LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹಿರಿಯ ಶಾಸಕರು ದೆಹಲಿಗೆ ಮಂತ್ರಿ ಸ್ಥಾನ ನೀಡುವಂತೆ ವರಿಷ್ಠರನ್ನು ಒತ್ತಾಯಿಸಲಿರುವ ನಿಯೋಗ

ಬೆಂಗಳೂರು: ಪಕ್ಷ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಹಲವರು ಶಾಸಕರಾಗಿ, ಮಂತ್ರಿಗಳಾಗಿ ಅಧಿಕಾರ ಅನುಭವಿಸುತ್ತಿದ್ದಾರೆ. ನಮಗೂ ಮಂತ್ರಿ ಸ್ಥಾನ ಕೊಡಿ ಎಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಲು ಹಿರಿಯ ಶಾಸಕರ ನಿಯೋಗವೊಂದು ದೆಹಲಿಗೆ ತೆರಳಲು ಸಜ್ಜಾಗಿದೆ.
ನಿನ್ನೆ ರಾತ್ರಿ ಬೆಂಗಳೂರಿನ ಪ್ರತಿಷ್ಠಿತ ವಸತಿ ಗೃಹವೊಂದರಲ್ಲಿ ಸದಸ್ಯರಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕರು ಸುದೀರ್ಘಕಾಲ ಈ ಸಂಬAಧ ಚರ್ಚೆ ನಡೆಸಿದ್ದಾರೆ.
ಈಗಾಗಲೇ ಮಂತ್ರಿಗಳಾಗಿರುವವರು ಸುದೀರ್ಘ ಕಾಲ ಅಧಿಕಾರ ಅನುಭವಿಸಿದ್ದಾರೆ. ಉಳಿದಿರುವ ಅವಧಿಗೆ ನಮಗೂ ಮಂತ್ರಿಗಳಾಗಲು ಅವಕಾಶ ಕಲ್ಪಿಸಬೇಕು ಎಂದು ಹಿರಿಯ ಶಾಸಕರು ಒತ್ತಾಯಿಸಲಿದ್ದಾರೆ. ಬೋರಿಂಗ್ ಕ್ಲಬ್‌ನಲ್ಲಿ ಸದಸ್ಯರಿದ್ದ ಹಿರಿಯ ಶಾಸಕರು ಸುದೀರ್ಘವಾಗಿ ಚರ್ಚಿಸಲಿದ್ದಾರೆ. ಈ ವಿಷಯವನ್ನು ಸಾಗರದ ಕಾಂಗ್ರೆಸ್ ಪಕ್ಷದ ಶಾಸಕ ಗೋಪಾಲಕೃಷ್ಣ ಬೇಳೂರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ನಾವು ಸಭೆ ಸೇರಿ ಪರಸ್ಪರಸಮಾಲೋಚನೆ ನಡೆಸಿದ್ದೇವೆ. ಸೋಮವಾರ ರಾತ್ರಿ ದೆಹಲಿಗೆ ತೆರಳಲಿದ್ದೇವೆ. ಪಕ್ಷದ ವರಿಷ್ಠರನ್ನು ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಲಿದ್ದೇವೆ. ಈಗಾಗಲೇ ಹಲವರು ಅಧಿಕಾರ ಅನುಭವಿಸುತ್ತಿದ್ದಾರೆ. ನಮಗೂ ಅವಕಾಶ ಕೊಡಿ ಎಂದು ಬೇಡಿಕೆ ಇಡಲಿದ್ದೇವೆ ಎಂದು ತಿಳಿಸಿದ್ದಾರೆ. ತಾವು ದೆಹಲಿಗೆ ಹೋಗುವ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿ ಹೋಗುತ್ತೇವೆ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಬದಲಾವಣೆ ಸಂಬAಧ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಹೊಸದಾಗಿ ಹಿರಿಯ ಶಾಸಕರ ನಿಯೋಗ ದೆಹಲಿಗೆ ತೆರಳುವುದು ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು