LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಗೆಯ ಹೊನಲು ಹರಿಸಿದ `ತಾಳಿಯ ತಕರಾರು' ನಾಟಕ

ಹೊಸಕೋಟೆ: ತಾಲೂಕು ಜನಪದರು ಸಾಂಸ್ಕøತಿಕ ವೇದಿಕೆ ವತಿಯಿಂದ ಸಮೀಪದ ನಿಂಬೆಕಾಯಿಪುರದ ಅಭಯ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿರುವ ರಂಗಮಂದಿರದಲ್ಲಿ ಆಯೋಜಿಸಿದ್ದ 2023ರ ಶಿವಸಂಚಾರ ಸಾಣೆ ಹಳ್ಳಿಯ ತಿರುಗಾಟವನ್ನು ವೇದಿಕೆ ಅಧ್ಯಕ್ಷ ಕೆ.ವಿ.ವೆಂಕಟರಮಣಪ್ಪ @ ಪಾಪಣ್ಣ ಕಾಟಂನಲ್ಲೂರು ಉದ್ಘಾಟಿಸಿದರು. ಮೂರು ದಿನಗಳ ನಾಟಕೋತ್ತರಲ್ಲಿ ಈ ಬಾರಿ ವಿಶೇಷ ನಾಟಕಗಳು ಪ್ರದರ್ಶನಗೊಳ್ಳುತ್ತಿದ್ದು ರಂಗಾಸಕ್ತರು ಪಾಲ್ಗೊಂಡು ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದಾರೆ.

ವೃತ್ತಿ ರಂಗಭೂಮಿಯ ಪ್ರಸಿದ್ಧ ನಾಟಕ ವಿಜಯಪುರದ ಕೆ.ಎನ್.ಸಾಳುಂಕೆ ಕೃತಿ “ತಾಳಿಯ ತಕರಾರು” ಬಿಸ್ಮಿಲ್ಲಾ ಖಾನ್ ರಾಷ್ಟ್ರೀಯ ಪುರಸ್ಕಾರ ಪಡೆದಿದ್ದು, ಕನ್ನಡಕ್ಕೆ ಪ್ರಥಮ ಬಾರಿಗೆ ಮಾಲತೇಶ ಬಡಿಗೇರರ ನಿರ್ದೇಶನದಲ್ಲಿ ಪ್ರದರ್ಶಿಸಲಾಯಿತು. ಸಾಮಾಜಿಕ ವಿಷಯವನ್ನೊಳಗೊಂಡ ನಾಟಕವು ನೆರೆದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿತು.

ವೇದಿಕೆಯು ರಂಗಕಲೆಯ ಬಗ್ಗೆ ಜನರಲ್ಲಿ ಆಸಕ್ತಿ ಮೂಡಿಸಲು ವಿಭಿನ್ನವಾದ ಪ್ರಯೋಗಗಳನ್ನು ಮಾಡುತ್ತಿದ್ದು, ರಾಜ್ಯದ ಪ್ರಖ್ಯಾತ ರಂಗಸಂಸ್ಥೆಗಳ ಕಲಾವಿದರಿಂದ ನಾಟಕ ಪ್ರದರ್ಶನಗಳನ್ನು ಆಯೋಜಿಸುತ್ತಿದೆ. ರಂಗಕಲೆಯು ಸಮಾಜದ ವಸ್ತುಸ್ಥಿತಿಯನ್ನು ಪ್ರತಿಬಿಂಬಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಯುವಕರಿಗೆ ರಂಗಾಭಿನಯದ ಬಗ್ಗೆ ತರಬೇತಿ ನೀಡುವ ಕಾರ್ಯಕ್ರಮಗಳನ್ನು ಸಹ ವೇದಿಕೆ ಏರ್ಪಡಿಸುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಖ್ಯಾತ ನಿರ್ದೇಶಕ ಮಾಲತೇಶ ಬಡಿಗೇರರನ್ನು ಮತ್ತು ಶಿವ ಸಂಚಾರದ ವ್ಯವಸ್ಥಾಪಕರಾದ ಜೀವನ್‍ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆ ಪದಾಧಿಕಾರಿಗಳಾದ ಜಗದೀಶ್ ಕೆಂಗನಾಳ್, ಓ. ಸುರೇಶ. ಮಮತ. ಚಲಪತಿ. ಮುನಿರಾಜು ಅಗ್ರಹಾರ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು