LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಾಸ್" ಚಿತ್ರದ ಫಸ್ಟ್ ಲುಕ್ ಟೀಸರ್ ಬಂತು

ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ "ಬಾಸ್" ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ.
"ಬಾಸ್", ಕ್ರೈಂ ಥ್ರಿಲ್ಲರ್ ಆಧಾರಿತ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇಂದು ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಟ್ರೇಲರ್ ಸಹ ಅನಾವರಣವಾಗಲಿದೆ. ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ತನುಷ್ ಶಿವಣ್ಣ ಚಿತ್ರದ ನಾಯಕನಾಗಿ ನಟಿಸಿದ್ದು, ಮೋನಿಕಾ ಗೌಡ ಹಾಗೂ ಪಾಯಲ್ ಚಂಗಪ್ಪ ನಾಯಕಿಯರಾಗಿ ಅಭಿನಯಿಸಿದ್ದಾರೆ. "ಬಾಸ್" ಚಿತ್ರಕ್ಕೆ "ಸತ್ಯಮೇವ ಜಯತೇ" ಎಂಬ ಅಡಿಬರಹವಿದೆ. ಡೆವಿ ಸುರೇಶ್ ಸಂಗೀತ ನಿರ್ದೇಶನ, ಶರತ್ ಎನ್ ಆರ್ ಪುರ ಛಾಯಾಗ್ರಹಣ ಹಾಗೂ ಮಹೇಶ್ ರೆಡ್ಡಿ ಅವರ ಸಂಕಲನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ವಿ.ಲವ ತಿಳಿಸಿದರು.
ನನ್ನ ಮೊದಲ ಚಿತ್ರದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಮಾತನಾಡಿದ ನಾಯಕ ತನುಷ್ ಶಿವಣ್ಣ, ನಮ್ಮ ಚಿತ್ರದ ಫಸ್ಟ್ ಲುಕ್ ಟೀಸರ್ ಅನಾವರಣವಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಈ ಚಿತ್ರದಲ್ಲಿ ನನ್ನದು ಸಮಾಜಕ್ಕೆ ಬೇಕಾಗಿರುವ ವ್ಯಕ್ತಿಯ ಪಾತ್ರ. ಚಿತ್ರದಲ್ಲಿ ಎರಡು ಹಾಡುಗಳಿದೆ. ಅನಿಲ್ ಪಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿ.ಲವ ನಿರ್ದೇಶಿಸಿದ್ದಾರೆ. ಚಿತ್ರತಂಡದ ಸಹಕಾರದಿಂದ "ಬಾಸ್" ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು. ಚಿತ್ರದಲ್ಲಿ ನಟಿಸಿರುವ ಡಾ||ವಿಜಯೇಶ್, ವೀರೇನ್ ಕೇಶವ್, ಭೀಷ್ಮ ರಾಮಯ್ಯ, ಲಕ್ಷ್ಮಣ್ ಪೂಜಾರಿ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಶರತ್ ಎನ್ ಆರ್ ಪುರ ಸೇರಿದಂತೆ ಅನೇಕ ತಂತ್ರಜ್ಞರು "ಬಾಸ್" ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು