ಬೆಂಗಳೂರು: "ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಇಂದು ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, "ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆ-ದಿರುವ ಬಗ್ಗೆ ಮಾಹಿತಿ ನೀಡಿದರು.