LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೇರ ಪ್ರಸಾರಕ್ಕೆ ನಿರಾಕರಣೆ ಬೇಡ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಸೂಚನೆ

ದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ ಸುಪ್ರೀಂ, ನೇರ ಪ್ರಸಾರದ ಕೋರಿಕೆಗಳನ್ನು ತಿರಸ್ಕರಿಸಬೇಡಿ ಎಂದು ಹೇಳಿದೆ.ಇತರ ಸಮುದಾಯದ ಜನರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ...ಎಂಬ ಕಾರಣಕ್ಕೆ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದನ್ನು ತಡೆಯುವುದು ಅಥವಾ ಅನುಮತಿ ನೀಡದಿರುವುದು ತಪ್ಪು ಎಂದು ಹೇಳಿದೆ. ಈ ಬಗ್ಗೆ ಸರಿಯಾದ ಕಾರಣ ಇದ್ದರೆ ತಿಳಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಹೇಳಿದೆ.

ಸಮಾರಂಭದ ಪ್ರದರ್ಶನ ಅಥವಾ ಈ ಸಂದರ್ಭದಲ್ಲಿ ವಿಶೇಷ ಪೂಜೆ ಅಥವಾ ಭಜನೆಗಳನ್ನು ನಡೆಸುವುದಕ್ಕೆ ಯಾವುದೇ ನಿಷೇಧವಿಲ್ಲ ಎಂದು ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ರಾಮ್ ಲಲ್ಲಾ `ಪ್ರಾಣ-ಪ್ರತಿಷ್ಠೆ' ಸಮಾರಂಭದ ನೇರ ಪ್ರಸಾರವನ್ನು ಕೆಲವೊಂದು ಪ್ರದೇಶದಲ್ಲಿ ನಿರಾಕರಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದ ಕ್ರಮದ ಬಗ್ಗೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ತುರ್ತು ವಿಚಾರಣೆ ಮಾಡುವಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೋರಿಕೊಂಡಿತ್ತು. ಇದೀಗ ಸುಪ್ರೀಂ ಇಂದು ಈ ಅರ್ಜಿಯನ್ನು ವಿಚಾರಣೆ ಮಾಡಿ, ಈ ನಿರ್ಧಾರವನ್ನು ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ವಿನೋಜ್ ಪಿ ಸೆಲ್ವಂ ಪರ ವಕೀಲ ಜಿ ಬಾಲಾಜಿ ಅವರು ಅರ್ಜಿ ಸಲ್ಲಿಸಿದ್ದಾರೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ದೇವಸ್ಥಾನಗಳಲ್ಲಿ ನೇರಪ್ರಸಾರ ಮಾಡುವುದನ್ನು ನಿಷೇಧಿಸಿದೆ ಎಂದು ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು