LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪ್ರದೀಪ್ ಈಶ್ವರ್ ಮನೆಗೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ನಗರದ ಹೊರವಲಯದ ಗಣೇಶ್ ಪದ್ಮ ಲೇಔಟ್ ನಲ್ಲಿ ಇರುವ ಶಾಸಕ ಪ್ರದೀಪ್ ಈಶ್ವರ್ ರವರ ಮನೆಗೆ ನಿನ್ನೆ ರಾತ್ರಿ ಕಿಡಿಗೇಡಿಗಳು ಕಲ್ಲುಗಳನ್ನು ಎಸೆದಿದ್ದು ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ.

ನಿನ್ನೆ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದು ವಿಜೇತ ಅಭ್ಯರ್ಥಿ ಡಾಕ್ಟರ್ ಕೆ ಸುಧಾಕರ್ ರವರ ವಿಜಯೋತ್ಸವವೂ ಸಹ ನಡೆಯಿತು. ಗುರುತು ಸಿಗದ ಕೆಲವರು ರಾಷ್ಟ್ರೀಯ ಹೆದ್ದಾರಿ ಬಿಬಿ ರಸ್ತೆಗೆ ಅಂಟಿಕೊಂಡಿರುವಂತೆ ಕಂದವಾರ ಗ್ರಾಮದ ಸಮೀಪ ಇರುವ ಶಾಸಕ ಪ್ರದೀಪ್ ಈಶ್ವರ್ ರವರ ಮನೆಗೆ ಕಲ್ಲೆಸೆದು ಪರಾರಿಯಾಗಿದ್ದಾರೆ.

ಬೆಳಗ್ಗೆ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಈ ಸಂದರ್ಭದಲ್ಲಿ ಸಿಸಿ ಕ್ಯಾಮೆರಾ ಫುಟೇಜ್‍ಗಳನ್ನು ವೀಕ್ಷಿಸಿದರು. ಕಳೆದ ರಾತ್ರಿ ಕಲ್ಲೆಸೆತ ಪ್ರಕರಣ ನಡೆದ ಸಂದರ್ಭದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ ಬೆಳಗ್ಗೆ ಸದರಿ ಪ್ರಕರಣದ ಬಗ್ಗೆ ದೂರವಾಣಿ ಮೂಲಕ ಅವರನ್ನು...

ಸಂಪರ್ಕಿಸಿದಾಗ ನನಗೂ ಸಹ ಈ ವಿಷಯ ತಿಳಿದು ಬಂದಿತು ನಾನು ಈ ಬಗ್ಗೆ ಕೂಲಂಕುಶ ತನಿಕೆಗೆ ಪೋಲಿಸ್ ಇಲಾಖೆಗೆ ತಿಳಿಸಿದ್ದು ಬೆಂಗಳೂರಿನಿಂದ ಶ್ವಾನ ದಳ ಮತ್ತು ಇತರ ತಜ್ಞರು ಇಂದು ಬರುವರು.ಸದರಿ ಪ್ರಕರಣವನ್ನು ನಾನು ಮುಖ್ಯಮಂತ್ರಿಗಳಿಗೂ ಮತ್ತು ಗೃಹ ಮಂತ್ರಿಗಳ ಗಮನಕ್ಕೂ ತಂದಿರುತ್ತೇನೆ ಅವರು ಸಹ ಪ್ರಕರಣದ ತೀವ್ರತೆಯನ್ನು ಗಮನಿಸಿ ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ಮಾಡಿಸುವುದಾಗಿ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ನಡೆದು ಒಂದು ವರ್ಷವಾಯಿತು ಈ ವರ್ಷದ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ ಇನ್ನು ಲೋಕಸಭಾ ಚುನಾವಣಾ ಫಲಿತಾಂಶ ಬಂದ ದಿನವೇ ಈ ರೀತಿ ಕಿಡಿಗೇಡಿಗಳು ರಾಜಕೀಯ ಮತ್ಸರದಿಂದ ಈ ರೀತಿ ಕಲ್ಲೆಸೆದಿರುವುದು ತಮ್ಮ ಕ್ಷೇತ್ರದಲ್ಲಿ ರಾಜಕೀಯ ಮತ್ಸರದ ವಾತಾವರಣ ಉಂಟಾಗಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು