LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯವ್ಯಾಪಿ ಹೋರಾಟಕ್ಕೆ ಸಿದ್ಧತೆ

ನಾಳೆ ಜೆಡಿಎಸ್ ಕಚೇರಿಯಲ್ಲಿ ಶಾಸಕರು, ಮುಖಂಡರೊಂದಿಗೆ ಹೆಚ್ಡಿಕೆ ಸಭೆ


ಬೆಂಗಳರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ತನಿಖೆ ನಡೆಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.ತನಿಖೆಗೆ ಆಗ್ರಹಿಸಿ ನಿನ್ನೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು, ಆಯುಕ್ತರಿಂದ ತನಿಖೆಯ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದ್ದರಿಂದ ಧರಣಿ ಕೈಬಿಟ್ಟಿದ್ದರು. ತನಿಖೆಗೆ ಎರಡು ದಿನಗಳ ಕಾಲ ಗಡುವು ನೀಡಿದ್ದ ಅವರು ಗಡುವು ಮುಗಿಯುವುದಕ್ಕೂ ಮುನ್ನವೇ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ನಾಳೆ ಪಕ್ಷದ ರಾಜ್ಯ ಕಚೇರಿಯಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರ ಸಮಾಲೋಚನಾ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಸ್ಟಿಂಗ್ ಆಪರೇಷನ್ ಸಂಬAಧ ಇದುವರೆಗೂ ನಡೆದಿರುವ ಘಟನಾವಳಿಗಳನ್ನು ಸಂಕ್ಷಿಪ್ತವಾಗಿ ವಿವರಿಸಿ ರಾಜ್ಯಾದ್ಯಂತ ಹೋರಾಟ ನಡೆಸಲು ಕರೆ ನೀಡಲಿದ್ದಾರೆ. ರಾಜ್ಯದ ಎಲ್ಲಾ ತಾಲೂಕು ವಿಧಾನ ಸಭಾ ಕ್ಷೇತ್ರಗಳ ಕೇಂದ್ರ ಸ್ಥಾನದಲ್ಲಿ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಸ್ಟಿಂಗ್ ಆಪರೇಷನ್ ಮಾಡುತ್ತಿವುದು ಯಾರು? ತಮ್ಮ ಪಕ್ಷದ ಕಾರ್ಯಕರ್ತನನ್ನು ವಶಕ್ಕೆ ಪಡೆದು ಕಿರುಕುಳ ನೀಡುತ್ತಿರುವವರ ವಿರುದ್ಧ ಹಾಗೂ ಸ್ಟಿಂಗ್ ನಡೆಸುತ್ತಿರುವ ಪ್ರಮುಖರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST