ಫ್ಲೋರಿಡಾ: ಅಮೆರಿಕದ ದಕ್ಷಿಣ ಫ್ಲೋರಿಡಾದ ಜನನಿಬಿಡ ವಸತಿ ಪ್ರದೇಶದ ಬಳಿ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ.ಹಾರಾಟ ನಡೆಸುತ್ತಿದ್ದ ಖಾಸಗಿ ಬಿಸಿನೆಸ್ ಜೆಟ್ ವಿಮಾನವೊಂದು ಹಠಾತ್ತನೆ ನಿಯಂತ್ರಣ ತಪ್ಪಿ ನೇರವಾಗಿ ನೆಲಕ್ಕೆ ಅಪ್ಪಳಿಸಿ, ಬೆಂಕಿಯ ಉಂಡೆಯಾಗಿ ಸ್ಫೋಟಗೊಂಡಿದೆ. ಈ ಭೀಕರ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲಾ ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಮೆರಿಕಾದ ಅಧಿಕಾರಿಗಳು ತಿಳಿಸಿದ್ದಾರೆ.ಜನನಿಬಿಡ ರಸ್ತೆಯ ಸಮೀಪ ಈ ದುರಂತ ಸಂಭವಿಸಿದ್ದು, ವಿಮಾನವು ಮನೆಗಳ ಮೇಲೆ ಬೀಳುವ ಸ್ವಲ್ಪದರಲ್ಲೇ ರಸ್ತೆಯ ಪಕ್ಕದಲ್ಲಿ ಅಪ್ಪಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.ಕಾರುಗಳಲ್ಲಿ ಪ್ರಯಾಣಿಸುತ್ತಿದ್ದವರು ರೆಕಾರ್ಡ್ ಮಾಡಿರುವ ದೃಶ್ಯಗಳಲ್ಲಿ, ಆಕಾಶದಿಂದ ವೇಗವಾಗಿ ಕೆಳಕ್ಕೆ ಧಾವಿಸಿದ ವಿಮಾನ ರಸ್ತೆಯ ಸಮೀಪ ಅಪ್ಪಳಿಸಿ ಭಾರೀ ಸ್ಫೋಟದೊಂದಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ.ವಿಮಾನ ಪತನಗೊಂಡ ಸ್ಥಳದಲ್ಲಿ ಬೃಹತ್ ಕುಳಿ ನಿರ್ಮಾಣವಾಗಿದ್ದು, ಸುತ್ತಮುತ್ತಲಿನ ರಸ್ತೆಯ ಕಾಂಕ್ರೀಟ್ ತುಣುಕುಗಳ ನಡುವೆ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳದಲ್ಲಿ ದಟ್ಟವಾದ ಕಪುö್ಪ ಹೊಗೆ ಆವರಿಸಿತ್ತು.