LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶಬರಿ ಚಿತ್ರದ ಟೀಸರ್ ಬಿಡುಗಡೆ!

`ಒರಟ', `ಕೋರ'ದಂಥಾ ಸಿನಿಮಾಗಳ ಮೂಲಕ ಭಿನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಒರಟ ಶ್ರೀ ನಿರ್ದೇಶನದ ಬಹುನಿರೀಕ್ಷಿತ ಚಿತ್ರ `ಶಬರಿ'. ಇದೀಗ ಪತ್ರಿಕಾಗೋಷ್ಠಿಯ ಮೂಲಕ ಈ ಸಿನಿಮಾದ ಟೀಸರ್ ಅನ್ನು ಲಹರಿ ವೇಲು ಬಿಡುಗಡೆಗೊಳಿಸಿದ್ದಾರೆ. ಒರಟ ಶ್ರೀ ಸೇರಿದಂತೆ ಚಿತ್ರತಂಡ ಈ ಸಂದರ್ಭದಲ್ಲಿ ಹಾಜರಿದ್ದು ಶಬರಿಯ ಬಗೆಗಿನ ಒಂದಷ್ಟು ಆಸಕ್ತಿಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ಟೀಸರ್ ಬಿಡುಗಡೆಯ ವೇದಿಕೆಯಲ್ಲಿ ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿ ವೇಲು, ರಾಷ್ಟ್ರ ಪ್ರಶಸ್ತಿ ವಿಜೇತ ತಲೆದಂಡ ಚಿತ್ರದ ನಿರ್ದೇಶಕರಾದ ಪ್ರವೀಣ್ ಕೃಪಾಕರ್ ಮತ್ತು ಕಾಮನ್ ಮ್ಯಾನ್ ಚಿತ್ರದ ನಿರ್ಮಾಪಕ ನರಸಿಂಹ ಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಶಬರಿಯ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಲಹರಿ ವೇಲು 'ಒರಟ ಶ್ರೀ ಅತೀವ ಸಿನಿಮಾ ಪ್ರೇಮ ಹೊಂದಿರುವ ನಿರ್ದೇಶಕ. ಅವರು ಈ ಚಿತ್ರವನ್ನು ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ಇದರ ಹಾಡುಗಳೂ ಕೂಡಾ ಚೆನ್ನಾಗಿರೋದರಿಂದಲೇ ಲಹರಿ ಸಂಸ್ಥೆ ಆಡಿಯೋ ಹಕ್ಕುಗಳನ್ನು ಖರೀದಿಸಿದೆ' ಅನ್ನುತ್ತಲೇ ಚಿತ್ರತಂಡಕ್ಕೆರ ಶುಭ ಕೋರಿದರು. ನಿರ್ದೇಶಕ ಒರಟ ಶ್ರೀ ಆರಂಭದಲ್ಲಿಯೇ ಇಂತಿಷ್ಟು ಬಜೆಟ್ಟಿನಲ್ಲಿ ಸಿನಿಮಾ ಮುಗಿಸೋದಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರAತೆ. ಅದಕ್ಕೆ ತಕ್ಕುದಾಗಿ ಶಬರಿಯನ್ನು ರೂಪುಗೊಳಿಸಿರೋದು ವಿಶೇಷ.
ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ರಮೇಶ್, ಸುಧಾಕರ್ ರೆಡ್ಡಿ ಮತ್ತು ವಿಷ್ಣುಕಾಂತ್ ಎ ಸೇರಿಕೊಂಡು ಭಾರವಿ ಫಿಲಂಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮೂವರು ನಿರ್ಮಾಪಕರು ತಮ್ಮ ಅನುಭವಗಳನ್ನು ಹಂಚಿಕೊAಡರು. ನಾಯಕ ನಟ ಸಮರ್ಥ್, ನಾಯಕಿ ಕೃತಿಕಾ ಗೌಡ, ರಾಣಿ ಸೀರಿಯಲ್ ಖ್ಯಾತಿ ಬಾಲನಟಿ ಧನ್ವಿ, ನೀನಾಸಂ ಅಶ್ವತ್, ಒರಟ ಶ್ರೀ ಸೇರಿದಂತೆ ಚಿತ್ರತಂಡ ಈ ಪತ್ರಿಕಾಗೋಷ್ಠಿಯಲ್ಲಿ ತಂತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಒರಟ ಶ್ರೀ ಬಹುದೊಡ್ಡ ತಾರಾಗಣದ ಮೂಲಕ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಒಂದು ಜೀಪು, ಪುಟ್ಟ ಹುಡುಗಿ ಸೇರಿದಂತೆ ಒಂದಷ್ಟು ಅಂಶಗಳನ್ನು ಮಾತ್ರವೇ ಪ್ರೇಕ್ಷಕರೆದುರು ತೆರೆದಿಟ್ಟು, ನಿಜವಾದ ಶಬರಿ ಯಾರೆಂಬ ಕುತೂಹಲವನ್ನು ಚಿತ್ರತಂಡ ಕಾಯ್ದಿಟ್ಟುಕೊಂಡಿದೆ. ಸಸ್ಪೆನ್ಸ್, ಥ್ರಿಲ್ಲರ್, ಮಿಸ್ಟಿç ಸೇರಿದಂತೆ ಅನೇಕ ಅಂಶಗಳಿರೋ ಈ ಸಿನಿಮಾ ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್ ಎಂಬ ವಿಚಾರವನ್ನೂ ಚಿತ್ರತಂಡ ಹಂಚಿಕೊAಡಿದೆ. ಒರಟ ಶ್ರೀ ನಿರ್ದೇಶನವಿರುವ ಈ ಚಿತ್ರದಲ್ಲಿ ಸಮರ್ಥ್ ಮತ್ತು ಕೃತಿಕಾ ಗೌಡ ನಯಕ ನಾಯಕಿಯರಾಗಿ ನಟಿಸಿದ್ದಾರೆ. ಧನ್ವಿ, ಎಂ.ಕೆ ಮಠ, ನೀನಾಸಂ ಅಶ್ವತ್, ಸೀತಾ ಹರ್ಷವರ್ಧನ್, ಯೋಗೇಶ್ ವೀರ್, ಮಂಡ್ಯ ಸಿದ್ದು ಮುಂತಾದವರ ತಾರಾಗಣವಿದೆ. ಬಿ.ಆರ್ ಹೇಮಂತ್ ಕುಮಾರ್ ಸಂಗೀತ ನಿರ್ದೇಶನ, ಸಾಮ್ರಾಟ್ ನಾಗರಾಜ್ ಛಾಯಾಗ್ರಹಣ, ಕೆ ಗಿರೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು