LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ಟಿಕೆಟ್‍ಗೆ ತೇಜಸ್ವನಿ ಬೇಡಿಕೆ?

ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್‍ಗೆ ಡಾ. ತೇಜಸ್ವಿನಿಗೌಡ ಬೇಡಿಕೆಯಿಟ್ಟಿದ್ದಾರೆ.

ವಿಧಾನ ಪರಿಷತ್‍ನ ಬಿಜೆಪಿ ಸದಸ್ಯೆಯಾಗಿರುವ ಡಾ.ತೇಜಸ್ವಿನಿಗೌಡ, ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ನನಗೆ ನೀಡಿ ಎಂದು ಹೈಕಮಾಂಡ್ ನಾಯಕರ ಬಳಿ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗಿದೆ. ಹಾಲಿ ಸಂಸದ ಪ್ರತಾಪ್ ಸಿಂಹರ ಬದಲಿಗೆ ಮಹಿಳೆಯರಿಗೆ ಅವಕಾಶ ನೀಡಬಾರದೇಕೆ? ಎಂದು ಪ್ರಶ್ನಿಸಿ ಹೈಕಮಾಂಡ್ ನಾಯಕರ ಭೇಟಿಯಾಗಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ನಾನು ಮಹಿಳಾ ಕೋಟಾದಲ್ಲಿ ಟಿಕೆಟ್ ಕೇಳುತ್ತಿದ್ದೇನೆ. ನಾನು ಈ ಹಿಂದೆ ಸಂಸದೆಯಾಗಿಯೂ ಕಾರ್ಯನಿರ್ವಹಣೆ ಮಾಡಿದ್ದೇನೆ. ಕಳೆದ 2023 ರ ರಾಜ್ಯ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಹಳೆಯ ಮೈಸೂರು ಭಾಗದ ಪ್ರಬಲ ಒಕ್ಕಲಿಗ ಸಮುದಾಯದ ಮತಗಳ ಕ್ರೂಢಿಕರಣದಲ್ಲೂ ನಾನು ಪಾತ್ರ ವಹಿಸಿದ್ದೇನೆ. ನಾನು ಆ ಭಾಗದಲ್ಲಿ ಚಿರಪರಿಚಿತಳಿದ್ದೇನೆ.

ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಿರಂತರ ಪ್ರವಾಸ ಮಾಡಿದ್ದೇನೆ. ಮೈಸೂರು ಜಿಲ್ಲೆಯ ಬಗ್ಗೆ ಅರಿತಿದ್ದೇನೆ. ಸಾಂಸ್ಕೃತಿಕವಾಗಿ ಲೋಕಸಭಾ ಕ್ಷೇತ್ರಕ್ಕೆ ಏನೆಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕೋ ಅದನ್ನೆಲ್ಲಾ ಮಾಡಲು ನನಗೆ ಅರಿವಿದೆ. ಹಾಲಿ ಸಂಸದರ ವಿರುದ್ಧ ಸ್ಮೋಕ್ ಬಾಂಬ್ ಸ್ಫೋಟದ ಆರೋಪಿಗಳಿಗೆ ಪಾಸ್ ಕೊಟ್ಟಿರುವ ಆರೋಪ ಇರುವ ಕಾರಣ. ಅವರ ಬದಲಿಗೆ ನನಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಲು ಅವರ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು