LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಮಸ್ಯೆ ಬಗೆಹರಿಸಿಕೊಳ್ಳಲು ಸ್ವಿಗ್ಗಿಗೆ 15 ದಿನಗಳ ಅಂತಿಮ ಗಡುವು

ಬೆಂಗಳೂರು: ದೇಶದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆಯಾದ ಸ್ವಿಗ್ಗಿಗೆ ಬೆಂಗಳೂರಿನಲ್ಲಿ ದೊಡ್ಡ ಆಘಾತ ಎದುರಾಗುವ ಸಾಧ್ಯತೆಯಿದೆ. ಅನಗತ್ಯ ಕಮಿಷನ್, ಪಾವತಿಗಳಲ್ಲಿ ಪಾರದರ್ಶಕತೆಯ ಕೊರತೆ ಹಾಗೂ ಅನುಮತಿಯಿಲ್ಲದೆ ಹಣ ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಸೇರಿದಂತೆ ವಿವಿಧ ಹೋಟೆಲ್ ಮಾಲೀಕರ ಸಂಘಟನೆಗಳು ಆಗಸ್ಟ್ 15ರಿಂದ ಸ್ವಿಗ್ಗಿ ಮೂಲಕ ಆರ್ಡರ್ ಸ್ವೀಕರಿಸುವುದನ್ನು ಪೂರ್ಣವಾಗಿ ಸ್ಥಗಿತಗೊಳಿಸಲು ಗಂಭೀರ ತೀರ್ಮಾನ ಕೈಗೊಂಡಿವೆ.ಕಳೆದ 10 ತಿಂಗಳಿನಿಂದ ನಿರಂತರವಾಗಿ ಮಾತುಕತೆ ನಡೆಸಿದರೂ ಸಮಸ್ಯೆಗೆ ಸೂಕ್ತ ಪರಿಹಾರ ಸಿಗದ ಹಿನ್ನೆಲೆಯಲ್ಲಿ, ಸಮಸ್ಯೆಗಳನ್ನು ಸರಿಪಡಿಸಲು ಸ್ವಿಗ್ಗಿಗೆ 15 ದಿನಗಳ ಅಂತಿಮ ಗಡುವು (ಆಗಸ್ಟ್ 15) ನೀಡಲಾಗಿದೆ.
ಹೋಟೆಲ್ ಮಾಲೀಕರ ಅನುಮತಿಯಿಲ್ಲದೆ ಪ್ರಚಾರ ವೆಚ್ಚಗಳು, ಕ್ಲಿಕ್ ವೆಚ್ಚ, ಕಸ್ಟಮರ್ ಅಕ್ವಿಸಿಷನ್ ಹಾಗೂ ಜಾಹೀರಾತು ಶುಲ್ಕಗಳ ಹೆಸರಿನಲ್ಲಿ ಹಣ ಕಡಿತಗೊಳಿಸಲಾಗುತ್ತಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಎಚ್‌ಎ ಗೌರವಾಧ್ಯಕ್ಷ ಪಿ.ಸಿ. ರಾವ್, ``ನಮಗೆ ಸ್ವಿಗ್ಗಿಯ ಸಾಮಾನ್ಯ ಸೇವಾ ಶುಲ್ಕಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಸೇವಾ ಶುಲ್ಕ, ಪೇಔಟ್ ಶುಲ್ಕ, ಮ್ಯಾಪ್-ಅಪ್ ಶುಲ್ಕ ಎಂದು ಹೇಳಿ 1 ಲಕ್ಷ ರೂಪಾಯಿ ಆರ್ಡರ್ ಹಣದಲ್ಲಿ ಹೋಟೆಲ್ ಮಾಲೀಕರಿಗೆ ಕೇವಲ 40,000 ದಿಂದ 50,000 ಮಾತ್ರ ನೀಡಲಾಗುತ್ತಿದೆ'' ಎಂದು ಕಿಡಿಕಾರಿದ್ದಾರೆ.ಗ್ರಾಹಕರಿಂದ ಸಂಗ್ರಹಿಸಿ ಸರ್ಕಾರಕ್ಕೆ ಪಾವತಿಸಬೇಕಾದ ಜಿಎಸ್‌ಟಿ ಮೊತ್ತಕ್ಕೂ ಸ್ವಿಗ್ಗಿ ಸೇವಾ ಶುಲ್ಕ ವಿಧಿಸುತ್ತಿದೆ ಎಂದು ಸಂಘಟನೆ ಗಂಭೀರ ಆರೋಪ ಮಾಡಿದೆ.ಪ್ರತಿಯೊಂದು ಆರ್ಡರ್‌ನ ಕಮಿಷನ್, ಜಿಎಸ್‌ಟಿ, ಜಾಹೀರಾತು ವೆಚ್ಚ ಹಾಗೂ ರಿಯಾಯಿತಿಗಳನ್ನು ಪ್ರತ್ಯೇಕವಾಗಿ ಸ್ಪಷ್ಟಪಡಿಸುವ ಬಿಲ್ ನೀಡಬೇಕು.ಅನಗತ್ಯ ಜಾಹೀರಾತು ಹಾಗೂ ಪ್ರಚಾರ ಅಭಿಯಾನಗಳಿಂದ ಹೋಟೆಲ್‌ಗಳು ಹೊರಬರಲು ಸುಲಭವಾದ `ಒನ್-ಕ್ಲಿಕ್' ಆಯ್ಕೆ ನೀಡಬೇಕು.ಹೋಟೆಲ್ ಮಾಲೀಕರ ಡಿಜಿಟಲ್ ಅಥವಾ ಲಿಖಿತ ಅನುಮತಿಯಿಲ್ಲದೆ ಯಾವುದೇ ರೀತಿಯ ಪ್ರಚಾರ ವೆಚ್ಚಗಳನ್ನು ಕಡಿತಗೊಳಿಸಬಾರದು.ಸಂಘಟನೆಯು ಬಾಯ್‌ಕಾಟ್ ಎಚ್ಚರಿಕೆ ನೀಡಿದ್ದರೂ, ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಬಾಗಿಲು ತೆರೆದಿದೆ. ``ಸ್ವಿಗ್ಗಿ ಮುಂದಿನ 15 ದಿನಗಳಲ್ಲಿ ಈ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿಕೊಂಡರೆ ನಾವು ಸೇವೆ ಮುಂದುವರಿಸುತ್ತೇವೆ. ಇಲ್ಲವಾದಲ್ಲಿ ನಮಗೆ ಬಾಯ್‌ಕಾಟ್ ಮಾಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ'' ಎಂದು ಪಿ.ಸಿ. ರಾವ್ ತಿಳಿಸಿದ್ದಾರೆ. ಅಲ್ಲದೆ, ಇದರಿಂದ ಗ್ರಾಹಕರಿಗೆ ಯಾವುದೇ ತೊಂದರೆಯಾಗದAತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದಾಗಿಯೂ ಸಂಘ ಸ್ಪಷ್ಟಪಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು