LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ

ಬಿಸಿಸಿಐನಿಂದ 131 ಕೋಟಿ ರೂ. ನಗದು ಬಹುಮಾನ ಘೋಷಣೆ
ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ ಬರೋಬ್ಬರಿ 131 ಕೋಟಿ ರೂ.ಗಳ ನಗದು ಬಹುಮಾನ ಪಡೆಯಲಿದ್ದಾರೆ.
ಇತ್ತ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಐಸಿಸಿ ಕಡೆಯಿಂದ ಸಿಕ್ಕಿರುವುದು 27.60 ಕೋಟಿ ರೂ. ಮಾತ್ರ. ಇದೀಗ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ಬೋರ್ಡ್ ದುಪ್ಪಟ್ಟು ಮೊತ್ತದ ಬಹುಮಾನ ಘೋಷಿಸಿ ಗಮನ ಸೆಳೆದಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ನ್ಯೂಝಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಪ್ರತಿಷ್ಠಿತ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಪ್ರಶಸ್ತಿ ಉಳಿಸಿಕೊಂಡ ಮೊದಲ ತಂಡವಾಗಿ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಮೂರನೇ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ.
ಈ ಐತಿಹಾಸಿಕ ಸಾಧನೆಗಾಗಿ ಮಂಡಳಿಯು ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆದಾರರನ್ನು ಮತ್ತೊಮ್ಮೆ ಅಭಿನಂದಿಸುತ್ತದೆ ಮತ್ತು ಭವಿಷ್ಯದಲ್ಲಿ ಅವರಿಗೆ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತದೆ.
ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ ಜಯಗಳಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 131 ಕೋಟಿ ರೂಪಾಯಿ ನಗದು ಬಹುಮಾನವನ್ನು ನೀಡಲಿದೆ ಎಂದು ಘೋಷಿಸಿದೆ.
ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಯಿತು.
ಈ ಮೂಲಕ ಭಾರತ ತಂಡವು 96 ರನ್ ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಚಾಂಪಿಯನ್ ತಂಡಕ್ಕೆ ಮತ್ತು ಸಿಬ್ಬಂದಿ ವರ್ಗಗಳಿಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ಬಹುಮಾನವನ್ನು ಘೋಷಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು