LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೋಮವಾರದಿಂದ ಸುವರ್ಣ ಗೃಹಮಂತ್ರಿ

ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು ಇನ್ನಷ್ಟು ದುಪ್ಪಟ್ಟುಗೊಳಿಸಲು "ಸುವರ್ಣ ಗೃಹಮಂತ್ರಿ" ಎಂಬ ಹೊಸದೊಂದು ರಿಯಾಲಿಟಿ ಶೋ ಪ್ರಸಾರ ಮಾಡಲು ಸಜ್ಜಾಗಿದೆ.ಇದೊಂದು ವಿಭಿನ್ನ ರೀತಿಯ ರಿಯಾಲಿಟಿ ಶೋ. ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡೋ ಗೃಹಿಣಿಯರನ್ನು/ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ, ಮನೆ ಮಂದಿಯನ್ನು ಅವ್ರು ಎಷ್ಟೇ ಚೆನ್ನಾಗಿ ನೋಡ್ಕೊಂಡ್ರು 'ಥ್ಯಾಂಕ್ ಯು' ಅಂತನೂ ಯಾರೂ ಹೇಳಲ್ಲ.

ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡ್ತಿಯ ಅನ್ಯೋನ್ಯತೆ ಬಗ್ಗೆ ತಿಳಿದು, ಅವರಿಗೆ ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜೊತೆ ರೇಷ್ಮೆ ಸೀರೆ, ಚಿನ್ನ, ಬೆಳ್ಳಿ ಹಾಗೂ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ "ಸುವರ್ಣ ಗೃಹಮಂತ್ರಿ" ಕಾರ್ಯಕ್ರಮದ ಶೈಲಿಯಾಗಿದೆ.
ಇನ್ನು ಇದೇ ಮೊದಲ ಬಾರಿಗೆ ಜನಪ್ರಿಯ ನಿರೂಪಕ ಮುರಳಿ ಸ್ಟಾರ್ ಸುವರ್ಣ ವಾಹಿನಿಗೆ ಲಗ್ಗೆಯಿಟ್ಟಿದ್ದು, 'ಸುವರ್ಣ ಗೃಹಮಂತ್ರಿ' ಕಾರ್ಯಕ್ರಮದ ಸಾರಥಿಯಾಗಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಮುರಳಿಯವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆ, ಬೆಳ್ಳಿ-ಬಂಗಾರ ಕೊಟ್ಟು ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ. ಸದ್ಯ 'ಸುವರ್ಣ ಗೃಹಮಂತ್ರಿ'ಯ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದ್ದು, ನೋಡುಗರು ಈ ಕಾರ್ಯಕ್ರಮವನ್ನು ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಹುಮಾನಗಳ ಮಹಾ ಮಳೆಯೇ ಸುರಿಯಲಿದ್ದು ಪ್ರೇಕ್ಷಕರಿಗೆ ಮನರಂಜನೆ ಸಿಗೋದಂತೂ ಖಚಿತ. ಕರುನಾಡಿನ ಗೃಹಿಣಿಯರನ್ನು ಸಂಭ್ರಮಿಸೋದಕ್ಕೆ ರಾಣಿ ಸೀಟಿನೊಂದಿಗೆ ನಿಮ್ಮನೆಗೆ ಬರ್ತಿದೆ ಹೊಸ ಶೋ 'ಸುವರ್ಣ ಗೃಹಮಂತ್ರಿ' ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು