LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

2ನೇ ಹಂತದ ಮತದಾನ ಅಹಿತಕರ ಘಟನೆ ನಡೆಯದಂತೆ ಕ್ರಮ

ಬೆಂಗಳೂರು: 18 ನೇ ಲೋಕಸಭಾ ಚುನಾವಣೆಯ ಅಂಗವಾಗಿ 2024ರ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ ತಿಂಗಳ 7 ರಂದು ನಡೆಯುವ ಚುನಾವಣೆಗೆ ರಾಜ್ಯ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಚುನಾವಣೆ ನಡೆಸಲು ಸಜ್ಜಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ರವರು ತಿಳಿಸಿದ್ದಾರೆ. ಸುಮಾರು ಎರಡುವರೆ ಕೋಟಿಗೂ ಅಧಿಕ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

45695 ಪೊಲೀಸ್ ಸಿಬ್ಬಂದಿಯನ್ನು 28581 ಮತಗಟ್ಟೆಗಳಿಗೆ ಹಾಗು ಇತರೆ ಕರ್ತವ್ಯಗಳಿಗೆ/ ಗಸ್ತು ಪಡೆಯಾಗಿ ನಿಯೋಜಿಸಲು ರೂಪು ರೇಷ ಸಿದ್ದ ಗೊಳಿಸಿದೆ. ಗದಗ, ಹಾವೇರಿ, ಬೆಳಗಾವಿ ಸೇರಿದಂತೆ ಒಟ್ಟು 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾರರಿಂದ ಮತಚಲಾವಣೆ ನಡೆಯಲಿದೆ.

133 ಡಿವೈಎಸ್ಪಿ, 370 ಪೊಲೀಸ್ ಇನ್ಸ್ಪೆಕ್ಟರ್ ಗಳು, 988 ಪಿಎಸ್‍ಐ ಗಳು, 1841 ಎಎಸ್‍ಐ ಗಳು, 10042 ಮುಖ್ಯಪೇದೆಗಳು, 17221 ಪೊಲೀಸ್ ಪೇದೆಗಳು ಮತ್ತು15100 ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.ಇದಲ್ಲದೆ ಇನ್ನೂ ಹೆಚ್ಚುವರಿಯಾಗಿ 65 ಕೇಂದ್ರ ಮೀಸಲು ಪಡೆ ಪೊಲೀಸ್ ದಳವನ್ನು ಸಹ ಸುಗಮವಾಗಿ ಮತದಾರರು ಮತ ಚಲಾಯಿಸಲು ನೇಮಿಸಲಾಗಿದೆ.

ಒಟ್ಟು 28581 ಮತಗಟ್ಟೆಗಳನ್ನು ಎರಡು ಭಾಗವಾಗಿ ವಿಂಗಡಿಸಿ, ಅದರಲ್ಲಿ 4712 ಬೂತ್ ಗಳನ್ನು ನಿರ್ಣಾಯಕ ಬೂತ್ ಗಳನ್ನಾಗಿ ಮತ್ತು 23869 ಬೂತ್‍ಗಳನ್ನು ಸಾಮಾನ್ಯ ಬೂತ್‍ಗಳಾಗಿರುತವೆ. 1664 ಪೊಲೀಸ್ ವಲಯದ ಮೊಬೈಲ್‍ಗಳಾಗಿರುತ್ತವೆ. 348 ಪೊಲೀಸ್ ಪಡೆ ಕ್ಷಿಪ್ರ ಪಡೆಯಾಗಿ ಇರುತ್ತವೆ. ಇದಲ್ಲದೇ, 348 ಪೊಲೀಸ್ ಚೆಕ್ ಪೋಸ್ಟ್ಗಳನ್ನು ಸಹ ಹಾಕಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ರವರು "ಇಂದು ಸಂಜೆಗೆ" ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು