LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಟಾಟಾ ಸನ್ಸ್ ಕಾರ್ಯಾಧ್ಯಕ್ಷ 

ಚಂದ್ರಶೇಖರನ್ ರಾಜೀನಾಮೆ



ಮುಂಬೈ: ಟಾಟಾ ಸನ್ಸ್ ಕಾರ್ಯಾಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.ಪ್ರಸ್ತುತ ಅವಧಿ ಪೂರ್ಣಗೊಂಡ ನಂತರ ಮರುನೇಮಕಗೊಳ್ಳಲು ತಾನು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 18 ರಂದು ನಡೆಯಲಿರುವ ಟಾಟಾ ಸನ್ಸ್ ವರ್ಷಿಕ ಮಹಾಸಭೆಗೂ ಮುನ್ನವೇ ಈ ಮಹತ್ವದ ಬೆಳವಣಿಗೆ ನಡೆದಿದೆ.2027ರ ಫೆಬ್ರವರಿವರೆಗೆ ಚಂದ್ರಶೇಖರನ್ ಅವರ ಅಧಿಕಾರವಧಿ ಇದೆ. ಆಗಸ್ಟ್ 18ರ ಎಜಿಎಂ ಸಭೆಯಲ್ಲಿ ಅವರ ಮರುನೇಮಕದ ಕುರಿತು ಪಾಲುದಾರರು ಮತದಾನ ಮಾಡಬೇಕಿತ್ತು. ಈ ಪ್ರಕ್ರಿಯೆ ನಡೆಯುವ ಮೊದಲೇ ಚಂದ್ರಶೇಖರನ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈಗ ರಾಜೀನಾಮೆ ಸಲ್ಲಿಸಿದ್ದರೂ ಮುಂದಿನ ಫೆಬ್ರವರಿವರೆಗೆ ಚಂದ್ರಶೇಖರ್ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.ಟಾಟಾ ಸಮೂಹದ ದತ್ತಿ ಸಂಸ್ಥೆಯಾದ `ಟಾಟಾ ಟ್ರಸ್ಟ್ಸ್  ಅಧ್ಯಕ್ಷ ನೋಯೆಲ್ ಟಾಟಾ ಅವರು ಚಂದ್ರಶೇಖರನ್ ಮರುನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST