ಬೆಂಗಳೂರು: 15 ಸಾವಿರ ರೂಪಾಯಿ ನೀಡುವುದು ಸೇರಿದಂತೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ನಾಲ್ಕು ದಿನಗಳಿಂದ ಅನಿರ್ಧಿಷ್ಠಾವಧಿ ಮುಷ್ಕರ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ಹೋರಾಟವನ್ನು ಇಂದು ಮುಂದುವರಿಸಿದ್ದಾರೆ. ನಿನ್ನೆ ಮುಖ್ಯಮಂತ್ರಿಯವರ ಜತೆ ಮಾತುಕತೆ ನಡೆಸಿದರೂ ಸಹ ಯಾವುದೇ ಫಲಪ್ರದವಾಗಿಲ್ಲ. ಇಂದು ಮಧ್ಯಾಹ್ನ 2 ಗಂಟೆಗೆ ಸಂಘಟನೆಗೆ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ಹೋರಾಟದ ರೂಪುರೇಷೆಗಳನ್ನು ಮಾಹಿತಿ ನೀಡಲಿದ್ದಾರೆ.