LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೆನಿಸ್: ಕೆವಿನ್, ಕರಣ್ ಫೈನಲ್‍ಗೆ

ಬೆಂಗಳೂರು: ಮೂರನೇ ಶ್ರೇಯಾಂಕದ ಕರ್ನಾಟಕದ ಕೆವಿನ್ ಸುರೇಶ್ ಅವರು ಇಲ್ಲಿನ ಟಾಪ್‍ಸ್ಪಿನ್ ಕೋರ್ಟ್‍ನಲ್ಲಿ ನಡೆಯುತ್ತಿರುವ ಟಿ.ಎನ್.ಆರ್. ಸ್ಮಾರಕ ಎಐಟಿಎ ರಾಷ್ಟ್ರೀಯ ಸರಣಿಯ 18 ವರ್ಷದೊಳಗಿನವರ ಟೆನಿಸ್ ಟೂರ್ನಿಯ ಬಾಲಕರ ಸಿಂಗಲ್ಸ್‍ನಲ್ಲಿ 7-6(3), 6-4 ಸೆಟ್‍ಗಳಿಂದ ಎರಡನೇ ಶ್ರೇಯಾಂಕದ ಡೇವಿಡ್ ಜೇಸನ್ (ಕರ್ನಾಟಕ) ಅವರನ್ನು ಮಣಿಸಿ ಫೈನಲ್ ಪ್ರವೇಶಿಸಿದರು.

ಶುಕ್ರವಾರ ನಡೆದ ಮತ್ತೊಂದು ಸೆಮಿಫೈನಲ್‍ನಲ್ಲಿ ಕೇರಳದ ಕರಣ್ ಥಾಪಾ 7-5, 6-3 ರಿಂದ ಕರ್ನಾಟಕದ ಶ್ರೀಕರ್ ಡೋಣಿ ಅವರನ್ನು ಮಣಿಸಿ ಪ್ರಶಸ್ತಿ ಸುತ್ತಿಗೆ ಮುನ್ನಡೆದರು.ಬಾಲಕಿಯರ ಸಿಂಗಲ್ಸ್‍ನಲ್ಲಿ ನಾಲ್ಕನೇ ಶ್ರೇಯಾಂಕದ ಕರ್ನಾಟಕದ ಅಮೋದಿನಿ ನಾಯಕ್ 7-5,6-4ರಿಂದ ಅಗ್ರ ಶ್ರೇಯಾಂಕದ ಹರ್ಷಿಣಿ ಎನ್. (ಕರ್ನಾಟಕ) ಅವರಿಗೆ ಆಘಾತ ನೀಡಿ ಫೈನಲ್‍ಗೆ ಲಗ್ಗೆ ಹಾಕಿದರು.

ಮತ್ತೊಂದು ಸೆಮಿಫೈನಲ್‍ನಲ್ಲಿ ಕರ್ನಾಟಕದ ಸ್ನಿಗ್ಧಾ ಕಾಂತ 7-6(8), 6-0ರಿಂದ ಕಶ್ವಿ ಸುನಿಲ್ (ಕರ್ನಾಟಕ) ಅವರನ್ನು ಮಣಿಸಿ ಮುನ್ನಡೆದರು.
ಬಾಲಕರ ಡಬಲ್ಸ್‍ನಲ್ಲಿ ಶ್ರೀಕರ್ ಡೋಣಿ ಮತ್ತು ಕೆವಿನ್ ಸುರೇಶ್ ಜೋಡಿ ಪ್ರಶಸ್ತಿಯನ್ನು ಗೆದ್ದುಕೊಂಡರೆ, ಬಾಲಕಿಯರ ಡಬಲ್ಸ್‍ನಲ್ಲಿ ಮಹಾರಾಷ್ಟ್ರದ ನೈನಿಕಾ ಬೇಂದ್ರಂ ಮತ್ತು ಕೇರಳದ ಹರ್ಷಿಣಿ ಎಚ್. ಜೋಡಿ ಚಾಂಪಿಯನ್ ಆಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು