LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ 

ಕೊರಿಯೋಗ್ರಾಫರ್ ಶೇಖರ್ ಮಾಸ್ಟರ್ ಪಾರು


ಹೈದರಾಬಾದ್: ತೆಲುಗಿನ ಖ್ಯಾತ ನೃತ್ಯ ನಿರ್ದೇಶಕ (ಕೊರಿಯೋಗ್ರಾಫರ್) ಶೇಖರ್ ಮಾಸ್ಟರ್ ಅವರು ರಾತ್ರಿ ಶೂಟಿಂಗ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. 'ಪುಷ್ಪ 2', 'ದೇವಾರ: ಭಾಗ 1' ಮತ್ತು 'ಗುಂಟೂರು ಕಾರಂ' ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗಳಿಗೆ ಕೆಲಸ ಮಾಡಿರುವ ಶೇಖರ್ ಮಾಸ್ಟರ್ ಮತ್ತು ಅವರೊಂದಿಗೆ ಇದ್ದ ಮೂವರು ಪ್ರಯಾಣಿಕರು ಗುರುವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ರಂಗಾರೆಡ್ಡಿ ಜಿಲ್ಲೆಯ ಶಂಷಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಗೊಲ್ಲಪಲ್ಲಿ ಗ್ರಾಮದ ಬಳಿ ಬರುತ್ತಿದ್ದಾಗ ಲಾರಿಯೊಂದು ಅವರ ಕಾರಿಗೆ ಹಿಂಬಾಲಿಸಿ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಂಷಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಪಘಾತದ ಸುದ್ದಿ ತಿಳಿದು ಆತಂಕಗೊAಡಿದ್ದ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಗೆ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್ (ಘಿ) ಮೂಲಕ ಶೇಖರ್ ಮಾಸ್ಟರ್ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತಾನು ಶೇಖರ್ ಮಾಸ್ಟರ್ ಜೊತೆ ಮಾತನಾಡಿದ್ದು, ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಮತ್ತು ಅಂದೇ ಸಂಜೆ 'ಕಾಕ' ಚಿತ್ರದ ಶೂಟಿಂಗ್‌ಗೂ ಮರಳಲಿದ್ದಾರೆ ಎಂದು ಜಾನಿ ಮಾಸ್ಟರ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST