LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ʼವ್ಯಾಪಾರದಲ್ಲಿ ಪೈಪೋಟಿ ನೀಡುತ್ತಿದ್ದವನ ಕೊಲೆಗೆ ಸುಪಾರಿ ನೀಡಿದ್ದನ ಬಂಧನʼ

ಬೆಂಗಳೂರು : ವ್ಯಾಪಾರದಲ್ಲಿನ ಪೈಪೋಟಿಯಿಂದ ಪಕ್ಕದ ಬಟ್ಟೆ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ನೀಡಿದ್ದ ಟೆಕ್ಸ್ಟೈಲ್ಸ್ ಮಾಲೀಕನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮುದ್ದಣ್ಣ ಲೇಔಟ್ ನಿವಾಸಿ ವೇನರಾಮ್ (೪೩) ಬಂಧಿತ ಆರೋಪಿಯಾಗಿದ್ದಾನೆ, ತನ್ನ ಟೆಕ್ಸ್ಟೈಲ್ಸ್ ಪಕ್ಕದ ಬಟ್ಟೆ ಅಂಗಡಿ ಮಾಲೀಕ ನೇಮರಾಮ್(೪೨) ಕೊಲೆಗೆ ಆರೋಪಿಯು ೫ ಲಕ್ಷ ರೂ.ಗೆ ಸುಪಾರಿ ನೀಡಿದ್ದನು. ಸುಪಾರಿ ಪಡೆದಿದ್ದ ರಾಜಸ್ಥಾನ ಮೂಲದ ವಿನೋದ್ ಜಾಟ್ ಗೆ ಶೋಧ ನಡೆಸಲಾಗಿದೆ.

ಬಾಗಲಗುಂಟೆಯ ಮುದ್ದಣ್ಣ ಲೇಔಟ್‌ನ ಸಿಡೇದಹಳ್ಳಿಯಲ್ಲಿ ನೇಮರಾಮ್ ಹ್ಯಾಪಿ ಟೆಕ್ಸ್ಟೈಲ್ಸ್ ಎನ್ನುವ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದು, ಪಕ್ಕದಲ್ಲೇ ಆರೋಪಿ ವೇನರಾಮ್ ಕೂಡ ಹೈ ಫ್ಯಾಷನ್ಸ್ ಟೆಕ್ಸ್ ಟೈಲ್ಸ್ ಎಂಬ ಬಟ್ಟೆ ಅಂಗಡಿ ನಡೆಸುತ್ತಿದ್ದು, ನೇಮರಾಮ್ ಅಂಗಡಿಯಲ್ಲಿ ಉತ್ತಮವಾಗಿ ವ್ಯಾಪಾರ ಆಗುತ್ತಿತ್ತು.

ಹೀಗಾಗಿ ಆರೋಪಿ ವೇನರಾಮ್, ದೂರುದಾರ ನೇಮರಾಮ್ ಅಂಗಡಿಯಲ್ಲಿ ಕಳಪೆ ಗುಣಮಟ್ಟದ ಬಟ್ಟೆಗಳಿವೆ ಎಂದು ಅಪಪ್ರಚಾರ ಮಾಡುತ್ತಿದ್ದ. ಆದರೂ ನೇಮರಾಮ್ ಸುಮ್ಮನಿದ್ದರು.
ಈ ಮಧ್ಯೆ ನೇಮರಾಮ್, ವೇನರಾಮ್‌ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರನಿಗೆ ಹೆಚ್ಚಿನ ಸಂಬಳ ಕೊಟ್ಟು ತನ್ನ ಅಂಗಡಿಗೆ ಸೇರಿಸಿಕೊಂಡಿದ್ದ. ಅದರಿಂದ ಕೋಪಗೊಂಡಿದ್ದ ಆರೋಪಿ, ರಾಜಸ್ಥಾನ ಮೂಲದ ವಿನೋದ್ ಜಾಟ್ ಎಂಬಾತನಿಗೆ ನೇಮರಾಮ್‌ನ ಹತ್ಯೆಗೆ ೫ ಲಕ್ಷ ರೂ.ಗೆ ಸುಪಾರಿ ನೀಡಿದ್ದ. ಅದರಂತೆ ಆರೋಪಿಗಳು ಜುಲೈ ೯ರಂದು ರಾತ್ರಿ ಅಂಗಡಿ ವ್ಯಾಪಾರ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ನೇಮರಾಮ್ ಮೇಲೆ ಎರಡು ಬೈಕ್‌ಗಳಲ್ಲಿ ಬಂದು ಮಾರಕಾಸ್ತçಗಳಿಂದ ಹಲ್ಲೆ ನಡೆಸಿದ್ದರು. ಬಳಿಕ ಸ್ಥಳೀಯ ನೆರವು ಪಡೆದು ಪ್ರಾಣ ಉಳಿಸಿಕೊಂಡು ಮನೆಗೆ ಹೋಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ವಿನೋದ್ ಜಾಟ್ ಆ.೮ರಂದು ನೇಮರಾಮ್‌ಗೆ ಕರೆ ಮಾಡಿ, ನಿನ್ನ ಕೊಲೆಗೈಯಲು ೪ ತಿಂಗಳಿAದ ಸಂಚು ರೂಪಿಸಲಾಗಿತ್ತು. ವೇನರಾಮ್ ನನಗೆ ೫ ಲಕ್ಷ ರೂ.ಗೆ ನಿನ್ನ ಹತ್ಯೆಗೆ ಸುಪಾರಿ ನೀಡಿದ್ದ. ನಿನ್ನ ಮಕ್ಕಳನ್ನು ಅಪಹರಣಕ್ಕೂ ಸೂಚಿಸಿದ್ದ. ಅಲ್ಲದೆ, ವೇನರಾಮ್ ಜತೆಗಿನ ವಾಟ್ಸ್ ಆ್ಯಪ್ ಚಾಟ್‌ಗಳನ್ನು ನೇಮರಾಮ್‌ಗೆ ಕಳುಹಿಸಿದ್ದ.
ಈ ಮಾಹಿತಿಯನ್ನು ತನ್ನ ಸಂಬAಧಿಕರಿಗೆ ತಿಳಿಸಿ, ಬಳಿಕ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ವಿನೋದ್ ಜಾಟ್‌ಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು