LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬೌದ್ಧ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ ಸಮಾರಂಭ

ತಿ.ನರಸೀಪುರ:ಬೌದ್ಧ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಯಿತು.ಪಟ್ಟಣದ ಎ.ವಿ.ಎಸ್.ಎಸ್ ಸಭಾಂಗಣದಲ್ಲಿ ಭಾರತೀಯ ಬೌದ್ಧ ಮಹಾಸಭಾ ವತಿಯಿಂದ ಆಯೋಜನೆ ಮಾಡಿದ್ದ 2023 -24 ನೇ ಸಾಲಿನ ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಹಾಗೂ ನವೋದಯ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮವನ್ನು ಗೌತಮ ಬುದ್ಧ ಮತ್ತು ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬೋಧಿರತ್ನ ಬಂತೆಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪಂಚಶೀಲ ತತ್ವ ಬೋಧನೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎವಿಎಸ್‍ಎಸ್ ನ ಸಂಸ್ಥಾಪಕ ಅಧ್ಯಕ್ಷ ತುಂಬಲ ರಾಮಣ್ಣ ಮಾತನಾಡಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವುದು ತುಂಬಾ ಸಂತೋಷದ ವಿಚಾರ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳು ಪ್ರೇರಣೆ ಹೊಂದುತ್ತಾರೆ. ನಾವೆಲ್ಲ ವಿದ್ಯಾವಂತರಾಗಿ ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವುದು ಮತ್ತು ಉನ್ನತಗಳ ಹುದ್ದೆಗಳನ್ನು ಅಲಂಕರಿಸಿರುವುದು ಯಾರಿಂದ ಎಂದರೆ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರಿಂದ ಮತ್ತು ಅವರು ಕೊಟ್ಟ ಕೊಡುಗೆ.ಪಠ್ಯ ಪುಸ್ತಕ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಬರಹ ಮತ್ತು ಭಾಷಣಗಳನ್ನು ನಾವೆಲ್ಲರೂ ಹೆಚ್ಚು ಹೆಚ್ಚು ಓದಬೇಕೆಂದು ಹೇಳಿದರು.

ಮುಂದುವರೆದು ಮಾತನಾಡಿ ಪೋಷಕರು ಮಕ್ಕಳಲ್ಲಿ ಇಂತದ್ದೆ ಓದಬೇಕು ಇಂಥದ್ದೇ ಒತ್ತಡ ಹೇರಬಾರದು ಎಲ್ಲ ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಚಿತ್ರಕಲೆ, ಹಾಡುಗಾರಿಕೆ, ಡಾಕ್ಟರ್ ಮತ್ತು ಇಂಜಿನಿಯರ್ ಇನ್ನು ಹಲವು ಇತ್ಯಾದಿ ಆಗಬೇಕೆಂದು ಮಕ್ಕಳಲ್ಲಿ ಆಸೆ ಇರುತ್ತದೆ ಅವರ ಆಸೆಗೆ ಪೋಷಕರು ಒತ್ತಾಸೆಯಾಗಿ ನಿಲ್ಲಬೇಕು. ಅದಕ್ಕೆ ಪೂರಕವಾಗಿ ಮಕ್ಕಳು ವಿದ್ಯಾವಂತರಾಗಬೇಕು ಎಂದು ಹೇಳಿದರು.

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಅನಿಕ ಕನಸು, ಮಾನ್ಯ, ನಯನ.ಪಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಪೃಥ್ವಿ ರಾಣಿ,ನೇಹಾ,ಅಕ್ಷತಾ,ಕನ್ನಿಕಾ, ಸೂರ್ಯಆರ್ಯನ್, ಚಿನ್ಮಯ್ ಪರಂಜ್ಯೋತಿ ಮತ್ತು ನವೋದಯ ಶಾಲೆಗೆ ಆಯ್ಕೆಯಾದ ಯಶಸ್. ಎಸ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಮುಖಂಡರಾದ ಯಜಮಾನ್ ಶಿವರುದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಮಹೇಶ್, ಮುಖ್ಯ ಶಿಕ್ಷಕ ಶಂಕ್ರಯ್ಯ, ಪಿ.ಮಹದೇವಸ್ವಾಮಿ, ಸೋಸಲೆ ನಾಗೇಶ್, ನಾಗೇಂದ್ರ.ಆರ್, ಪ್ರಸನ್ನ, ಪ್ರಕಾಶ್, ಸಿದ್ದರಾಜು ಹೊಸಹಳ್ಳಿ, ಸಿದ್ದರಾಜು ಕಲ್ಕುಣಿ, ರಾಜಪ್ಪ,ಲೋಕೇಶ್,ಭಾರತೀಯ ಬೌದ್ಧ ಮಹಾಸಭಾ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು