LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿಧಾನಪರಿಷತ್ ಚುನಾವಣೆ: 7 ಸ್ಥಾನಕ್ಕೆ ಹತ್ತಾರು ಮಂದಿ ಆಕಾಂಕ್ಷಿಗಳು

ಬೆಂಗಳೂರು: ಜೂನ್ 13 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‍ನಲ್ಲಿ ಟಿಕೆಟ್ ಪೈಪೋಟಿ ತೀವ್ರಗೊಂಡಿದೆ. ಕಾಂಗ್ರೆಸ್‍ನ ಶಾಸಕರ ಸಂಖ್ಯಾ ಬಲಾಬಲದ ಮೇಲೆ ಖಾಲಿಯಾಗಲಿರುವ 11 ಸ್ಥಾನಗಳ ಪೈಕಿ, 7 ಸ್ಥಾನ ಲಭಿಸಲಿದ್ದು, ಟಿಕೆಟ್‍ಗಾಗಿ ಪೈಪೋಟಿ ಆರಂಭವಾಗಿದೆ.

ಇನ್ನು ವಿಧಾನಸಭೆಯ ಶಾಸಕರ ಸಂಖ್ಯಾ ಬಲಾಬಲದ ಮೇಲೆ, 7 ಮಂದಿ ಕಾಂಗ್ರೆಸ್ ಸದಸ್ಯರು ಸುಲಭವಾಗಿ ಪರಿಷತ್ ಪ್ರವೇಶ ಪಡೆಯುವುದು ಸುಲಭ. ಆದರೆ ವಿಚಾರ ಏನೆಂದರೆ, 7 ಮಂದಿಯ ಪೈಕಿ 4 ಸ್ಥಾನಕ್ಕೆ ಈಗಾಗಲೇ ಅಭ್ಯರ್ಥಿಗಳು ಫಿಕ್ಸ್ ಆಗಿದ್ದಾರೆ ಎಂದು ಹೇಳಲಾಗಿದೆ.ಡಾ.ಯತೀಂದ್ರ ಸಿದ್ಧರಾಮಯ್ಯ, ಕೆ. ಗೋವಿಂದರಾಜು, ಎನ್.ಎಸ್. ಬೋಸರಾಜು ಹಾಗೂ ವಿಜಯ್ ಮುಳಗುಂದ್ ಅವರ ಹೆಸರು ಅಂತಿಮಗೊಂಡಿದೆ ಎನ್ನಲಾಗಿದೆ.

   

ಡಾ.ಯತೀಂದ್ರ ಸಿದ್ಧರಾಮಯ್ಯ, ಕ್ಷೇತ್ರ ತ್ಯಾಗ ಮಾಡಿದ ಬೆನ್ನಲ್ಲೇ, ಪರಿಷತ್ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂಬ ಚರ್ಚೆಗಳು ಪಕ್ಷದ ಪಡಸಾಲೆಯಲ್ಲಿ ಕೇಳಲಾರಂಭಿಸಿದೆ. ಈ ಹಿಂದೆ ಕ್ಷೇತ್ರ ತ್ಯಾಗ ಮಾಡುವಾಗಲೇ ತೆರೆಮರೆಯಲ್ಲಿ ಆಗಿದ್ದ ಮಾತುಕತೆಯ ಆಧಾರದ ಮೇಲೆ ಈಗ ಡಾ.ಯತೀಂದ್ರ ಸಿದ್ಧರಾಮಯ್ಯಗೆ ಪಕ್ಷ ಮಣೆ ಹಾಕಿದೆ ಎನ್ನಲಾಗಿದೆ.

ಇನ್ನು ಎನ್.ಎಸ್.ಬೋಸರಾಜು, ಹಾಲಿ ಸಚಿವರು ಜೊತೆಗೆ 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನ ತಂದುಕೊಟ್ಟಿರುವ ಮಾನದಂಡದ ಆಧಾರದಲ್ಲಿ ಅವಕಾಶ ನೀಡಲಾಗುತ್ತಿದೆ.ಇತ್ತ ಕೆ. ಗೋವಿಂದರಾಜು, ಹಾಲಿ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಬಹಳ ಪ್ರಭಾವಿ, ಜೊತೆಗೆ ಎಲ್ಲಾ ಬಣಗಳಿಗೂ ಬೇಕಾಗಿರುವ ವ್ಯಕ್ತಿ. ಹೀಗಾಗಿ, ಅವರನ್ನು ಮತ್ತೊಮ್ಮೆ ಪರಿಷತ್‍ಗೆ ಆಯ್ಕೆ ಮಾಡುವ ಜವಾಬ್ದಾರಿ ಪಕ್ಷದ ಮೇಲಿದೆ.

                  

ಇನ್ನು ವಿಜಯ್ ಮುಳಗುಂದ್. ಡಿಸಿಎಂ ಡಿ.ಕೆ.ಶಿವಕುಮಾರ್‍ಗೆ ಬೇಕಾದ ಆತ್ಯಾಪ್ತರಾಗಿದ್ದು, ಡಿ.ಕೆ.ಶಿವಕುಮಾರ್ ಸಂಕಷ್ಟದ ಸಮಯದಲ್ಲಿ ಜೊತೆಗಿದ್ದರು ಎಂಬ ಮಾನದಂಡದ ಆಧಾರದಲ್ಲಿ ಅವರಿಗೂ ಅವಕಾಶ ನೀಡುವುದು ಬಹುತೇಕ ಖಚಿತ ಎಂಬ ಮಾಹಿತಿ ಹೊರಬಿದ್ದಿದೆ.ಹೀಗೆ 7 ಮಂದಿಯ ಪೈಕಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ರಾಜ್ಯ ಕಾಂಗ್ರೆಸ್‍ನ ನಾಯಕರು ಅಂತಿಮಗೊಳಿಸಿದ್ದಾರೆ. ಎನ್ನಲಾಗಿದ್ದು, ಇನ್ನುಳಿದ ಮೂರು ಸ್ಥಾನಕ್ಕೆ ಈಗ ಭಾರೀ ಪೈಪೋಟಿ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‍ನಾಥ್, ವಿನಯ್ ಕಾರ್ತಿಕ್, ಪಕ್ಷಕ್ಕಾಗಿ ದುಡಿದ ಜಿಲ್ಲಾಧ್ಯಕ್ಷರುಗಳು ರೇಸ್‍ನಲ್ಲಿದ್ದಾರೆ. ಬಾಕಿಯಿರುವ ಮೂರು ಸ್ಥಾನಕ್ಕೆ ಹತ್ತಾರು ಮಂದಿಯ ಹೆಸರು ರೇಸ್‍ಗೆ ಬಂದಿದ್ದು, ಈ ಮೂರು ಸ್ಥಾನಗಳ ಆಯ್ಕೆ ಹಿನ್ನೆಲೆಯಲ್ಲಿ, ಮೇ 25 ಅಥವಾ 26 ರಂದು ಕಾಂಗ್ರೆಸ್ ಉಸ್ತುವಾರಿ ರಣ್‍ದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ.ಆ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳು ಯಾರಾಗಬೇಕೆಂದು ಕಾಂಗ್ರೆಸ್‍ನ ಹೈಕಮಾಂಡ್ ನಾಯಕರು ನಿರ್ಧರಿಸಲಿದ್ದಾರೆ ಕಾಂಗ್ರೆಸ್‍ನ ಉನ್ನತ ಮೂಲಗಳಿಂದಲೇ ಮಾಹಿತಿ ಲಭ್ಯವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು