LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯದಲ್ಲಿ ರಸ್ತೆಯಲ್ಲಿನ ಅವ್ಯವಸ್ಥೆ | ಸರ್ಕಾರದ ವಿರುದ್ಧ ಸಿಡಿದ ಬಿಜೆಪಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿತ್ಯ ಗುಂಡಿಗಳಿAದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಅದೇ ರೀತಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಇದೆ. ಸರ್ಕಾರ ಅಭಿವೃದ್ಧಿ ಕಾರ್ಯ ಮಾಡದೇ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು ನಗರದ ಬಸವನಗುಡಿ, ಗೋವಿಂದರಾಜನಗರ, ವಿಜಯನಗರ, ಬಿಟಿಎಂ ಲೇಔಟ್ ಕ್ಷೇತ್ರಗಳಲ್ಲಿ ರಸ್ತೆ ತಡೆ ನಡೆಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿದಿನ ೧ ಗಂಟೆ ರಸ್ತೆ ತಡೆ ನಡೆಸಿ ಅಥವಾ ಗುಂಡಿ ಬಿದ್ದಿರೋ ಜಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದರೊಂದಿಗೆ ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ.

ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾಯಾ ಸ್ಥಳೀಯ ನಾಯಕರ ನೇತೃತ್ವದಲ್ಲಿ ರಸ್ತೆ ರೋಕೋ (ರಸ್ತೆ ತಡೆ) ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಬೆಂಗಳೂರು ನಗರದ ಮಹಾಲಕ್ಷಿ÷್ಮ ಲೇಔಟ್ ಕ್ಷೇತ್ರದಲ್ಲಿ ರಸ್ತೆಗುಂಡಿ ಸಂಬAಧ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಸಲಾಗುತ್ತಿದೆ. ಕಠೀರವ ಸ್ಟುಡಿಯೋ ಬಳಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಠೀರವ ಸ್ಟುಡಿಯೋ ರಸ್ತೆ, ಸುಮ್ಮನಹಳ್ಳಿ, ನಾಗರಭಾವಿ, ಕಾಮಾಕ್ಷಿಪಾಳ್ಯ, ಮಾಗಡಿ ರಸ್ತೆಗಳು ಗುಂಡಿಮಯವಾಗಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ. ಗುಂಡಿ ಮುಚ್ಚಿ ಜನರ ಪ್ರಾಣ ಉಳಿಸಿ, ಗುಂಡಿಗಳ ಊರು ಮಾಡಿದ ಕಾಂಗ್ರೆಸ್ ಸರ್ಕಾರ ಎಂದು ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದ್ದಾರೆ.

ರಸ್ತೆ ಗುಂಡಿಗಳ ಮುಂದೆ ಕುಳಿಯು ಬಾಯಿ ಬಾಯಿ ಬಡಿದುಕೊಳ್ಳುತ್ತಿರುವ ಪ್ರತಿಭಟನಾಕಾರರು, ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ. ಮಾಜಿ ಶಾಸಕ ನೇಲ ನರೇಂದ್ರ ಬಾಬು, ಉಪ ಮೇಯರ್ ಹರೀಶ್ ಸಹ ಗುಂಡಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾರೆ.

ಯಲಹಂಕದಲ್ಲೂ ಇಂದು ಬೆಳಿಗ್ಗೆ ಯಲಹಂಕ ಹಳೆ ನಗರ, ಕೆಂಪೇಗೌಡ ವಾರ್ಡ್ ನಂ.೦೧ ರಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ, ಅವೈಜ್ಞಾನಿಕವಾಗಿ ಹಾಗೂ ಕಳಪೆ ಡಾಂಬರೀಕರಣ ಕೆಲಸ ಮಾಡಿದ್ದು, ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಈಗಾಗಲೇ ಗುಂಡಿಗಳು ಬಿದ್ದಿದೆ, ಇದರಿಂದ ಸಾಕಷ್ಟು ರಸ್ತೆ ಅಪಘಾತಗಳು ಹಾಗೂ ಸಾವುಗಳು ಸಂಭವಿಸಿವೆ, ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆದು ಗುಂಡಿ ಮುಚ್ಚುವ ಅಭಿಯಾನ ವನ್ನು ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಸ್.ಆರ್.ವಿಶ್ವನಾಥ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನದಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು..

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು