LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಾರ್ಡ್ ಸಂಪೂರ್ಣ ಅಭಿವೃದ್ಧಿಗೆ ನಮ್ಮೊಂದಿಗೆ ಕೈಜೋಡಿಸಿ: ಎಸ್ ಟಿ ಎಸ್

ಕೆಂಗೇರಿ: ದೊಡ್ಡಬಿದರಕಲ್ಲು ವಾರ್ಡ್ ವ್ಯಾಪ್ತಿಯ ಎಲ್ಲಾ ಬಡಾವಣೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಹೊಂದುವಂತೆ ಮಾಡಲು ನಮ್ಮೊಂದಿಗೆ ಕೈಜೋಡಿಸಿ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.

ವಾರ್ಡ್ ವ್ಯಾಪ್ತಿಯ ರಾಕ್ ಲೈನ್ ಸ್ಟುಡಿಯೋ ಬಳಿ ವೇಣುಗೋಪಾಲ ನಗರದ ಬಡಾವಣೆಯ ಎಲ್ಲಾ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ದೊಡ್ಡಬಿದರಕಲ್ಲು ವಾರ್ಡ್ ಮತ್ತು ಹೇರೋಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಡಾವಣೆಯಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಯನ್ನು ನೆರವೇರಿಸಲಾಗಿದೆ ಶಾಶ್ವತವಾಗಿ ಕುಡಿಯುವ ನೀರಿನ ಸರಬರಾಜು ಮಾಡಲು ಈಗಾಗಲೇ ಬೃಹತ್ ಪ್ರಮಾಣದ ಪೈಪಗಳನ್ನು ಅಳವಡಿಸಿ ನೀರಿನ ಸಮಸ್ಯೆಯನ್ನು ಪರಿಹರಿಸಿ ನೀರು ಪೂರೈಸಲು ಅವಕಾಶ ಮಾಡಿ ಕೊಡಲಾಗಿದೆ.

ಹಾಗೆಯೇ ಎಲ್ಲಾ ರಸ್ತೆಗಳಿಗೆ ಕಾಂಕ್ರೀಟ್ ಮತ್ತು ಡಾಂಬರೀಕರಣ ಮಾಡಲಾಗಿದೆ ಉಳಿದಂತೆ ನಾಗರೀಕ ಮೂಲಭೂತ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿ ಮಾಡಲಾಗಿದೆ. ಅದರೆ ಅಭಿವೃದ್ಧಿ ಮಾಡಲು ಈ ಎರಡು ವಾರ್ಡುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಮಾಡಲು ಸಹಕಾರ ಮಾತ್ರ ನೀಡುತ್ತಿಲ್ಲ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ನನಗೆ ಸ್ಪಂದನೆ ಸಿಗುತ್ತಿಲ್ಲ ಆದರೂ ಸಹ ಅಭಿವೃದ್ಧಿ ಕಾಮಗಾರಿಗೆ ಯಾವುದೇ ರಾಜಕೀಯ ಮಾಡದೇ ಎಲ್ಲಾ ವಾರ್ಡುಗಳು ಮತ್ತು ಎಲ್ಲಾ ಬಡಾವಣೆಯನ್ನು ಯಾವುದೇ ತಾರತಮ್ಯ ಮಾಡದೇ ಸಂಪೂರ್ಣ ಅಭಿವೃದ್ಧಿ ಹೊಂದುವಂತೆ ಮಾಡಲು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೊಡ್ಡಬಿದರಕಲ್ಲು ವಾರ್ಡ್ ಮುಖಂಡ ಚನ್ನನಾಯಕನಪಾಳ್ಯದ ಪ್ರಸಾದ್ ಕುಮಾರ್ ಎಂ ಮಂಜುನಾಥ್ ವಾರ್ಡ್ ಕಮಿಟಿ ಸದಸ್ಯರು ಚನ್ನನಾಯಕನಪಾಳ್ಯ ಕೇಶವಮೂರ್ತಿ ವಾರ್ಡ್ ಅದ್ಯಕ್ಷರು ದೊಡ್ಡಬಿದರಕಲ್ಲು ಲಿಖಿತ್ ಗೌಡ ನಾರಾಯಣಸ್ವಾಮಿ ಬೈಲಪ್ಪ ಮಾಲತೇಶ್ ಹನುಮಯ್ಯ ಮಂಜಮ್ಮ ರಮಾ ಹನುಮೇಗೌಡ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು