LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಅಕ್ಟೋಬರ್ ೨೩ರಿಂದ ೫ ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ `ಎಸ್‌ವಿಆರ್ ೫೦' ಸಮಾರಂಭ"

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್ ವಿ ರಾಜೇಂದ್ರಸಿAಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ ೫೦ ವರ್ಷಗಳಾಗಿದೆ. ಈ
ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿAದ "ಎಸ್ ವಿ ಆರ್ ೫೦" ಎಂಬ ಅದ್ದೂರಿ ಸಮಾರಂಭ ಆಯೋಜಿಸಿ ರಾಜೇಂದ್ರಸಿAಗ್ ಬಾಬು ಅವರನ್ನು
ಆತ್ಮೀಯವಾಗಿ ಸನ್ಮಾನಿಸಲಿದೆ. ಐದು ದಿನಗಳ ಕಾಲ ಅದ್ದೂರಿಯಾಗಿ ಈ ಸಮಾರಂಭ ನಡೆಯಲಿದೆ. ಸಮಾರಂಭದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ,
ನಂಜುAಡೇಗೌಡ, ವಿಜಯಲಕ್ಷಿ÷್ಮ ಸಿಂಗ್, ಸAಗೀತ ನಿರ್ದೇಶಕ ಹಂಸಲೇಖ, ನಿರ್ಮಾಪಕ ರಾಕ್ಲೆöÊನ್ ವೆಂಕಟೇಶ್, ಪತ್ರಕರ್ತ ಗಂಗಾಧರ್ ಮೊದಲಿಯರ್,
ಲಿಂಗದೇವರು, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್, ಸಂಕಲನಕಾರ ಕೆಂಪರಾಜ್ ಹಾಗೂ ಸಮಾರಂಭದ ಆಯೋಜಕರಾದ
ಕೃಷ್ಣೇಗೌಡ(ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ) ಉಪಸ್ಥಿತರಿದ್ದರು.

ಕರ್ನಾಟಕ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಈವರೆಗೂ ೫೦ ವರ್ಷಗಳ mಸಕ್ರಿಯವಾಗಿ ನಿರ್ದೇಶಕರಾಗಿರುವವರು ಯಾರು ಇಲ್ಲ.
ಅದು ರಾಜೇಂದ್ರಸಿAಗ್ ಬಾಬು ಅವರು ಒಬ್ಬರೆ. ಈಗಲೂ ಅವರ ನಿರ್ದೇಶನದ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದಾವಾಗಿದೆ. ಈ ಸುವರ್ಣ ಸಂಭ್ರಮವನ್ನು ಸಂಭ್ರಮಿಸಲು ಅಕ್ಟೋಬರ್ ೨೩ ರಿಂದ ೫ ದಿನಗಳ ಕಾಲ "ಎಸ್ ವಿ ಆರ್ ೫೦" ಎಂಬ ಅದ್ದೂರಿ ಸಮಾರಂಭ ನಡೆಸಲಾಗುತ್ತಿದೆ. ೨೩ ರಂದು ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಅಲ್ಲಿಂದ ನಾಲ್ಕು ದಿನಗಳ ಕಾಲ ಕಲಾವಿದರ ಸಂಘದಲ್ಲಿ ರಾಜೇಂದ್ರಸಿAಗ್ ಬಾಬು ಅವರ ನಿರ್ದೇಶನದ ರಾಷ್ಟç ಹಾಗೂ ರಾಜ್ಯ ಪ್ರಶಸ್ತಿ ಚಿತ್ರಗಳ ಚಿತ್ರೋತ್ಸವ ನಡೆಯಲಿದೆ. ದಿನಕ್ಕೆ ಎರಡು ಚಿತ್ರಗಳ ಪ್ರದರ್ಶನವಿರುತ್ತದೆ.

ಈ ಸಂದರ್ಭದಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. ೨೭ ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜೇಂದ್ರಸಿAಗ್ ಬಾಬು ಅವರಿಗೆ ಚಿತ್ರರಂಗದ ಪರವಾಗಿ ಆತ್ಮೀಯವಾಗಿ ಸನ್ಮಾನ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಬೆ.೧೧ರಿಂದ ಮಧ್ಯಾಹ್ನ ೩ ಗಂಟೆವರಗೂ ರಾಜೇಂದ್ರಸಿAಗ್ ಬಾಬು ಅವರ ಜನಪ್ರಿಯ ಹಾಡುಗಳ ಥೀಮ್ ಮ್ಯೂಸಿಕ್ ಬಳಸಿಕೊಂಡು ನುರಿತ ಮಾಡಲ್ ಗಳು ಫ್ಯಾಷನ್ ಶೋ ಸಹ ನಡೆಸಲಿದ್ದಾರೆ ಇದೇ ಸಂದರ್ಭದಲ್ಲಿ ಗಂಗಾಧರ್ ಮೊದಲಿಯರ್ ಅವರು ಬರೆದಿರುವ ಪುಸ್ತಕ ಸೇರಿದಂತೆ ಎರಡು ಪುಸ್ತಕಗಳ ಬಿಡುಗಡೆ ಹಾಗೂ ಲಿಂಗದೇವರು ಅವರು ನಿರ್ದೇಶಿಸಿರುವ ಸಾಕ್ಷ÷್ಯಚಿತ್ರದ ಪ್ರದರ್ಶನವಿರುತ್ತದೆ.

ಹಂಸಲೇಖ ಅವರ ನೇತೃತ್ವದಲ್ಲಿ ರಾಜೇಂದ್ರಸಿAಗ್ ಬಾಬು ಅವರ ನಿರ್ದೇಶನದ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಂಸಲೇಖ ಅವರ ತಂಡದವರು
ಹಾಡಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಮಾರಂಭದ ಆಯೋಜಕ ಕೃಷ್ಣೇಗೌಡ ತಿಳಿಸಿದರು.
ರಾಜೇಂದ್ರಸಿAಗ್ ಬಾಬು ಅವರು ಸಿನಿಮಾ ನಿರ್ದೇಶನವನ್ನು ಹೊರತುಪಡಿಸಿ, ಚಿತ್ರರಂಗಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಸ್ಥಾಪನೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿದ್ದಾಗ "ಬೆಳ್ಳಿ ಹೆಜ್ಜೆ" ಅಂತಹ ಕಾರ್ಯಕ್ರಮದ ಮುಂದುವರಿಕೆ ಹಾಗೂ ವಿಧಾನಸೌಧದ ಮುಂದೆ ಚಲನಚಿತ್ರೋತ್ಸವದ ಉದ್ಘಾಟನೆ ಹಾಗೂ ಮೈಸೂರಿನ ಅರಮನೆ ಬಳಿ ಸಮರೋಪ ಸಮಾರಂಭದ ಆಯೋಜನೆ ಹೀಗೆ ಹಲವು
ಕಾರ್ಯಕ್ರಮಗಳನ್ನು ಬಾಬು ಅವರು ಮಾಡಿದ್ದಾರೆ.

ತಮ್ಮ ಚಿತ್ರಗಳ ಮೂಲಕವೂ ಅವರು ಎಲ್ಲರ ಮನೆ ಮಾತಾಗಿದ್ದಾರೆ. ರಾಜೇಂದ್ರಸಿAಗ್ ಬಾಬು ಅವರು ನಿರ್ದೇಶಕರಾಗಿ ೫೦ ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದುಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು