LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಫೆಬ್ರವರಿಯಲ್ಲಿ ತೆರೆಗೆ ಬರಲಿದೆ "ಪುರುಷೋತ್ತಮನ ಪ್ರಸಂಗ"

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಪುರುಷೋತ್ತಮನ ಪ್ರಸಂಗ" ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.

ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ದೇವದಾಸ್ ಕಾಪಿಕಾಡ್, ಕನ್ನಡದಲ್ಲಿ ನನಗೆ ಮೊದಲ ಚಿತ್ರವನ್ನು ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. "ಪುರುಷೋತ್ತಮನ ಪ್ರಸಂಗ" ಕೌಟುಂಬಿಕ ಕಥಾಹಂದರ ಹೊಂದಿರುವ ನೈಜಘಟನೆ ಆಧಾರಿತ ಚಿತ್ರ. "ಪುರುಷೋತ್ತಮ" ನ ಪಾತ್ರದಲ್ಲಿ ನಿರ್ಮಾಪಕ ರವಿಕುಮಾರ್ ಅವರ ಪುತ್ರ ಅಜಯ್ ಅಭಿನಯಿಸಿದ್ದಾರೆ.

ಈ ಪಾತ್ರಕ್ಕೆ ಹೇಳಿಮಾಡಿಸಿದ ನಟ ಅಜಯ್. ಹೊರದೇಶದಲ್ಲಿ ಸಿನಿಮಾ ಕುರಿತು ಅಧ್ಯಯನ ಮಾಡಿ ಬಂದಿದ್ದಾರೆ. ರಿಷಿಕಾ ನಾಯ್ಕ್ ಈ ಚಿತ್ರದ ನಾಯಕಿ. ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ನಾನು ಕೂಡ ನಟಿಸಿದ್ದೇನೆ. ನನ್ನ ಮಗ ಅರ್ಜುನ್ ಸಹ ನಿರ್ದೇಶನ ಮಾಡಿದ್ದಾರೆ. ನಕುಲ್ ಅಭಯಂಕರ್ ಅವರ ಸಂಗೀತ ನಿರ್ದೇಶನದಲ್ಲಿ ನಾಲ್ಕು ಹಾಡುಗಳು ಮೂಡಿಬಂದಿದೆ.

ಜಯಂತ ಕಾಯ್ಕಿಣಿ, ದೊಡ್ಡರಂಗೇ ಗೌಡ, ವಿ.ನಾಗೇಂದ್ರ ಪ್ರಸಾದ್ ಹಾಗೂ ನಾನು ಹಾಡುಗಳನ್ನು ಬರೆದಿದ್ದೇವೆ. ವಿಷ್ಣು ಈ ಚಿತ್ರದ ಛಾಯಾಗ್ರಾಹಕರು. ಮಂಗಳೂರು ಹಾಗೂ ದುಬೈನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಫೆಬ್ರವರಿ ಮಧ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

ನಾನು ಈ ಹಿಂದೆ "ಕಿಸ್", " ಮೆಹಬೂಬ ", "ನಾಟ್ ಔಟ್" ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾಯಕನಾಗಿ ನಟಿಸಿರುವ ಮೊದಲ. ಚಿತ್ರವಿದು. ತುಳು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರವೂ ಚೆನ್ನಾಗಿದೆ ಎಂದರು ನಾಯಕ ಅಜಯ್.ನಾಯಕಿ ರಿಷಿಕಾ ನಾಯ್ಕ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕರಾದ ವಿ.ರವಿಕುಮಾರ್, ಶಂಶುದ್ದೀನ್ ಚಿತ್ರದ ಕುರಿತು ಮಾತನಾಡಿದರು. ಶರ್ಮಿಳಾ ಕಾಪಿಕಾಡ್ ಚಿತ್ರಕ್ಕೆ ಶುಭ ಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು