LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

`ನಾಯಿ ಮತ್ತು ಹಾವು ಕಡಿತ ಸಾವನ್ನು ಕಡಿಮೆ ಮಾಡಲು ಕ್ರಮ ವಹಿಸಿ'

ಚಿಕ್ಕಬಳ್ಳಾಪುರ: ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿನ ತ್ಯಾಜ್ಯವನ್ನು ಸೂಕ್ತವಾಗಿ ವಿಲೆವಾರಿ ಮಾಡುವ ನಿಟ್ಟಿನಲ್ಲಿ ನಿಗಾ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರು ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “ಹಾವು ಮತ್ತು ನಾಯಿ ಕಡಿತ ನಿಯಂತ್ರಣ ಕುರಿತ ಅಂತರ್ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿದರು.ಚಿಕನ್ ಮತ್ತು ಮಟನ್ ಮಾರಾಟ ಮಾಡುವ ಮಳಿಗೆಗಳ ಬಳಿ ಮಾಂಸ ಕತ್ತರಿಸುವ ವೇಳೆ ನಿರುಪಯುಕ್ತ ಮಾಂಸ ಮತ್ತು ತ್ಯಾಜ್ಯವನ್ನು ಮುಂಭಾಗದ ರಸ್ತೆಗೆ ಬಿಸಾಕುವುದನ್ನು ತಿನ್ನಲು ಬರುವ ಬೀದಿನಾಯಿಗಳಿಂದ ಹೆಚ್ಚಿನ ನಾಯಿ ಕಡಿತಗಳಾಗುತ್ತಿರುವುದು ಆತಂಕಕಾರಿಯಾದ ವಿಚಾರ. ಇಂತಹ ಪ್ರಸಂಗಗಳನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ತಡೆಗಟ್ಟಲು ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಅಂತಹ ಮಾಂಸ ಮಾರಾಟಗಾರರಿಗೆ ಎಚ್ಚರಿಕೆ ನೀಡಡುವ ಜೊತೆಗೆ ಕಾನೂನು ಕ್ರಮಕ್ಕೆ ಒಳಪಡಿಸಿ ಸಮರ್ಪಕ ವಿಲೆವಾರಿಗೆ ಅರಿವು ಮೂಡಿಸಬೇಕು. ಪರವಾನಗಿ ಪಡೆಯದೆ ಮಾಂಸ ಮಾರಾಟ ಮಾಡುವವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಾಯಿ ಕಚ್ಚುವಿಕೆಯು ರೇಬೀಸ್ ಸೋಂಕನ್ನು ಹರಡಬಹುದು, ಇದು ಮಾರಣಾಂತಿಕ ಕಾಯಿಲೆಯಾಗಿದ್ದು.ಯಾವುದೇ ವ್ಯಕ್ತಿ ನಾಯಿ ಕಡಿತಕ್ಕೆ ಒಳಗಾದ ತಕ್ಷಣ ವೈದ್ಯಕೀಯ ಸಹಾಯ ಪಡೆಯುವುದು ಅತ್ಯಗತ್ಯ, ವಿಶೇಷವಾಗಿ ಸಾಕು ಪ್ರಾಣಿಗಳಿಗೆ ವ್ಯಾಕ್ಸಿನೇಷನ್ ಮಾಡಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲೆಯಲ್ಲಿ 2025 ನೇ ವರ್ಷದಲ್ಲಿ 12,663 ಜನರಿಗೆ ನಾಯಿ ಕಚ್ಚಿರುವುದು ದಾಖಲಾಗಿದೆ ಈ ಪೈಕಿ 2 ಸಾವು ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ 2025 ನೇ ವರ್ಷದಲ್ಲಿ 944 ಹಾವು ಕಡಿತದ ಪ್ರಕರಣಗಳು ದಾಖಲಾಗಿದ್ದು, ಅದರ ಪೈಕಿ 7 ಜನ ನಿಧನರಾಗಿದ್ದಾರೆ. 2026ನೇ ವರ್ಷದ ಜನವರಿಯಿಂದ ಈ ವರೆಗೆ ಜಿಲ್ಲೆಯಲ್ಲಿ 5717 ನಾಯಿ ಕಡಿತಗಳಾಗಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಲಾಗಿದೆ, ಆದರೆ ಇದೇ ವರ್ಷದಲ್ಲಿ 292 ಮಂದಿ ಹಾವು ಕಡಿತಕ್ಕೆ ಒಳಗಾಗಿ 3 ಜನ ಈ ವರೆಗೆ ಸಾವನ್ನಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ನಾಯಿ ಮತ್ತು ಹಾವಿನ ಕಡಿತದಿಂದ ಸಾವು ಉಂಟಾಗದAತೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು
ಫ್ರೆಂಚ್ ಸೂಕ್ಷ್ಮ ಜೀವಶಾಸ್ತ್ರಜ್ಞ “ಲೂಯಿಸ್ ಪಾಶ್ಚರ್” ಅವರು ಮೊದಲ ರೇಬೀಸ್ ಲಸಿಕೆಯನ್ನು ಅಭಿವೃದ್ಧಿಪಡಿಸಿದರು. 1885 ರಲ್ಲಿ ರೇಬೀಸ್ ಅಧ್ಯಯನ ಮಾಡುವಾಗ, ಪಾಶ್ಚರ್ ತನ್ನ ಮೊದಲ ಮಾನವ ಲಸಿಕೆಯನ್ನು ಪರೀಕ್ಷಿಸಿದರು. ರೇಬೀಸ್ ಒಂದು ವೈರಾಣುವಿನಿಂದ ಹರಡುವ ಸೋಂಕು. ಸೋಂಕಿರುವ ಪ್ರಾಣಿಗಳ (ನಾಯಿ 97%, ಬೆಕ್ಕು 2%, ನರಿ, ಮಂಗೂಸ್, ಕುದುರೆ, ಹಸು, ಕುರಿ, ಟಗರು 1%) ಜೊಲ್ಲಿನ ಸಂಪರ್ಕದಿAದ ಮತ್ತು ತೆರೆದ ಚರ್ಮ ಮೇಲೆ ನಾಕುವಿಕೆಯಿಂದ ಹಾಗೂ ಪರಚುವಿಕೆಯಿಂದ ಕಡಿತದಿಂದ ಹರಡುತ್ತದೆ. ಇ ಸೋಂಕನ್ನು ತಡೆಯಲು ತಕ್ಷಣವೇ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯರ ಸಲಹೆಯಂತೆ ನಿಗದಿತ ರೇಬೀಸ್ ವಿರುದ್ಧದ ಲಸಿಕೆ ಚುಚ್ಚು ಮದ್ದನ್ನು ತೆಗೆದುಕೊಳ್ಳಬೇಕು. ಗಾಯಗಳ ಒಳಗೆ ಮತ್ತು ಸುತ್ತಲೂ ರೇಬೀಸ್ ಇಮ್ಯುನೋಗ್ಲೋಬುಲಿನ್ ಅಥವಾ ಆ್ಯಂಟಿ ರೇಬೀಸ್ ಸೀರಂ ಚುಚ್ಚು ಮದ್ದುನ್ನು ತೆಗೆದುಕೊಳ್ಳಬೇಕು. ಸಾಕು ನಾಯಿಗಳಿಗೆ ತಪ್ಪದೇ ಲಸಿಕಾ ಚುಚ್ಚುಮದ್ದು ಹಾಕಿಸಿಬೇಕು ಎಂದು ತಿಳಿಸಿದರು.
ಹಾವುಗಳು ವಿಷಕಾರಿ ಮತ್ತು ವಿಷರಹಿತ ಎರಡೂ ಆಗಿರುತ್ತವೆ. ಹಾವು ಕಚ್ಚಿದ ಸಂದರ್ಭಗಳಲ್ಲಿ ಹೆದರದೆ ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಬೇಕು ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಡ್ ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಿ ಅಂಬ್ಯುಲೆನ್ಸ್ ಅಥವಾ ಇನ್ನಿತರ ವಾಹನದಲ್ಲಿ ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು. ಈ ಸೋಂಕಿನ ಬಗ್ಗೆ ಶಾಲಾ, ಕಾಲೇಜು, ಗ್ರಾಮ ಪಂಚಾಯತಿ, ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ನಾಯಿ ಮತ್ತು ಹಾವು ಕಡಿತ ಕಡಿಮೆ ಮಾಡಲು ಕ್ರಮ ವಹಿಸಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರಪತ್ರ ಹಾಗೂ ಬಿತ್ತಿ ಪತ್ರಗಳನ್ನು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಡಾ.ಕೃಷ್ಣಪ್ರಸಾದ್, ಡಾ.ಜಿ.ವಿ ಸಂತೋಷ್ ಬಾಬು, ಡಾ. ಪ್ರಕಾಶ್, ಡಾ.ಚಂದ್ರಶೇಖರ್ ರೆಡ್ಡಿ, ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು