LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸುರೇಶ್‍ಗೆ ಹೆಚ್ಚು ಮತಗಳ ಗೆಲುವಿನ ವಿಶ್ವಾಸ

ಬೆಂಗಳೂರು: ``ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ'' ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಪರವಾಗಿ ವಾತಾವರಣ ಇದೆಯೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ;`ಶುಕ್ರವಾರ ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ'' ಎಂದರು.

ಮತದಾನ ಮಾಡಲು ಯುವಕರ ಸಂಖ್ಯೆ ಕಡಿಮೆ ಇದೆ ಎಂದು ಕೇಳಿದಾಗ ``ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ''
ಸಂಸತ್ತು ಪ್ರಜಾಪ್ರಭುತ್ವದ ದೇಗುಲ.

ಇದರ ಮೂಲಕ ದೇಶ, ರಾಜ್ಯವನ್ನು ಅಭಿವೃದ್ಧಿ ಮಾಡಲು, ಅವಶ್ಯಕತೆಗಳನ್ನು ಪೂರೈಸಲು, ಒಳ್ಳೆಯದನ್ನು ಮಾಡಲು, ಕಾನೂನು, ನಿಯಮಗಳನ್ನು ಮಾಡಲಾಗುತ್ತದೆ. ಆದ ಕಾರಣ ಲೋಕಸಭಾ ಚುನಾವಣೆ ಪ್ರಮುಖವಾದುದು. ಆದ್ದರಿಂದ ಎಲ್ಲ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕು.
ನಾನು ನನ್ನ ಸ್ವಂತ ಊರಾದ ದೊಡ್ಡ ಆಲಹಳ್ಳಿಯಲ್ಲಿ ಕುಟುಂಬ ಸದಸ್ಯರ ಸಮೇತ ಮಧ್ಯಾಹ್ನದ ವೇಳೆಗೆ ತೆರಳಿ ಮತದಾನ ಮಾಡಲಾಗುವುದು" ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು