LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟೆಡ್ಡಿ ಬೇರ್ ಮಧ್ಯಮ ಭಾಗದ ಕಥನ

'ಟೆಡ್ಡಿ ಬೇರ್' ಚಿತ್ರದ ಪ್ರೊಮೋ, ಟ್ರೇಲರ್ ಹಾಗೂ ಕ್ಲೈಮಾಕ್ಸ್‍ದಲ್ಲಿ ಬರುವ ಗೀತೆ ಅನಾವರಣ ಕಾರ್ಯಕ್ರಮವು ಕಿಕ್ಕಿರಿದ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಆದ್ಯಲಕ್ಷೀ ಪ್ರೊಡಕ್ಷನ್ ಅಡಿಯಲ್ಲಿ ಜ್ಯೋತಿತಾರಕೇಶ್, ಭರತ್ ಮತ್ತು ನವೀನ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.

ಟಾಲಿವುಡ್‍ನ ಪುರಿಜಗನ್ನಾಥ್ ಸಹಾಯಕರಾಗಿದ್ದ ಲೋಕೇಶ್.ಬಿ ಸಿನಿಮಾಕ್ಕೆ ಬರವಣಿಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಇದು ನನ್ನ ಮೊದಲ ಸಿನಿಮಾ. ನಂತರ 'ಸುಡೂಕು' ವಿಧುರ' 'ವಿಕ್ರಮಾರ್ಕ' ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದೇನೆ.

ಇದೆಲ್ಲವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀರ್ಷಿಕೆ ಮೇಲೆ ಇಲ್ಲಿಯವರೆಗೂ ಯಾರೂ ಚಿತ್ರ ಮಾಡಿರುವುದಿಲ್ಲ. ಹಾಲಿವುಡ್‍ದಲ್ಲಿ ಚಿತ್ರವೊಂದು ಬರುತ್ತಿದೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಸಿನಿಮಾದಲ್ಲಿ ಮಧ್ಯಮ ಭಾಗದ ಕಥೆಯನ್ನು ಹೇಳಲಾಗುತ್ತಿದೆ. ಇನ್ನು ಪ್ರಿಕ್ವೆಲ್, ಸೀಕ್ವಲ್ ಬರಬೇಕಾಗಿದೆ. ಸಂಶೋಧನೆ ನಡೆಸಿ ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಟೈಟಲ್ ಹೇಗೆ ಬಂತು.

ಆತ್ಮ ಯಾವ ರೀತಿ ಗೊಂಬೆಯೊಳಗೆ ಸೇರಿಕೊಳ್ಳುತ್ತದೆ. ಇಂತಹ ಕುತೂಹಲಕಾರಿ ಅಂಶಗಳನ್ನು ತಿಳಿಯಲು ತಾವುಗಳು ಚಿತ್ರಮಂದಿರಕ್ಕೆ ಬರಬೇಕು. 'ಕಾಲ ಭೈರವೇಶ್ವರ' ಸ್ವಾಮಿಯ ಹಾಡು ಮಾತ್ರ ಇರುತ್ತದೆ. ಬೆಂಗಳೂರು, ಮಂಗಳೂರು ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮಾಧ್ಯಮದ ಸಹಕಾರಬೇಕೆಂದು ಕೋರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು