LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕಾಂಗ್ರೆಸ್ ಬಿಜೆಪಿಗೆ ಪ್ರತಿಷ್ಠೆಯಾಗಿದ್ದ ಉಪಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯಾಗಿ ಪರಿಣಮಿಸಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ಮುಖಂಡ ಶಾಮನೂರು ಶಿವ ಶಂಕರಪ್ಪ ಅವರ ನಿಧನದಿಂದ ಉಪಚುನಾವಣೆ ಎದುರಾಗಿತ್ತು. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಸಂಸದರಾಗಿದ್ದ ಎಚ್.ವೈ. ಮೇಟಿ ಅವರ ನಿಧನದಿಂದ ಉಪಚುನಾವಣೆ ಎದುರಾಗಿತ್ತು.
ಚುನಾವಣೆ ಘೋಷಣೆಯಾದ ಮೇಲೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿಗಧಿತ ದಿನಾಂಕಕ್ಕಿAತ ಎರಡು ಮೂರು ದಿನಗಳ ಮುಂಚೆಯೇ ಪ್ರಕಟಿಸಿತ್ತು. ಆದರೆ ಕಾಂಗ್ರೆಸ್ ಪಕ್ಷ ಕಡೆಯ ಗಳಿಗೆ ವರೆಗೂ ಅಭ್ಯರ್ಥಿಗಳ ಘೋಷಣೆ ಮಾಡಲು ಹರಸಾಹಸ ಪಡುವಂತಾಗಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂದು ಹಲವರು ಹಾಗೂ ಮತ್ತು ಕೆಲವರು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದುಕುಳಿತಿದ್ದರು.
ಇದರಿಂದಾಗಿ ಟಿಕೆಟ್ ಘೋಷಣೆಗೆ ಗೊಂದಲ ಉಂಟಾಗಿ ಟಿಕೆಟ್ ಘೋಷಣೆ ಕಗ್ಗಂಟಾಗಿತ್ತು. ಕೊನೆಗೆ ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್‌ಎಸ್ ಮಲ್ಲಿಕಾರ್ಜುನರವರ ಪುತ್ರ ಸಮರ್ಥ ಶಾಮನೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಯಿತು. ಇದರಿಂದಾಗಿ ಆ ಪಕ್ಷದಲ್ಲಿ ಗೊಂದಲ ಉಂಟಾಗಿ ಕೆಲವು ಮುಸ್ಲಿಂ ಸಮುದಾಯದವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಕಣದಲ್ಲಿ ಉಳಿದರು. ಅಬ್ದುಲ್ ಜಬ್ಬಾರ್ ಎಂಬುವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮವೂ ಜರುಗಿಸಲಾಯಿತು. ಸಚಿವ ಜಮೀರ್ ಅಹಮ್ಮದ್ ಅವರು ಸಂಪೂರ್ಣವಾಗಿ ಕೇರಳ ವಿಧಾನಸಭಾ ಚುನಾವಣೆಯಲ್ಲೇ ತೊಡಗಿಸಿಕೊಂಡು ಒಂದು ದಿನದ ಮಟ್ಟಿಗೆ ಮಾತ್ರ ದಾವಣಗೆರೆ ಬಂದು ಹೋದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು