LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಿರುತೆರೆಯಲ್ಲಿ ಸೂರ್ಯವಂಶ

ಡಾ.ವಿಷ್ಣುವರ್ಧನ್ ಅಭಿನಯದ ಸೂರ್ಯವಂಶ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಧಾರವಾಹಿಯೊಂದು ಉದಯ ವಾಹಿನಿಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ದವಾಗಿದೆ. ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್.ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ.

ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ ಮಾಡುತ್ತಿದ್ದಾರೆ.ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ ಸೂರ್ಯವಂಶ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಬಯಕೆ.

ವಂಶದ ಕುಡಿ ಇಪ್ಪತ್ತು ವರ್ಷಗಳ ಹಿಂದೆ ಮೊಮ್ಮಗ ಸೂರ್ಯವರ್ಧನ ಕಾಣೆಯಾಗಿದ್ದೆ ಚಿಂತೆಗೆ ಕಾರಣವಾಗಿರುತ್ತದೆ. ಒಂದು ಆಕಸ್ಮಿಕ ಸಂದರ್ಭದಲ್ಲಿ ಆ ಹುಡುಗ ಸಿಗುತ್ತಾನೆ. ತಾಯಿಯ ಚಿಕಿತ್ಸೆಗೆ ಹಣ ಬೇಕಿರುವುದರಿಂದ ಆತನು ಈ ನಾಟಕಕ್ಕೆ ಒಪ್ಪಿಕೊಳ್ಳುತ್ತಾನೆ. ಅವನೇ ಕಥಾನಾಯಕ ಕರ್ಣ.

ನಂತರ ಕರ್ಣನು ಸೂರ್ಯವಂಶಕ್ಕೆ ಕಾಲಿಟ್ಟ ನಂತರ ಎಲ್ಲಾ ಕಡೆಗಳಿಂದಲೂ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಅದೇ ಊರಿನ ಕಾಳಿಂಗ ಆಟಾಟೋಪವನ್ನು ಬಗ್ಗು ಬಡಿಯಲು ಕರ್ಣನಿಂದ ಮಾತ್ರ ಸಾಧ್ಯ ಎಂದು ಊರ ಜನರು ನಂಬಿರುತ್ತಾರೆ. ಇದರ ಮಧ್ಯೆ ನಾಯಕಿ ಸುರಭಿ ಆಗಮನವಾಗುತ್ತದೆ. ಇದರಿಂದ ಕಥೆ ಹೊಸ ರೂಪ ಪಡೆದುಕೊಳ್ಳುತ್ತದೆ.

ಮುಂದೆ ಕರ್ಣನೇ ಸೂರ್ಯವರ್ಧನ ಎನ್ನುವ ವಿಷಯ ತಿಳಿಯುತ್ತದೆ. ಅದು ಹೇಗೆ, ಯಾರಿಂದ, ಯಾವಾಗ ಎಂಬ ಸನ್ನಿವೇಶಗಳೊಂದಿಗೆ ರೋಚಕ ತಿರುವುಗಳು ಬರುತ್ತದೆ. ಪ್ರತಿ ಕಂತುಗಳು ಶ್ರೀಮಂತವಾಗಿ ಮೂಡಿಬಂದಿರುವುದು ವಿಶೇಷ.ನಾಯಕನಾಗಿ ಅನಿರುದ್ದ್‍ಜಟ್ಕರ್, ನಾಯಕಿಯಾಗಿ ಸುರಭಿ. ತಾತನಾಗಿ ಸುಂದರರಾಜ್, ಖಳನಾಗಿ ದಿ.ಉದಯ್‍ಕುಮಾರ್ ಪುತ್ರ ವಿಕ್ರಂಉದಯಕುಮಾರ್. ಉಳಿದಂತೆ ರವಿಭಟ್, ಸುಂದರಶ್ರೀ, ಲೋಕೇಶ್‍ಬಸವಟ್ಟಿ, ಪುಷ್ಪಾಬೆಳವಾಡಿ, ನಯನಾ, ರಾಮಸ್ವಾಮಿ, ಸುನಂದಾ ಮುಂತಾದವರು ನಟಿಸುತ್ತಿದ್ದಾರೆ.ಮಾರ್ಚ್,11 ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು