LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೋದಿಯಿಂದ ಗಂಗೆ ಪೂಜೆ ನಾಮಪತ್ರ ಸಲ್ಲಿಕೆ

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಅವರು ಮೂರನೇ ಬಾರಿ ಸ್ಪರ್ಧಿಸುತ್ತಿದ್ದಾರೆ.

ಪ್ರತಿಬಾರಿ ನಾಮಪತ್ರ ಸಲ್ಲಿಸುವಾಗಲೂ ಪ್ರಧಾನಿ ಮೋದಿ ದಶಾಶ್ವಮೇಧ ಘಾಟ್‍ನಲ್ಲಿ ಗಂಗಾಪೂಜೆ ನೆರವೇರಿಸುತ್ತಾರೆ. ಈ ಬಾರಿಯೂ ಅಂಗರಕ್ಷಕರ ನಡುವೆ ಅವರು ನಿಧಾನವಾಗಿ ಆದರೆ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕುತ್ತಾ ದಶಾಶ್ವಮೇಧ ಘಾಟ್‍ನ ಮೆಟ್ಟಿಲುಗಳನ್ನು ಇಳಿಯುತ್ತಾ ಗಂಗೆಯ ತಟಕ್ಕೆ ಬಂದಿದ್ದಾರೆ.
ಪ್ರಧಾನಿಯವರ ಆಗಮನಕ್ಕಾಗಿ ಐವರು ಅರ್ಚಕರು ಕಾದು ನಿಂತಿದ್ದರು.

ಅಲ್ಲಿಗೆ ಬಂದಾಕ್ಷಣ ಪ್ರಧಾನ ಅರ್ಚಕರು ಮೋದಿಯವರ ಹೆಗಲ ಮೇಲೆ ಶಲ್ಯ ಹೊದಿಸಿ ಹಣೆಗೆ ತಿಲಕವನ್ನಿಟ್ಟರು. ಗಂಗೆ ಪೂಜೆ ಸಲ್ಲಿಸುವ ಮೊದಲು ಪ್ರಧಾನಿ ಮೋದಿ ಸೂರ್ಯನಿಗೆ ನಮಸ್ಕಾರ ಮಾಡಿ, ಅರ್ಚಕರ ನಿರ್ದೇಶನದ ಮೇರೆಗೆ ಪೂಜಾವಿಧಿಗಳು ನೇರವೇರಿಸಿದರು. ನಿನ್ನೆ ಸುಮಾರು 6 ಕಿಮೀ ಉದ್ದ ರೋಡ್ ಶೋನಲ್ಲಿ ಭಾಗಿಯಾಗಿದ್ದ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11.30 ಕ್ಕೆ ನಾಮಪತ್ರ ಸಲ್ಲಿಸಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರರ ಪ್ರಮುಖರು ಪ್ರಧಾನಿಯವರ ಜತೆಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು