LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮ್ಯಾರೇಜ್ ಪಾರ್ಟಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ!

ಯುವ ನಿರ್ದೇಶಕ ಚಯನ್ ಶೆಟ್ಟಿ ನಿರ್ದೇಶನ ಹಾಗೂ ಶ್ರೀ ವಾರಾಹಿ ಫಿಲಂಸ್ ಬ್ಯಾನರಿನಡಿಯಲ್ಲಿ ಸಂತೋಷ್ ವಿ ನಿರ್ಮಾಣ ಮಾಡಿರುವ `ಮ್ಯಾರೇಜ್ ಪಾರ್ಟಿ' ಚಿತ್ರವೀಗ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನಿಹದಲ್ಲಿದೆ. ಇದೇ ಹೊತ್ತಿನಲ್ಲಿ ಚಿತ್ರತಂಡ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಸಿನಿಮಾದ ಆಂತರ್ಯವನ್ನು ತೆರೆದಿಡುವಂತೆ ಕಾಣಿಸುವ ಈ ಪೋಸ್ಟರ್ ಮೂಲಕ ಮ್ಯಾರೇಜ್ ಪಾರ್ಟಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ.
ಈ ಹಿಂದೆ ಬಿಗ್ ಬಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಚಯನ್ ಶೆಟ್ಟಿ. ಆ ಚಿತ್ರಕ್ಕೆ ಪ್ರೇಕ್ಷಕರ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿತ್ತು. ಅದಾದ ನಂತರ ಎರಡನೇ ಚಿತ್ರದ ವಿಚಾರದಲ್ಲಿ ಸಂಪೂರ್ಣವಾಗಿ ಭಿನ್ನ ಪಥದತ್ತ ಚಯನ್ ಹೊರಳಿಕೊಂಡಿದ್ದಾರೆ. ಅದರ ಫಲವಾಗಿಯೇ ಗಟ್ಟಿ ಕಥೆಯೊಂದಿಗೆ, ಹಾಸ್ಯಪ್ರಧಾನವಾಗಿರುವ ಮ್ಯಾರೇಜ್ ಪಾರ್ಟಿ ಚಿತ್ರ ರೂಪುಗೊಂಡಿದೆ.
ಈಗಾಗಲೇ ಒಂದಷ್ಟು ತುಳು ಸಿನಿಮಾಗಳಲ್ಲಿ ನಟಿಸುವ ಮೂಲಕ ಗಮನ ಸೆಳೆದಿರುವ ವಿನೀತ್ ಕುಮಾರ್ ಮ್ಯಾರೇಜ್ ಪಾರ್ಟಿ ಮೂಲಕ ನಾಯಕನಾಗಿ ಬಡ್ತಿ ಪಡೆದಿದ್ದಾರೆ. ಕರಾವಳಿ ಭಾಗದಲ್ಲಿ ಘಟಿಸುವ ರಸವತ್ತಾದ ಕಥಾನಕದೊಂದಿಗೆ ಮ್ಯಾರೇಜ್ ಪಾರ್ಟಿ ಬಿಡುಗಡೆಗೆ ಅಣಿಗೊಂಡಿದೆ. ಶ್ರೀಕಾಂತ್ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ, ಸು ಫ್ರಂ ಸೋ ಖ್ಯಾತಿಯ ನಿತಿನ್ ಶೆಟ್ಟಿ ಸಂಕಲನ, ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ಸಾಹಿತ್ಯ, ಪ್ರಕಾಶ್ ತುಮಿನಾಡು, ದೀಪಕ್ ರೈ, ನವೀನ್ ಡಿ ಪಡೀಲ್, ರಕ್ಷಿತಾ, ನಮಿತಾ ಕಿರಣ್, ರಾಮ್‌ದಾಸ್, ರಘು ಪಾಂಡೇಶ್ವರ, ಪುಷ್ಪರಾಜ್ ಬೋಳಾರ್, ಜ್ಯೋತಿಷ್ ಶೆಟ್ಟಿ, ರಾಧಾಕೃಷ್ಣ, ಪಿಡಿ ಸತೀಶ್, ಭೀಮ್ ರಾವ್ ಮುಂತಾದವರ ತಾರಾಗಣವಿರುವ ಈ ಚಿತ್ರ ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ತೆರೆಗಾಣಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು