LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು ಸನ್‍ರೈಸರ್ಸ್, ಆರ್‍ಸಿಬಿ ಪಂದ್ಯ ಸೋಲಿನ ಸರಪಳಿ ಕಳಚುವುದೇ?

ಹೈದರಾಬಾದ್: ‘ಶಕ್ತಿಶಾಲಿ’ ಬ್ಯಾಟಿಂಗ್ ಸರದಿಯ ಮೂಲಕ ಎದುರಾಳಿಗಳ ಬೌಲಿಂಗ್ ಅನ್ನು ನಿರ್ದಯವಾಗಿ ದಂಡಿಸುತ್ತಿರುವ ಸನ್‍ರೈಸರ್ಸ್ ಹೈದರಾಬಾದ್ ತಂಡ, ಅಂಕಪಟ್ಟಿಯ ತಳದಲ್ಲಿರುವ ರಾಯಲ್ ಚಾಲೆಂಜರ್ ಬೆಂಗಳೂರು ತಂಡವನ್ನು ಗುರುವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಎದುರಿಸಲಿದೆ.

ಐಪಿಎಲ್‍ನ ಈ ಆವೃತ್ತಿಯೊಂದರಲ್ಲೇ ಹೈದರಾಬಾದ್ ತಂಡ ಮೂರು ಬಾರಿ 250ಕ್ಕಿಂತ ಹೆಚ್ಚು ಮೊತ್ತ ಪೇರಿಸಿದೆ. ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದೆ. ಮುಂಬೈ ಇಂಡಿಯನ್ಸ್ ಮೇಲೆ 277 ರನ್ ಹೊಡೆದಿದ್ದ ಪ್ಯಾಟ್ ಕಮಿನ್ಸ್ ಬಳಗ, ನಂತರ ಆರ್‍ಸಿಬಿ ವಿರುದ್ಧ ಬೆಂಗಳೂರಿನಲ್ಲಿ 3 ವಿಕೆಟ್‍ಗೆ 287 ರನ್‍ಗಳ ದಾಖಲೆ ಮೊತ್ತ ಗಳಿಸಿತು.

ಇದು ಸಾಲದೆಂಬಂತೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪವರ್‍ಪ್ಲೇ ಅವಧಿಯಲ್ಲೇ ವಿಕೆಟ್ ನಷ್ಟವಿಲ್ಲದೇ 125 ರನ್ ಚಚ್ಚಿ ಐಪಿಎಲ್‍ನಲ್ಲಿ ಮೊದಲ ಬಾರಿ 300ರ ಬಳಿ ಸಾಗುವ ಸೂಚನೆ ನೀಡಿತ್ತು. ದುರ್ಬಲ ಬೌಲಿಂಗ್ ಹೊಂದಿರುವ ಆರ್‍ಸಿಬಿ ವಿರುದ್ಧವೂ ಹೈದರಾಬಾದ್ ತನ್ನ ದಂಡಯಾತ್ರೆಯನ್ನು ಮುಂದುವರಿಸಿದಲ್ಲಿ ಅಚ್ಚರಿಯೇನಿಲ್ಲ. ಏಳು ವಿಕೆಟ್‍ಗಳೊಡನೆ ಆರ್‍ಸಿಬಿಯ ಉತ್ತಮ ಬೌಲರ್ ಎನಿಸಿರುವ ಯಶ್ ದಯಾಳ್ ಬೌಲರ್‍ಗಳ ಪಟ್ಟಿಯಲ್ಲಿ 24ನೇ ಸ್ಥಾನದಲ್ಲಿದ್ದಾರೆ ಎಂದರೆ ತಂಡದ ಬೌಲಿಂಗ್ ಶಕ್ತಿ ಊಹಿಸಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು