LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬೀದಿ ಬದಿ ವ್ಯಾಪಾರಿಯಿಂದ ರಸ್ತೆ ಅತಿಕ್ರಮಣ ತೆರವಿಗೆ ಒತ್ತಾಯ

ಹೊಸಕೋಟೆ: ನಗರದ ಜಯಚಾಮರಾಜೇಂದ್ರ ವೃತ್ತ (ಹೂಮಂಡಿ ಸರ್ಕಲ್)ನಲ್ಲಿ ವ್ಯಾಪಾರಿ ಯೊಬ್ಬರು ಪ್ರತಿದಿನ ತೆಂಗಿನಕಾಯಿಗಳನ್ನು ರಸ್ತೆಯ ಮಧ್ಯಭಾಗದಲ್ಲಿಟ್ಟುಕೊಂಡು ಮಾರಾಟ ಮಾಡು ತ್ತಿದ್ದು ವಾಹನಗಳ ಸಂಚಾರಕ್ಕೆ, ಪಾದಚಾರಿಗಳ ಓಡಾಟಕ್ಕೆ ಅಡಚಣೆಯಾಗುತ್ತಿದೆ.

ಮಿಷನ್ ಆಸ್ಪತ್ರೆ ರಸ್ತೆಯಿಂದ ಬರುವ ಬಹಳಷ್ಟು ಬಿಎಂಟಿಸಿ ಬಸ್‍ಗಳು ಡಿಪೋ ಅಥವಾ ಬಿಎಂಟಿಸಿ ಬಸ್ ಟರ್ಮಿನಲ್‍ಗೆ ತೆರಳಲು ತಿರುವು ತೆಗೆದುಕೊ
ಳ್ಳಲು ಸಹ ಚಾಲಕರು ಹರಸಾಹಸ ಮಾಡಬೇಕಾ ಗಿದೆ. ಈ ಬಗ್ಗೆ ಸಾರ್ವ ಜನಿಕರೊಬ್ಬರು ವ್ಯಾಪಾರಿ ಯನ್ನು ಪ್ರಶ್ನಿಸಿದಾಗ, ನಾವು ತೆರಿಗೆ ಕಟ್ಟಿ ಜಾಗ
ಪಡೆದಿದ್ದೇವೆ ಯಾರೂ ಸಹ ಏನೂ ಮಾಡಲಾಗುವು ದಿಲ್ಲ ಎಂದು ಹೇಳಿದ್ದೇ ಅಲ್ಲದೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಸಾಮಾನ್ಯವಾಗಿದೆ.

ಇಷ್ಟೇ ಅಲ್ಲದೆ ಬಹಳಷ್ಟು ವಾಹನ ಸವಾರರು ಅಂಗಡಿಗಳಲ್ಲಿ ವ್ಯಾಪಾರ ಮಾಡಲು ವಾಹನಗಳನ್ನು ರಸ್ತೆಯಲ್ಲಿಯೇ ನಿಲುಗಡೆ ಮಾಡುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ.ಇದೇ ರೀತಿ ಎದುರುಗಡೆಯಿರುವ ಅಶ್ವಥಕಟ್ಟೆಯ ತಿರುವಿನಲ್ಲಿಯೂ ಸಹ ಹಣ್ಣು, ಎಲೆ ಮಾರಾಟದ ಗಾಡಿಗಳನ್ನು ಇಟ್ಟುಕೊಂಡಿರುವ ಕಾರಣ ವಾಹನ ಸವಾರರು, ಪಾದಚಾರಿಗಳು ತೀವ್ರಾದ ಸಮಸ್ಯೆ ಎದುರಿಸಬೇಕಾಗಿದೆ.

ಹೊಸಕೋಟೆ ಸಮಸ್ಯೆಗಳ ವಾಟ್ಸ್‍ಫ್ ಗ್ರೂಫ್‍ನಲ್ಲಿ ಈ ಬಗ್ಗೆ ದಾಖಲಿಸಿದರೂ ಸಹ ಇದುವರೆವಿಗೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳು, ಪೊಲೀಸ್ ಇಲಾಖೆಯವರು ನಗರದ ಕೆಇಬಿ ವೃತ್ತ, ಜೆ.ಸಿ.ವೃತ್ತದಲ್ಲಿ ರಸ್ತೆ ಅತಿಕ್ರಮಣ ಮಾಡಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ, ಪಾದಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕೆಂದು ನಿವೃತ್ತ ಸರಕಾರಿ ಅಧಿಕಾರಿ ಸೋಮಶೇಖರ್, ಸಾರ್ವಜನಿಕರು ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು