ್ ವಲ್ಯಾಪುರೆ ಸೇರಿದಂತೆ 20ಕ್ಕೂ ಹೆಚ್ಚು ಸದಸ್ಯರು ಎರಡೂ ಶಿಕ್ಷಣ ನೀತಿಗಳ ಪರ-ವಿರುದ್ಧ ಅಭಿಪ್ರಾಯ ಮಂಡಿಸಿದರು.

ಜೆಡಿಎಸ್‍ನ ಎಸ್. ಎಲ್.ಭೋಜೇಗೌಡ, ಯಾವುದೇ ನೀತಿಯಾಗಲಿ ಪೂರ್ಣ ಪ್ರಮಾಣದ ಶಿಕ್ಷಕರು, ಸಿಬ್ಬಂದಿ ಒಳಗೊಂಡ ಸಮಗ್ರ ಶಿಕ್ಷಣ ನೀತಿ ರಾಜ್ಯಕ್ಕೆ ನೀಡಲಿ ಎಂದರು.ರಾಜ್ಯ ಶಿಕ್ಷಣ ನೀತಿಯನ್ನು ಬಲವಾಗಿ ಸಮರ್ಥಿಸಿಕೊಂಡ ಜೆಡಿಎಸ್‍ನ ಮರಿತಿಬ್ಬೇಗೌಡ, ಎನ್‍ಇಪಿ ಬಡವರು ಉನ್ನತ ಶಿಕ್ಷಣ ಪಡೆಯದಂತೆ ಮಾಡುತ್ತದೆ.

ಅವೈಜ್ಞಾನಿಕ ನೀತಿಯಿಂದಾಗಿ ಹಲವು ಕಾಲೇಜುಗಳು ಈಗಾಗಲೇ ಬಾಗಿಲು ಮುಚ್ಚಿವೆ ಎಂದು ಹೇಳಿದ್ದು ಬಿಜೆಪಿ ಸದಸ್ಯರನ್ನು ಕೆರಳಿಸಿತು. ಗದ್ದಲದ ಮಧ್ಯೆಯೇ ಎಲ್ಲರ ಮಾತನ್ನೂ ಆಲಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉತ್ತರ ನೀಡುವುದಾಗಿ ಹೇಳಿದರು. ಸಭಾಪತಿ ಸ್ಥಾನದಲ್ಲಿದ್ದ ಉಪ ಸಭಾಪತಿ ಕೆ.ಎಂ. ಪ್ರಾಣೇಶ್, ಒಂದೇ ವಿಷಯದ ಮೇಲೆ ಅರ್ಧದಿನ ನಡೆದ ಕಲಾಪವನ್ನು ಮರುದಿನಕ್ಕೆ ಮುಂದೂಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು