LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗೆಲುವಿಗೆ ರಣತಂತ್ರ ನಾಳೆ ರಾಜ್ಯಸಭೆ ನಾಲ್ಕು ಸ್ಥಾನಗಳಿಗೆ ಮತದಾನ

ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ನಾಲ್ಕು ಸ್ಥಾನಗಳ ಚುನಾವಣೆಗೆ ಸಂಬಂಧಪಟ್ಟಂತೆ ಗೆಲುವಿಗಾಗಿ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ತೀವ್ರ ತಂತ್ರಗಾರಿಕೆ ರೂಪಿಸುವಲ್ಲಿ ನಿರತವಾಗಿವೆ.

ನಾಳೆ ಬೆಳಿಗ್ಗೆ ಮತದಾನ ಆರಂಭ ವಾಗಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಮುಖಂಡರಿಗೆ ತಮ್ಮ ಪಕ್ಷದ ಶಾಸಕರು ಅಡ್ಡ ಮತದಾನ ಮಾಡಬಹುದು ಎಂಬ ಭೀತಿ ಎದುರಾಗಿದ್ದು, ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಪಕ್ಷದವರು ತೀವ್ರ ಕಸರತ್ತು ನಡೆಸಿದ್ದಾರೆ.

ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮೂವರ ಗೆಲುವಿಗಾಗಿ ಕಾಂಗ್ರೇಸ್‍ನಿಂದ ತೀವ್ರ ತಂತ್ರಗಾರಿಕೆ ಹೆಣೆಯಲಾಗುತ್ತಿದೆ.ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಗೆ ಆಗಮಿಸುವರ ಶಾಸಕರನ್ನು ನಗರದ ಹೊರ ವಲಯದಲ್ಲಿರುವ ಖಾಸಗಿ ಹೋಟೆಲ್‍ನಲ್ಲಿಯೇ ತಂಗಲು ವ್ಯವಸ್ಥೆ ಮಾಡಲಾಗಿದೆ.

ನಾಳೆ ಬೆಳಿಗ್ಗೆ ಶಾಸಕರು ನೇರವಾಗಿ ತಾವಿರುವ ಹೋಟೆಲ್‍ನಿಂದಲೇ ನೇರವಾಗಿ ಮತದಾನಕ್ಕೆ ಮತಚಲಾಯಿಸಲು ವಿಧಾನಸೌಧಕ್ಕೆ ಆಗಮಿಸಲು ವ್ಯವಸ್ಥೆ ಮಾಡಲಾಗಿದೆ.ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವತಿಯಿಂದ ಇಬ್ಬರು ಅಭ್ಯರ್ಥಿಗಳನ್ನುಕಣಕ್ಕಿಳಿಸಿದ್ದು, ಇಬ್ಬರನ್ನು ಗೆಲ್ಲಿಸಿಕೊಳ್ಳಲು ತೆರೆಮರೆಯಲ್ಲಿ ತಂತ್ರಗಾರಿಕೆ ರೂಪಿಸಲಾಗಿದೆ.

ತಮ್ಮ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಜೆಡಿಎಸ್‍ನವರು ಯಾವ ತಂತ್ರ ರೂಪಿಸುತ್ತಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದಿರುವ ಕುಪೇಂದ್ರರೆಡ್ಡಿ ಅವರ ಗೆಲುವಿಗಾಗಿ ಜೆಡಿಎಸ್ ವರಿಷ್ಠರು ಬಿಜೆಪಿ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ತಮ್ಮ ಅಭ್ಯರ್ಥಿ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು