LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಅಸಂಘಟಿತ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಸಮೀಕ್ಷಾ ಕಾರ್ಯ ಆರಂಭ’

ರಾಮನಗರ: ನಗರಸಭೆ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಸಂಘಟಿತ ಕಾರ್ಮಿಕರನ್ನು ನಗರಸಭೆ ವತಿಯಿಂದ ವಿಮಾ ಯೋಜನೆ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಅಸಂಘಟಿತ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಸಮೀಕ್ಷಾ ಕಾರ್ಯ ಆರಂಭಿಸಲಾಗುತ್ತಿದೆ ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ,(ಶಶಿ)ತಿಳಿಸಿದರು.ನಗರಸಭೆಯಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಪಿ.ಎಂ.ಜೆ.ಜೆ.ವೈ, ಪಿ.ಎಂ.ಎಸ್.ಬಿ.ವೈ ವiತ್ತು ಪಿ.ಎಂ-ವೈ.ಎಂ ವಿಮಾ ಯೋಜನೆಗಳ ಮೊದಲ ಕಂತನ್ನು ನಗರಸಭೆ ಪಾವತಿಸುವ ಮೂಲಕ ಅಸಂಘಟಿತ ಕಾರ್ಮಿಕರು ಈ ವಿಮಾ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಪ್ರೋತ್ಸಾಹಿಸುತ್ತಿದೆ ಎಂದರು. 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ನಗರಸಭಾ ವ್ಯಾಪ್ತಿಯಲ್ಲಿನ ಅಸಂಘಟಿತ ಕಾರ್ಮಿಕರಾದ ಆಟೋ ಚಾಲಕರು, ಇತರೆ ವಾಹನಗಳ ಚಾಲಕರು, ಗಾರೆ ಕೆಲಸ, ಕಾರ್ಪೆಂಟರ್, ಕೂಲಿ ಕೆಲಸ, ಫಿಲೇಚರ್, ಹೋಟೆಲ್, ಅಂಗಡಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ಬೀದಿ ಬದಿ ವ್ಯಾಪಾರಸ್ಥರು, ಮಡಿವಾಳರು, ಅಕ್ಕಸಾಲಿಗರು, ಪೈಂಟಿಂಗ್, ಕಟ್ಟಡ, ಪ್ಲಂಬಿಗ್, ಟೈಲರಿಂಗ್ ವೃತ್ತಿನಿರತರು ಹೀಗೆ ಜೀವನೋಪಾಯಕ್ಕಾಗಿ ಕಸಬು ಮಾಡುತ್ತಿರುವ ಅಸಂಘಟಿತ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ ಎಂದರು. ಬಹುಶಃ ದೇಶದಲ್ಲೇ ಪ್ರಥಮ ಬಾರಿಗೆ ರಾಮನಗರ ನಗರಸಭೆ ಇಂತಹ ಮಹತ್ವದ ಕಾರ್ಯ ಕೈಗೊಂಡಿದೆ ಎಂದರು. ಅಸಂಘಟಿತ ಕಾರ್ಮಿಕರ ಪೈಕಿ ಬಹುತೇಕರಿಗೆ ವಿಮಾ ಯೋಜನೆಗಳ ಮಹತ್ವ ತಿಳಿದಿಲ್ಲ, ಹೀಗಾಗಿ ನಗರ ಸಭೆವತಿಯಿಂದ ವಿಮಾ ಸವಲತ್ತಿನ ಮಹತ್ವವನ್ನು ತಿಳಿಸಿಕೊಡುವ ಪ್ರಯತ್ನ ಆರಂಭಿಸಿದ್ದೇವೆ. ಪ್ರಥಮ ಕಂತನ್ನು ನಗರಸಭೆಯಿಂದ ಪಾವತಿಸ ಲಾಗುವುದು, ಉಳಿದ ಕಂತುಗಳನ್ನು ಫಲಾನುಭವಿಗಳೇ ನೇರವಾಗಿ ತಮ್ಮ ಬ್ಯಾಂಕು ಖಾತೆಯಿಂದ ಪಾವತಿಸಿ ಕೊಳ್ಳುತ್ತಾರೆ ಎಂದರು.ಈ ಕಾರ್ಮಿಕರಿಗೆ ಅವರ ಜೀವನ ಸಂಧ್ಯಾ ಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ದ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕರವುಪ್ರಧಾನ ಮಂತ್ರಿ ಶ್ರಮ್‌ಯೋಗಿ ಮಾನ್-ಧನ್ (ಪಿಎಂ ಎಸ್‌ವೈಎಂ) ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಸವಲತ್ತನ್ನು ನಗರಸಭೆ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಕಾರ್ಮಿಕರಿಗೆ ಒದಗಿಸಿಕೊಡಬೇಕಾಗಿದೆ. 60 ವರ್ಷದ ನಂತರ ಮೂರು ಸಾವಿರ ಮಾಸಿಕ ಪಿಂಚಣಿ ಪಡೆಯಲು ಸಾಧ್ಯವಾಗುತ್ತದೆ ಎಂದರು. ನಗರಸಭೆ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಕಾರ್ಮಿಕರ ಸಮೀಕ್ಷೆಗಾಗಿ 85 ಮಂದಿಯ ಗುಂಪು ರಚಿಸಲಾಗಿದೆ. ಈ ಪೈಕಿ 8 ಮಂದಿ ಮೇಲುಸ್ತುವರಿ ವಹಿಸಲಿದ್ದಾರೆ. ಈ ಗುಂಪುಗಳು ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗಲಿದ್ದಾರೆ. ಇವರಿಗೆ ಬೇಕಾದೆ ಎಲ್ಲ ಪರಿಕರಗಳನ್ನು ನಗರಸಭೆಯ ಮೂಲಕ ಒದಗಿಸಲಾಗುತ್ತಿದೆ. ಸಮೀಕ್ಷಾದಾರರು ಆಯಾ ವಾರ್ಡುಗಳ ನಗರಸಭಾ ಸದಸ್ಯರ ಸಹಕಾರದಲ್ಲಿ ತಮ್ಮ ಕಾರ್ಯ ನಿರ್ವವಹಿಸುವರು ಎಂದರು.ನಗರಸಭೆಯ ಆಯುಕ್ತ ಡಾ.ಜಯಣ್ಣ ಮಾತನಾಡಿ, ನಗರಸಭಾ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕಂದಾಯ ಪಾವತಿಸಿದರೆ ಶೇ 5 ರಷ್ಟು ರಿಯಾಯಿತಿಗೆ ಅರ್ಹತೆ ಪಡೆಯುತ್ತಾರೆ ಎಂದು ತಿಳಿಸಿದರು. ಮೇ, ಜೂನ್‌ನಲ್ಲಿ ಕಂದಾಯ ಪಾವತಿಸಿದರೆ ದಂಡ ರಹಿತ ಕಂದಾಯದ ಮೊತ್ತ ಪಾವತಿಸಿಕೊಳ್ಳಲಾಗುವುದು. ತದನಂತರ ಪಾವತಿಸಿದರೆ ಮಾಸಿಕ ಶೇ 2ರಷ್ಟು ದಂಡ ವಿಧಿಸಲಾಗುತ್ತದೆ. ಹೀಗಾಗಿ ಆಸ್ತಿ ಮಾಲೀಕರು ರಿಯಾಯಿತಿ ಅವಧಿಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ನಗರಸಭಾ ಸದಸ್ಯರುಗಳಾದ ಪವಿತ್ರ, ಪಾರ್ವತಮ್ಮ, ನಿಜಾಮುದ್ದಿನ್, ಅಜ್ಮತ್, ಮಂಜುನಾಥ್, ಮುನಜಿಲ್ ಆಗಾ, ಸಮದ್, ನಾಗಮ್ಮ, ಖುರೇಷಿ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು