LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜಿಂಬಾಬ್ವೆ ವಿರುದ್ಧ 3-0ಯಲ್ಲಿ ಸರಣಿ ವೈಟ್‌ವಾಶ್ ಮಾಡಿದ ಟೀಮ್ ಇಂಡಿಯಾ

ಕ್ರೀಡೆ: ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 157 ರನ್‌ಗಳಿಸಲಷ್ಟೇ ಶಕ್ತವಾಗಿ 35 ರನ್‌ಗಳ ಸೋಲೊಪ್ಪಿಕೊಂಡಿತು.ಭಾರತ ತಂಡ ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ (India vs Zimbabwe) ಭರ್ಜರಿ ಜಯ ಸಾಧಿಸಿ, 3 ಪಂದ್ಯಗಳ ಟಿ20 ಸರಣಿಯನ್ನ 3-0ಯಲ್ಲಿ ವೈಟ್‌ವಾಶ್ ಮಾಡಿದೆ. ಈಗಾಗಲೇ ಸರಣಿ ಗೆಲುವು ಸಾಧಿಸಿದ್ದರಿಂದ, ಈ ಔಪಚಾರಿಕ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 157 ರನ್‌ಗಳಿಸಲಷ್ಟೇ ಶಕ್ತವಾಗಿ 35 ರನ್‌ಗಳ ಸೋಲೊಪ್ಪಿಕೊಂಡಿತು. ರಯಾನ್ ಬರ್ಲ್ ಅಜೇಯ 54 ರನ್‌ಗಳಿಸಿ ತಂಡದ ಗರಿಷ್ಠ ಸ್ಕೋರರ್ ಆದರು.
ಬರ್ಲ್ ಹೋರಾಟ ವ್ಯರ್ಥ: ಜಿಂಬಾಬ್ವೆ 65 ರನ್‌ಗಳಾಗುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತ್ತು. ಆದರೆ ರಯಾನ್ ಬರ್ಲ್ ಹಾಗೂ ಮಾಧೆವೆರೆ 5ನೇ ವಿಕೆಟ್ ಜೊತೆಯಾಟದಲ್ಲಿ 60 ರನ್ ಸೇರಿಸಿ ತಂಡದ ಮೊತ್ತವನ್ನ ಸೋಲಿನ ಅಂತರವನ್ನ ಕಡಿಮೆ ಮಾಡಿದರು. ಮಧೆವೆರೆ 25 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್‌ಗಳ ಸಹಿತ 28 ರನ್‌ಗಳಿಸಿ ಔಟ್ ಆದರು. ಇವರ ವಿಕೆಟ್ ಬೆನ್ನಲ್ಲೇ ಜಿಂಬಾಬ್ವೆ ಸ್ಕೋರ್ ಗತಿಗೂ ಕಡಿವಾಣ ಬಿದ್ದಿತು. 7ನೇ ಕ್ರಮಾಂಕದಲ್ಲಿ ಬಂದ ವಿಕೆಟ್ ಕೀಪರ್ ಮರುಮಾನಿ ಕೇವಲ 1 ರನ್‌ಗಳಿಸಿ ಅಶೋಕ್ ಶರ್ಮಾ ಬೌಲಿಂಗ್‌ನಲ್ಲಿ ಔಟ್ ಆದರು. ಕೊನೆಯವರೆಗೂ ಅಜೇಯರಾಗಿ ಉಳಿದ ರಯಾನ್ ಬರ್ಲ್ 43 ಎಸೆತಗಳಲ್ಲಿ 5 ಬೌಂಡರಿಗಳ ಸಹಿತ ಅಜೇಯ 54 ರನ್‌ಗಳಿಸಿ ತಂಡದ ಮೊತ್ತವನ್ನ 150ರ ಗಡಿ ದಾಟಿಸಿದರು. ಬ್ರಾಡ್ ಇವನ್ಸ್ 14 ರನ್‌ಗಳಿಸಿದರು. ಭಾರತದ ಪರ ಮಯಾಂಕ್ ಯಾದವ್ 29ಕ್ಕೆ3, ಯಶ್ ಠಾಕೂರ್ 45ಕ್ಕೆ2, ಅಶೋಕ್ ಶರ್ಮಾ 20ಕ್ಕೆ1, ರವಿ ಬಿಷ್ಣೋಯ್ 24ಕ್ಕೆ1 ವಿಕೆಟ್ ಪಡೆದರು.ಭಾರತದ ಇನ್ನಿಂಗ್ಸ್: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವೈಭವ್ ಸೂರ್ಯವಂಶಿ ಸಿಡಿಸಿದ ಅರ್ಧಶತಕ (49 ಎಸೆತ, 8 ಬೌಂಡರಿ, 4 ಸಿಕ್ಸರ್), ಇಶಾನ್ ಕಿಶನ್ (26 ಎಸೆತಗಳಲ್ಲಿ 29), ಶ್ರೇಯಸ್ ಅಯ್ಯರ್ (18 ಎಸೆತಗಳಲ್ಲಿ 27) ಹಾಗೂ ರಿಂಕು ಸಿಂಗ್ (14 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 24) ಉತ್ತಮ ಬ್ಯಾಟಿಂಗ್ ನೆರವಿನಿಂದ 192 ರನ್‌ಗಳಿಸಿತ್ತು.
3-0ಯಲ್ಲಿ ಸರಣಿ ಗೆದ್ದ ಭಾರತ: ಐಪಿಎಲ್ ಬಳಿಕ ನಡೆದ ಮೊದಲ ಟಿ20 ಸರಣಿಯಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ 0-2, ಇಂಗ್ಲೆಂಡ್ ವಿರುದ್ಧ 0-4 ಅಂತರದಲ್ಲಿ ಸರಣಿ ಕಳೆದುಕೊಂಡಿತ್ತು. ಇದೀಗ ಜಿಂಬಾಬ್ವೆ ವಿರುದ್ಧ 3-0ಯಲ್ಲಿ ಗೆಲ್ಲುವ ಮೂಲಕ ಮೊದಲ ಸರಣಿ ಜಯ ಸಾಧಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು