LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಿಕ್ಸೆಡ್ ಮಾರ್ಷಲ್ ಆರ್ಟ್ಸ್‍ನಲ್ಲಿ ಮಿಂಚುತ್ತಿರುವ ತರುಣ್ ಹಿರೇಮಠ್

ಬೆಂಗಳೂರು: ಬಾಕ್ಸಿಂಗ್, ಕುಸ್ತಿ ಮಧ್ಯೆಇತ್ತೀಚಿನ ವರ್ಷಗಳಲ್ಲಿ ಜನಪ್ರಿಯವಾಗು ತ್ತಿರುವ ಇದೇ ಮಾದರಿಯ ಕ್ರೀಡೆ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್(ಎಂಎಂಎ). ಅಪ್ಪಟಭಾರತೀಯ ಶೈಲಿಯಲ್ಲಿ ಮಲ್ಲಯುದ್ಧ ಎಂದು ಹೇಳಬಹುದಾದ ಈ ಕ್ರೀಡೆ ಭಾರತವನ್ನು ಪ್ರವೇಶಿಸಿದ್ದು ಬೆಂಗಳೂರು ಮೂಲಕ ಎಂಬುದು ವಿಶೇಷ.

ಇದೀಗ ಬೆಂಗಳೂರಿನಲ್ಲಿ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಹೊಸ ಟ್ರೆಂಡ್ ಸೃಷ್ಟಿಸುತ್ತಿದೆ. ಈ ನಿಟ್ಟಿನಲ್ಲಿ ಕೊಡಗಿನ ಕ್ಲಿಂಟನ್ ಡಿ’ಕ್ರೂಜ್ ಜತೆ ರಾಜ್ಯದಿಂದ ಹಲವು ರಾಷ್ಟ್ರೀಯ ಪ್ರಶಸ್ತಿ, ಅಂತಾರಾಷ್ಟ್ರೀಯ ಪ್ರಶಸ್ತಿಗಳೊಂದಿಗೆ ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರತಿಭೆ ಬೆಂಗಳೂರಿನ ತರುಣ್ ಡಿ. ಹಿರೇಮಠ್.

ಬೆಂಗಳೂರಿನ ಇಂಡಿಯನ್ ಕಾಂಬೋಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಕೋಚ್ ಜಿತೇಶ್ ಬಂಜನ್ ಗರಡಿಯಲ್ಲಿ ಕಳೆದ ಎಂಟು ವರ್ಷಗಳಿಂದ ತರಬೇತಿ ಪಡೆಯುತ್ತಿರುವ ತರುಣ್ ಹಿರೇಮಠ್, 2019ರಲ್ಲಿ ಚೆನ್ನೈನಲ್ಲಿ ನಡೆದ ಬ್ರಜೆಲಿಯನ್ ಜಿಯು ಜಿಟ್ಸ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕಗಳೊಂದಿಗೆ ಕಿಕ್ ಬಾಕ್ಸಿಂಗ್ ನಲ್ಲಿ ತಮ್ಮ ಸಾಧನೆ ಆರಂಭಿಸಿದ್ದಾರೆ.

ಕಿಂಕ್ ಬಾಕ್ಸಿಂಗ್, ಮಲ್ಲಯುದ್ಧ ಹೀಗೆ ಹಲವು ವಿಭಾಗಗಳಲ್ಲಿ ಸ್ಪರ್ಧಿಸಿ 2023ರಲ್ಲಿ ಮುಂಬೈನಲ್ಲಿ ನಡೆದ ಎಂಎಂಎ ವಾರಿಯರ್ ಕನಸಿನ ಸರಣಿ, ದೆಹಲಿಯ ಲೈಟ್ ಹೆವಿವೈಟ್ ವಿಭಾಗದ ಮ್ಯಾಟ್ರಿಕ್ಸ್ ಫೈಟ್ ನೈಟ್ (ಎಂಎಫ್ ಎನ್) ಸರಣಿ, ಎಂಎಫ್‍ಎನ್ ಮತ್ತು ಡಿಸ್ನಿ ಹಾಟ್ ಸ್ಟಾರ್ ಗುತ್ತಿಗೆ ಸ್ಪರ್ಧೆಗಳಲ್ಲಿ ಗೆದ್ದು ಈ ಕ್ರೀಡೆಯಲ್ಲಿ ಪಾರಮ್ಯ ಮೆರೆಯುತ್ತಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಮಿಕ್ಸೆಡ್ಮಾರ್ಷಲ್ ಆರ್ಟ್ಸ್‍ನಲ್ಲಿ ಭಾರತ, ಅದರಲ್ಲೂ ಬೆಂಗಳೂರಿನ ಕ್ರೀಡಾಪಟುಗಳು ಉತ್ತಮ ಸಾಧನೆ ತೋರುತ್ತಿದ್ದಾರಾದರೂ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.
ಈ ಕ್ರೀಡೆ ಒಲಿಂಪಿಂಕ್ ಗೇಮ್ಸ್ ಗಳಲ್ಲಿ ಸ್ಥಾನ ಪಡೆಯದ ಕಾರಣ ರಾಜ್ಯ ಸರಕಾರದಿಂದ ಯಾವುದೇ ಪ್ರೋತ್ಸಾಹ ಸಿಗುತ್ತಿಲ್ಲ. ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಕೇಂದ್ರ ಸರಕಾರದಿಂದ ವಿಮಾನದ ಟಿಕೆಟ್ ಸಿಗುತ್ತದೆಯಾದರೂ ಉಳಿದಂತೆ ಎಲ್ಲಾ ವೆಚ್ಚವನ್ನು ಕ್ರೀಡಾಪಟುಗಳು ಅಥವಾ ಅವರು ತರಬೇತಿ ಪಡೆಯುತ್ತಿರುವ ಅಕಾಡೆಮಿಗಳು ಭರಿಸಬೇಕಾಗುತ್ತದೆ.

ಪ್ರಸ್ತುತ ತರುಣ್ ಹಿರೇಮಠ್ ಕಿಕ್ ಬಾಕ್ಸಿಂಗ್ ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ತೋರಿ ಹಲವು ಪ್ರಶಸ್ತಿಗಳೊಂದಿಗೆ ಅಂತಾರಾಷ್ಟ್ರೀಯ ಸ್ಪರ್ಧೆಗೂ ಅಣಿಯಾಗುತ್ತಿದ್ದಾರೆ. ಅದಕ್ಕಾಗಿ ಸರಕಾರದಿಂದ ಪ್ರೋತ್ಸಾಹ ಮತ್ತು ನೆರವಿಗೆ ಕಾಯುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು