LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಏಕಚಕ್ರಾಧಿಪತ್ಯದ ನಾಯಕತ್ವ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ: ಸುಧೀಂದ್ರ ಕುಲಕರ್ಣಿ

ಬೆಂಗಳೂರು: ಏಕಚಕ್ರಾಧಿಪತ್ಯದ ನಾಯಕತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತದೆಯೇ ಹೊರತು, ಪೂರಕವಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಎಚ್ಚರಿಸಿದರು.ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎಂಬ ವಿಶೇಷ ಉಪನ್ಯಾಸ ಹಾಗೂ ಸಂವಾದದಲ್ಲಿ ಅವರು ಮಾತನಾಡಿದರು.

ಇಂದಿರಾಗಾಂಧಿ ಕಾಲದಲ್ಲಿ ಏಕಚಕ್ರಧಿಪತ್ಯದ ಹಿನ್ನೆಲೆಯಲ್ಲಿ ಜಾರಿಯಾದ ತುರ್ತು ಪರಿಸ್ಥಿಯ ದಿನಗಳನ್ನು ನೆನಪು ಮಾಡಿದ ಅವರು, ಈಗಲೂ ಎಲ್ಲದಕ್ಕೂ ಮೋದಿ, ಮೋದಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಒಳ್ಳೆಯ ಲಕ್ಷಣವಲ್ಲ ಎಂದರು.ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಬಹಳ ಮುಖ್ಯವಾದದ್ದು. ಕಾಂಗ್ರೆಸ್‍ನಲ್ಲಿ ಹಿಂದೆ ಕಾಣೆಯಾಗಿದ್ದ ಆಂತರಿಕೆ ಪ್ರಜಾಪ್ರಭತ್ವ ಈಗ ಸ್ಪಲ್ಪ ಕಾಣಿಸುತ್ತಿದೆ. ಆದರೆ, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಮಾಯವಾಗಿದ್ದು, ಏಕವ್ಯಕ್ತಿ ನಿರ್ಧಾ ರಗಳೇ ಪ್ರಾಮುಖ್ಯತೆ ಪಡೆಯುತ್ತಿವೆ ಎಂದರು.

ವ್ಯಕ್ತಿ ಕೇಂದ್ರಿತ ರಾಜಕಾರಣ ಮಾರಕ: ವ್ಯಕ್ತಿ ಕೇಂದ್ರಿತ ಮತ್ತು ಪರಿವಾರ ಕೇಂದ್ರಿತ ರಾಜಕಾರಣ ಮತ್ತು ಭ್ರಷ್ಟಾಚಾರದಿಂದ ಕಾಂಗ್ರೆಸ್ ಜನ ಮಾನ್ನಣೆ ಕಳೆದುಕೊಂಡಿದೆ. ಅಲ್ಲದೆ, ಆತ್ಮವಲೋಕನ ಮಾಡಿಕೊಳ್ಳದಿರುವುದು ಕೂಡ ಕಾಂಗ್ರೆಸ್ ಅವನತಿಗೆ ಕಾರಣವಾಗಿದೆ ಎಂದರು.ಐಟಿ, ಇಡಿ, ಸಿಬಿಐ ಗಳನ್ನು ಈ ಹಿಂದಿನ ಸರ್ಕಾರಗಳು ಕೂಡ ದುರುಪಯೋಗ ಮಾಡಿಕೊಂಡಿವೆ. ಅದರೆ ಈಗ ಆ ದುರುಪಯೋಗ ಪ್ರಮಾಣ ಇಂದು ಹೆಚ್ಚಳವಾಗಿದೆ. ಜನರೇ ಆಯ್ಕೆ ಮಾಡಿದ ಸರ್ಕಾರದ ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕುವ ಹಂತಕ್ಕೆ ಇದು ಬಂದು ನಿಂತಿರುವುದು ಆತಂಕ ತಂದಿದೆ ಎಂದರು.

ಈ ಹಿಂದೆ ಕಾಂಗ್ರೆಸ್ ಮಾಡಿದ ಕೆಲಸವನ್ನೇ ಇಂದು ಬಿಜೆಪಿ ಮಾಡುತ್ತಿದೆ. ಎಲ್ಲವೂ ಹೀಗೆ ಮುಂದುವರಿಸಿದರೆ ಇಂದಿನ ಕಾಂಗ್ರೆಸ್ ಪರಿಸ್ಥಿತಿಯೇ ಬಿಜೆಪಿಗೂ ಬರುವ ದಿನಗಳು ದೂರವಿಲ್ಲ ಎಂದರು.ಹಿಂದೂ ಧರ್ಮ ದೂಷಿಸಿ ಪ್ರಯೋಜನವಿಲ್ಲ: ಹಿಂದು ಧರ್ಮವನ್ನು ಧೂಷಿಸಿಕೊಂಡು ತಿರುಗಿದರೆ ಯಾವ ಸುಧಾರಣೆಯನ್ನು ತರಲು ಆಗುವುದಿಲ್ಲ. ಹಿಂಧೂ ಧರ್ಮದಲ್ಲಿ ಒಂದಷ್ಟು ಸುಧಾರಣೆ ಆಗಬೇಕು ಎನ್ನುವುದರ ಬಗ್ಗೆ ಚರ್ಚೆಯಾಗಬೇಕು.

ನಿಜವಾದ ಹಿಂದು ಧರ್ಮ ಏನೆಂದು ತಿಳಿಸುವ ಕೆಲಸವಾಗಲಿ. ಇಂದಿನ ಪ್ರಮುಖ ರಾಜಕೀಯ ಪಕ್ಷವೊಂದು ಹಿಂದು ಧರ್ಮದ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ. ಆದ್ದರಿಂದ ಸ್ವಾಮೀಜಿಗಳು, ಧರ್ಮಗುರುಗಳು ನಿಜವಾದ ಹಿಂದು ಧರ್ಮವೇನೆಂದು ತಿಳಿಸುವ ಕೆಲಸವನ್ನು ಮಾಡಬೇಕು ಎಂದು ಕರೆ ನೀಡಿದರು.

ವಸ್ತು ನಿಷ್ಠತೆ ಕಡಿಮೆಯಾಗುತ್ತಿದೆ: ಹಿರಿಯ ಪತ್ರಕರ್ತ ಅನಂತ ಚಿನಿವಾರ ಮಾತನಾಡಿ, ಮಾಧ್ಯಮ ಮತ್ತು ಪತ್ರಕರ್ತರನ್ನು ಪ್ರತ್ಯೇಕವಾಗಿ ನೋಡಬೇಕಿದೆ. ಹೆಚ್ಚಿನ ಪತ್ರಕರ್ತರು ನಿಜವಾಗಿ ಮಾಡಬೇಕು ಎಂದುಕೊಂಡಿರುವ ಸುದ್ದಿ ಮತ್ತು ಮಾಡಬೇಕಾದ ಸುದ್ದಿಯ ನಡುವೆ ಇಬ್ಬಂದಿತನ ಅನುಭವಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಮಾಧ್ಯಮಗಳು ಸಾಗುತ್ತಿರುವ ದಿಕ್ಕು ಕೂಡ ಆತಂಕ ತಂದಿದೆ ಎಂದರು.

ಮಾಧ್ಯಮಗಳು ತಮ್ಮ ಇಷ್ಟದ, ಅನುಕೂಲ ಮತ್ತು ಯಾವುದೋ ಒತ್ತಡಕ್ಕೆ ಸಿಲುಕಿ ಬೇಕಾದ ದ್ರುವವನ್ನು ಆಯ್ಕೆ ಮಾಡಿಕೊಂಡು ಅತ್ತ ಸಾಗಿದೆ. ಇದರಿಂದ ವಸ್ತುನಿಷ್ಠ ಮಾಧ್ಯಮ ಕಡಿಮೆಯಾಗುತ್ತಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.ಎಲ್ಲಾ ಆಯಾಮಗಳಲ್ಲಿ ಚರ್ಚೆಯಾಗಲಿ: ಅಧ್ಯಕ್ಷತೆ ವಹಿಸಿದ್ದ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಚುನಾವಣೆಯ ಹೊತ್ತಿನಲ್ಲಿ ಮಾಧ್ಯಮದ ಜವಬ್ದಾರಿ ಮತ್ತು ಪತ್ರಕರ್ತರ ಹೊಣೆಗಾರಿಕೆ ಮಹತ್ವದ್ದಾಗಿದ್ದು, ಈ ಹಿನ್ನೆಲೆಯಲ್ಲಿಯೇ ಎಲ್ಲಾ ಆಯಾಮಗಳಲ್ಲಿ ವಿಚಾರಗಳು ಮಂಥನವಾಗಲಿ ಎಂದು ಈ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಬೆಂ.ನಗರ ವಿವಿ ಕುಲಪತಿ ಪ್ರೊ .ಲಿಂಗರಾಜ ಗಾಂಧಿ ಮಾತನಾಡಿ, ಚುನಾವಣೆಗಳು ಪ್ರಜಾಪ್ರ ಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತವೆ. ಈ ವಿಷಯದಲ್ಲಿ ಇನ್ನಷ್ಟು ಸುಧಾರಣೆಗಳನ್ನು ಜನರು ಮತ್ತು ಸಮಾಜ ನಿರೀಕ್ಷಿಸಿದೆ ಎಂದು ಹೇಳಿದರು.ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಎನ್.ನರಸಿಂಹಮೂರ್ತಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಸುಧೀಂಧ್ರ ಕುಲಕರ್ಣಿ ಮತ್ತು ಪ್ರೊ.ಲಿಂಗರಾಜ ಗಾಂಧಿ ಅವರನ್ನು ಸಂಘದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಬಿ.ವಿ.ಮಲ್ಲಿಕಾರ್ಜುನಯ್ಯ, ಡಿ.ಉಮಾಪತಿ, ಎಸ್.ಆರ್.ಆರಾಧ್ಯ, ವೆಂಕಟೇಶ್, ಮಾಲತಿ ಭಟ್, ಶಮಂತ, ಬಸವರಾಜು, ಎನ್.ರವಿಕುಮಾರ್, ಧ್ಯಾನ್ ಪೂಣಚ್ಚ, ಶ್ರೀಜಾ, ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು