LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಸ್ವೀಪ್ ಕಾರ್ಯಕ್ರಮ : ಮದುವೆ ಸಮಾರಂಭದಲ್ಲಿ ಗಮನ ಸೆಳೆದ ಮತದಾನ ಜಾಗೃತಿ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಮಾಂಗಲ್ಯಂ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ ಅವರ ನೇತೃತ್ವದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಮದುವೆ ಸಮಾರಂಭದಲ್ಲಿ ‘ಚುನಾವಣಾ ಪರ್ವದೇಶದ ಗರ್ವ’ ಚುನಾವಣಾ ಘೋಷವಾಕ್ಯವುಳ್ಳ ಭಿತ್ತಿ ಪತ್ರಗಳನ್ನು ವಧು ವರರಿಗೆ ನೀಡಿ ಮತದಾನ ಅರಿವು ಮೂಡಿಸಲಾಯಿತು. ಅಲ್ಲದೇ ಸಮಾರಂಭದಲ್ಲಿ ನೆರೆದಿದ್ದ ಸಾವಿರಾರು ಜನರಿಗೆ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಇದೇವೇಳೆ ಮದುವೆ ಮಂಟಪದಲ್ಲಿ ಚುನಾವಣಾ ಆಯೋಗಸಿದ್ದಪಡಿಸಿರುವ ಮತದಾನದ ಸಂದೇಶ ಸಾರುವ ಜಾಗೃತಿ ಗೀತೆಯನ್ನು ಪ್ರಸಾರ ಮಾಡಲಾಯಿತು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ. ಲಕ್ಷ್ಮೀ ಅವರು ಮಾತನಾಡಿ ಅವರು ಈ ಬಾರಿಯ ಚುನಾವಣೆಯಲ್ಲಿ ಮತದಾನದ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಿ ಮತದಾನದ ಪ್ರಮಾಣ ಹೆಚ್ಚಳಕ್ಕಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ವಿಶೇಷವಾಗಿ ಮದುವೆ ಮಂಟಪಗಳಲ್ಲಿ ನೂತನ ವಧು-ವರರಿಂದ ಜಾಗೃತಿ ಮೂಡಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಗುರಿ ನಮ್ಮದಾಗಿದೆ ಎಂದರು.ನಗರದಲ್ಲಿರುವ ಮದುವೆ ಮಂಟಪಗಳಲ್ಲಿ ಎಲ್ಲಿ ಮದುವೆ ಸಮಾರಂಭ ನಡೆಯುತ್ತಿದೆ ಅಲ್ಲಿಗೆ ಜಿಲ್ಲಾ ಸ್ವೀಪ್ ಸಮಿತಿ ತಂಡದವರು ಭೇಟಿ ನೀಡಿ ನೂತನ ವಧುವರರಿಂದ ಮತದಾನದ ಜಾಗೃತಿ ಸಾರುವ ಭಿತ್ತಿ ಪತ್ರಗಳನ್ನು ವಧು-ವರರಿಂದ ಪ್ರದರ್ಶಿಸಿ ಮದುವೆಯಲ್ಲಿ ಭಾಗಿಯಾಗುವ ಜನರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿವಳಿಕೆ ನೀಡಲಾಗುತ್ತಿದೆ.

ವಧು ವರರು ಹಾಗೂ ಸಾರ್ವಜನಿಕರಿಂದಲೂ ಸಹ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಲಕ್ಷ್ಮೀ ಅವರು ತಿಳಿಸಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎಂ. ಜುಂಜಣ್ಣ, ವಾರ್ತಾ ಸಹಾಯಕರಾದ ಸುರೇಶ್ ಕುಮಾರ್ ಹಾಗೂ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು