LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ `ಕಾಂತಾರ ಅಧ್ಯಾಯ ೧' ಚಿತ್ರದ ಟೇಲರ್‌ ಬಿಡುಗಡೆ

ಹೊಂಬಾಳೆ ಫಿಲಂಸ್ ನಿರ್ಮಾಣದ,ರಿಷಬ್ ಶೆಟ್ಟಿ ನಟಿಸಿ ಹಾಗೂ ನಿರ್ದೇಶನದಈ ಚಿತ್ರದ ಕನ್ನಡದ ಟ್ರೇಲರ್ ಕನ್ನಡ ಕಲಾಭಿಮಾನಿಗಳಿಂದಲೇ ಬಿಡುಗಡೆ.

ಆರಂಭದಿAದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಹೊಂಬಾಳೆ ಫಿಲAಸ್ ನಿರ್ಮಾಣದ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಹಾಗೂ ವಿಶ್ವವೇ ಎದುರು
ನೋಡುತ್ತಿರುವ, ಬಹು ನಿರೀಕ್ಷಿತ "ಕಾಂತಾರ ಅಧ್ಯಾಯ ೧" ಚಿತ್ರ ಸಪ್ತ ಭಾಷೆಗಳಲ್ಲಿ ಅಕ್ಟೋಬರ್ ೨ ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಸೆಪ್ಟೆಂಬರ್ ೨೨ ರ (ಇಂದು) ಸೋಮವಾರ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಟ್ರೇಲರ್ ಅನಾವರಣವಾಗಲಿದೆ. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ಅನ್ನು ಶಿವಕಾರ್ತಿಕೇಯನ್, ಮಲಯಾಳಂನ ಟ್ರೇಲರ್ ಅನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆ ಟ್ರೇಲರ್ ಅನ್ನು ಪ್ರಭಾಸ್ ಅವರು ಅನಾವರಣ ಮಾಡಲಾಯಿತು. ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ "ಕಾಂತಾರ" ಚಿತ್ರದ ಟ್ರೇಲರ್
ಬಿಡುಗಡೆಯಾಗುತ್ತಿರುವುದು ವಿಶೇಷ.

ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಮೇಕಿಂಗ್ ವಿಡಿಯೋ, ಪೋಸ್ಟರ್ ಗಳಿಗೆ ಫಿದಾ ಆಗಿರುವ
ಅಭಿಮಾನಿಗಳು ಅಕ್ಟೋಬರ್ ೨ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ತೆರೆಯ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ಬಿ. ಅಜನೀಶ್
ಲೋಕನಾಥ್ ಅವರ ಸಂಗೀತ ನಿರ್ದೇಶನ, ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಹಾಗೂ ಪ್ರಗತಿ ಶೆಟ್ಟಿ ಅವರ ವಸ್ತç ವಿನ್ಯಾಸ "ಕಾಂತಾರ" ಚಿತ್ರಕ್ಕಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 'ಕಾಂತಾರ ಅಧ್ಯಾಯ
೧' ಚಿತ್ರವು ಕಲೆ, ಭಕ್ತಿ ಮತ್ತು ಶಕ್ತಿಯನ್ನು ಒಳಗೊಂಡಿರುವ ಚಿತ್ರವಾಗಿದ್ದು, ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ಹೊಂಬಾಳೆ ಫಿಲಂಸ್ ನಿಂದ ಮತ್ತೊAದು ಅದ್ಭುತ ಚಿತ್ರ ವಿಶ್ವದ ಸಿನಿಪ್ರೇಮಿಗಳಿಗೆ ಜನರಿಗೆ ವೀಕ್ಷಿಸಲು ಸಿಗುವುದಂತೂ ಖಂಡಿತ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು